ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) RTO ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ.

ನಗರದ ಹೊರವಲಯದ ಜಿಲ್ಲಾ ಪಂಚಾಯತ್ ಸಮೀಪವಿರುವ ಆರ್ ಟಿ ಓ ಕಚೇರಿ ಮೇಲೆ ಎರಡು ಟಾಟಾ ಸುಮೋ ವಾಹನದಲ್ಲಿ ಬಂದಿರುವ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಆರ್. ಟಿ. ಓ ಕಚೇರಿಯಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಾಗಿದ್ದು, ಅಧಿಕಾರಿಗಳು ದಾಳಿ ಮಾಡುತ್ತಿದ್ದಂತೆಯೇ ಕಚೇರಿಯಲ್ಲಿದ್ದ ದಲ್ಲಾಳಿಗಳು ಎಸ್ಕೇಪ್ ಆಗಿದ್ದಾರೆ. ಇನ್ನು ಆರ್ ಟಿ ಓ ಕಚೇರಿಯಲ್ಲಿ ಲಂಚ ನೀಡದಿದ್ದರೆ ಯಾವ ಕೆಲಸಗಳು ಆಗುವುದಿಲ್ಲ ಎಂಬ ಆರೋಪವೂ ಕೂಡ ಸಾರ್ವಜನೀಕರ ವಲಯದಲ್ಲಿ ಕೇಳಿಬಂದಿದೆ.
ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಸಿಗಲಿದೆ 10,000 ಸ್ಕಾಲರ್ ಶಿಪ್; ಈಗಲೇ ಅರ್ಜಿ ಸಲ್ಲಿಸಿ












