ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಪೊಲೀಸ್ ಕ್ವಾಟ್ರಸ್ ಮುಂದೆ ಕಾರು ನಿಲ್ಲಿಸಿದ್ದಕ್ಕೆ ವ್ಯಕ್ತಿಯೊಬ್ಬರು ಅಮಾನವೀಯವಾಗಿ ನಡೆದುಕೊಂಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಇದನ್ನೂ ಓದಿ: ಶಿಕ್ಷಕರ ಬಡ್ತಿಗೆ ಹೊಸ ಮಾರ್ಗಸೂಚಿ ಪ್ರಕಟ; ಇಷ್ಟು ವರ್ಷಗಳ ಸೇವೆ ಕಡ್ಡಾಯ

ಕೂದುವಳ್ಳಿ ಗ್ರಾಮದ ಅರವಿಂದ್ ಎಂಬುವರಿಗೆ ಸೇರಿದ ಕಾರನ್ನು ಶರತ್ ಎಂಬುವವರು ಕಲ್ಲಿನಿಂದ ಹಾನಿ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದ್ದು, ಕಾರಿನ ಬಾನೆಟ್ ಮೇಲೆ ‘ಡೋಂಟ್ ಪಾರ್ಕ್ ಹಿಯರ್’ ಎಂದು ಕಲ್ಲಿನಿಂದ ಗೀಚಿ ವಿಕೃತಿ ಮೆರೆಯಲಾಗಿದೆ ಎಂದು ಆರೋಪಿಸಲಾಗಿದೆ.
ಕಾರಿಗೆ ಹಾನಿ ಮಾಡಿರುವ ವ್ಯಕ್ತಿಯು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂಬ ಕಾರಣಕ್ಕೆ ಪೊಲೀಸರು ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದರು ಎಂದು ಕಾರಿನ ಮಾಲೀಕ ಅರವಿಂದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಎಸ್ಎಸ್ಎಲ್ಸಿ, ಪಿಯುಸಿ ಪಾಸ್ ಆದವರಿಗೆ ಉದ್ಯೋಗವಕಾಶ; ಆಕರ್ಷಕ ವೇತನ
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಶರತ್ ವಿರುದ್ಧ ಪ್ರಕರಣ ದಾಖಲಾಗಿದೆ.












