ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಸ್ಕೂಟಿಯಲ್ಲಿ ಗಾಂಜಾ ಇಟ್ಟುಕೊಂಡು ಬರುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಇದನ್ನೂ ಓದಿ: ಅನ್ನಭಾಗ್ಯ ಯೋಜನೆಯ ಕುರಿತು ಮಹತ್ವದ ಕ್ರಮ; ಸರ್ಕಾರದಿಂದ ನಾಲ್ಕು ಹಂತದ ಸಮಿತಿ ರಚನೆ!

ಭಾನುವಾರ ರಾತ್ರಿ ಚಿಕ್ಕಮಗಳೂರು ನಗರದ 60 ಅಡಿ ರಸ್ತೆಯ ಕಡೆಗೆ ಗಾಂಜಾ ಮಾರಾಟ ಮಾಡುವ ಉದ್ದೇಶದಿಂದ ಸ್ಕೂಟಿಯಲ್ಲಿ ಗಾಂಜಾ ಇಟ್ಟುಕೊಂಡು ಬರುತ್ತಿದ್ದ ಇಬ್ಬರು ಆರೋಪಿಗಳನ್ನು ಡಿ.ವೈ.ಎಸ್.ಪಿ, ಸಿ.ಇ.ಎನ್. ಪೊಲೀಸ್ ಠಾಣೆ ರವರ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
ಆರೋಪಿಗಳಿಂದ 1.39 ಗ್ರಾಂ ಗಾಂಜಾ ಹಾಗೂ ಸ್ಕೂಟಿ ಮತ್ತು 2 ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ: 12,000 ದಿಂದ 18,000 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; 8 ರಿಂದ 10 ನೇ ತರಗತಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ












