ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಬೀರೂರು ಮಹಾನವಮಿ ಬಯಲಿನಲ್ಲಿ ಇಂದು (ಬುಧವಾರ) ಮುಂಜಾನೆ 4:42 ಕ್ಕೆ ಇತಿಹಾಸ ಪ್ರಸಿದ್ದ ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕದ ನುಡಿಮುತ್ತು ಹೊರಬಿದ್ದಿದೆ. ದಶರಥ ಪೂಜಾರ್ ಅವ್ರಿಂದ ಅವರು ಈ ಭವಿಷ್ಯವಾಣಿಯನ್ನು ನುಡಿದಿದ್ದಾರೆ.
ಇದನ್ನೂ ಓದಿ; ಐಒಸಿಎಲ್ ನಲ್ಲಿ ಉದ್ಯೋಗಾವಕಾಶ; 1720 ಹುದ್ದೆಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಇಲ್ಲಿದೆ ಮಾಹಿತಿ

“ಇಟ್ಟ ರಾಮನ ಬಾಣ ಹುಸಿಯಿಲ್ಲ, ಸುರರು ಅಸೂರರು ಕಾದಾಡಿದರು. ಭಕ್ತ ಕೋಟಿಗೆ ಮಂಗಳವಾಯಿತು. ಶಾಂತಿಯ ಮಂತ್ರ ಪಠಿಸಿದರು. ಸರ್ವರು ಎಚ್ಚರದಿಂದ ಇರಬೇಕು ಪರಾಕ್” ಎಂದು ಚಿಕ್ಕಮಗಳೂರು ಜಿಲ್ಲೆಯ ಇತಿಹಾಸ ಪ್ರಸಿದ್ಧ ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕದ ನುಡಿಮುತ್ತು ಬುಧವಾರ ಹೊರಬಿದ್ದಿದೆ.
ಇದನ್ನೂ ಓದಿ; 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
ಬೀರೂರು ಪಟ್ಟಣದಲ್ಲಿರುವ ಮೈಲಾರಲಿಂಗ ಸ್ವಾಮಿ ದೇವಸ್ಥಾನದಲ್ಲಿ ರಾತ್ರಿಯಿಂದ ಹೂವಿನ ಪಲಕ್ಕಿಯೊಂದಿಗೆ ಮೈಲಾರಲಿಂಗ ಸ್ವಾಮಿಯ ಮೆರವಣಿಗೆ ನಡೆದಿದ್ದು, ಈ ವೇಳೆ ಮೈಲಾರಲಿಂಗೇಶ್ವರ ದರ್ಶನಕ್ಕೆ ರಾಜ್ಯದ ವಿವಿಧ ಮೂಲೆಗಳಿಂದ ಭಕ್ತರು ಆಗಮಿಸಿದ್ದರು.
ಚಿಕ್ಕಮಗಳೂರು: ಆತ್ಮ ಯೋಜನೆಯಡಿ ಅಂತಾರಾಷ್ಟ್ರೀಯ ರೈತ ಮಹಿಳಾ ದಿನಾಚರಣೆ ಹಾಗೂ ವಿಶ್ವ ಆಹಾರ ದಿನಾಚರಣೆ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಅಂತಾರಾಷ್ಟ್ರೀಯ ರೈತ ಮಹಿಳಾ ದಿನಾಚರಣೆ ಹಾಗೂ ವಿಶ್ವ ಆಹಾರ ದಿನಾಚರಣೆಯನ್ನು ಜಂಟಿ ಉಪ ನಿರ್ದೇಶಕರ ಕಛೇರಿ ಆವರಣದಲ್ಲಿ ನಡೆಸಲಾಯಿತು.
ಬೇಸಾಯ ಶಾಸ್ತ್ರ ತೋಟಗಾರಿಕೆ ಮಹಾ ವಿದ್ಯಾಲಯ ಸಹಾಯಕ ಪ್ರಾಧ್ಯಾಪಕರಾದ ಯಮುನಾ.ಬಿ.ಸಿ ರವರು ಪೌಷ್ಟಿಕ ಆಹಾರ ಮಹತ್ವ ಕುರಿತು ಸವಿವರ ಮಾಹಿತಿಯನ್ನು ನೀಡಿದರು, ಕಾರ್ಯಕ್ರಮದಲ್ಲಿ ಜಿಲ್ಲೆಯ ಏಳು ತಾಲ್ಲೂಕುಗಳ 50 ರೈತ ಹಾಗೂ ರೈತ ಮಹಿಳೆಯರು ಭಾಗವಹಿಸಿದ್ಧರು, ಆಸಕ್ತ ರೈತ ಮಹಿಳೆಯರು ತಮ್ಮ ಕೃಷಿಯಲ್ಲಿನ ಅನುಭವವನ್ನು ವೇದಿಕೆಯಲ್ಲಿ ಹಂಚಿಕೊಂಡರು.
ಈ ಸಂದರ್ಭದಲ್ಲಿ ಕೃಷಿಯಲ್ಲಿ ಸಾಧನೆ ಮಾಡಿದ ರೈತ ಮಹಿಳೆಯರಾದ ಮಂಗಳಕುಮಾರ್, ಚಂದ್ರಕಲಾಪ್ರಕಾಶ್ ಇವರನ್ನು ಸನ್ಮಾನಿಸಲಾಯಿತು, ಸಹಾಯಕ ಕೃಷಿ ನಿರ್ದೇಶಕರಾದ ವಿಜಯಲಕ್ಷ್ಮೀ ಚಂದ್ರಶೇಖರ್, ಕೃಷಿ ಅಧಿಕಾರಿ ಸುಜಾತ ಉಪಸ್ಥಿತರಿದ್ದರು, ಆತ್ಮಯೋಜನೆ ಉಪ ಯೋಜನಾ ನಿರ್ದೇಶಕರಾದ ಜಿ.ಪಿ.ಪ್ರಿಯಾಂಕ ಕಾರ್ಯಕ್ರಮವನ್ನು ನಿರೂಪಿಸಿದರು.












