ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ರಾಜ್ಯ ಸರ್ಕಾರದ ವಿರುದ್ಧ ನಗರದ ಬೇಲೂರು ರಸ್ತೆಯ ಆಜಾದ್ ಪಾರ್ಕ್ ನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ; ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ

ಬಿಜೆಪಿ ಕಚೇರಿ ಪಾಂಚಜನ್ಯದಿಂದ ಪ್ರತಿಭಟನಾ ಮೆರವಣಿಗೆ ಹೊರಟಿದ್ದು, ಕಾಂಗ್ರೆಸ್ ನೇತೃತ್ವದ ಭ್ರಷ್ಟಾಚಾರದ ವಿರುದ್ಧ ಬಿಜೆಪಿಗರು ಆಕ್ರೋಶ ವ್ಯಕ್ತಪಡಿಸಿದರು. ನಗರದ ಆಜಾದ್ ಪಾರ್ಕ್ ನಲ್ಲಿ ಬಿಜೆಪಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದ್ದರಲ್ಲದೇ ಎಟಿಎಂ ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿದರು.
ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿ, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಪ್ರತಿಭಟನೆಯಿಂದ ಆಜಾದ್ ಪಾರ್ಕ್ ಬಳಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಆಹಾರ ತಜ್ಞ ಕೆ.ಸಿ.ರಘು ಇನ್ನಿಲ್ಲ
ಬೆಂಗಳೂರು/ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮಾಧ್ಯಮ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿ ಆಹಾರ ಕ್ರಮದ ಕುರಿತು ಟಿಪ್ಸ್ ನೀಡುತ್ತಿದ್ದ ಹೆಸರಾಂತರ ಆಹಾರ ತಜ್ಞ ಕೆ.ಸಿ.ರಘು ಅನಾರೋಗ್ಯದಿಂದ ಇಂದು ನಿಧನ ಹೊಂದಿದ್ದಾರೆ.
ಈ ಕುರಿತು ರಘು ಅವರ ಪತ್ನಿ ಆಶಾ ರಘು ಮಾಹಿತಿ ನೀಡಿದ್ದಾರೆ. ಕೆ.ಸಿ.ರಘು ಬೆಳಗಿನ ಜಾವ ಸುಮಾರು 7.30 ಕ್ಕೆ ಅಗಲಿದ್ದಾರೆ. ರಘು ಅವರು ಲಂಗ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಇನ್ನು ದಾಸರಹಳ್ಳಿಯ ಅಮೃತನಗರದಲ್ಲಿರುವ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ರಘು ಅವರು ಅನೇಕ ವರ್ಷಗಳ ಕಾಲ ಫುಡ್ ಆಯಂಡ್ ನ್ಯೂಟ್ರೇಷನ್ ವರ್ಲ್ಡ್ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿದ್ದರು. ಅನೇಕ ದಿನಪತ್ರಿಕೆಗಳಲ್ಲಿ ಅಂಕಣಗಳನ್ನು ಬರೆಯುತ್ತಿದ್ದರು. ಸಾಮಾನ್ಯ ವಿಜ್ಞಾನ ಮತ್ತು ಆರ್ಥಿಕತೆಯ ವಿಷಯಗಳನ್ನು ಅತಿಥಿ ಉಪನ್ಯಾಸಕರಾಗಿ ನಿರ್ವಹಿಸಿ ಸೈ ಎನಿಸಿಕೊಂಡಿದ್ದರು. ಅವರು ಸ್ಥಾಪಿಸಿದ ಪ್ರಿಸ್ಟೀನ್ ಆರ್ಗ್ಯಾನಿಕ್ಸ್ ಎಂಬ ಸಂಸ್ಥೆಯಲ್ಲಿ ನವಜಾತ ಶಿಶುಗಳಲ್ಲಿ ಕಂಡು ಬರುವ ಮಾರಕ ಕಾಯಿಲೆಗಳಿಗೆ ಪೌಷ್ಟಿಕಾಂಶದ ಪರಿಹಾರವನ್ನು ಸಂಶೋಧನೆಯಿಂದ ಕಂಡು ಹಿಡಿದಿದ್ದರು. ಬಳಿಕ ದೇಶಾದ್ಯಂತ ಹಾಗೂ ವಿದೇಶಕ್ಕೂ ಒದಗಿಸುತ್ತಿದ್ದರು. ಈ ಕಾರ್ಯದಿಂದ ಸುಮಾರು 5 ಸಾವಿರ ನವಜಾತ ಶಿಶುಗಳನ್ನು ಸಾವಿನ ದವಡೆಯಿಂದ ಪಾರು ಮಾಡಲಾಗಿದೆ ಎನ್ನಲಾಗಿದೆ.
ಭಾರತದಲ್ಲಿ ಈ ರೀತಿಯ ಪರಿಹಾರ ಒದಗಿಸುವ ಏಕೈಕ ಸಂಸ್ಥೆಯಾಗಿತ್ತು. ಕೆ.ಸಿ.ರಘು, ಅನೇಕ ವಿಷಯಗಳ ಆಳವಾದ ಆಸಕ್ತಿ ಮತ್ತು ಜ್ಞಾನವನ್ನು ಉಳ್ಳವರಾಗಿ ಸದಾ ಅಧ್ಯಯನದಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಕೆ.ಸಿ. ರಘು, ಲೇಖಕರಾಗಿ ಆಹಾರಕ್ಕೆ ಸಂಬಂಧಪಟ್ಟ ‘ಆಹಾರ ರಾಜಕೀಯ’ಮತ್ತು ‘ತುತ್ತು ತತ್ವ’ ಪುಸ್ತಕಗಳನ್ನು ಪ್ರಕಟಿಸಿದ್ದರು.
ಇನ್ನು ರಘು ಅವರು ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿ ಕಲ್ಮನೆ ಗ್ರಾಮದವರು. ಕಲ್ಮನೆ ದಿವಂಗತ ಕಳಸೇಗೌಡರ ಮೊಮ್ಮಗ. ಕಲ್ಮನೆ ದಿವಂಗತ ಚಂದ್ರೇಗೌಡರ ಪುತ್ರ. ಇವರು ತಮ್ಮ ಉನ್ನತ ವಿದ್ಯಾಭ್ಯಾಸದ ನಂತರ ಭವಿಷ್ಯ ಅರಸಿ ಬೆಂಗಳೂರು ಸೇರಿದ್ದರು.
ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬ ವರ್ಗಕ್ಕೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ನೀಡಲಿ ಎಂದು ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.












