ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಕಾಡಾನೆಯೊಂದು ಪ್ರವಾಸಿಗರ ಮೇಲೆ ದಾಳಿ ನಡೆಸಿದ್ದು, ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವರಮನೆಯಲ್ಲಿ ಸೋಮವಾರ ಸಂಜೆ ನಡೆದಿದೆ.
ಇದನ್ನೂ ಓದಿ; ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ವಾ?; ಹೆಸರು ನೋಂದಣಿಗೆ ಅವಕಾಶ

ಮೂಡಿಗೆರೆ ಪಟ್ಟಣದ ನಿವಾಸಿ ಲೋಕೇಶ್ ಮತ್ತು ಅವರ ಸಹೋದರಿ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಹಿಂದಿರುವಾಗ ದೇವರಮನೆ ರಸ್ತೆಯಲ್ಲಿ ಕಾಡಾನೆ ಬೈಕಿಗೆ ಅಡ್ಡ ಬಂದು ಅಟ್ಟಿಸಿಕೊಂಡು ಬಂದಿದೆ. ತಕ್ಷಣ ಬೈಕ್ ಸವಾರರು ಓಡಿ ಹೋಗಿದ್ದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ಇದನ್ನೂ ಓದಿ; ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆ; ಎರಡು ತಿಂಗಳ ಹಣ ಬರದೇ ಇದ್ರೆ ತಕ್ಷಣ ಈ ಕೆಲಸ ಮಾಡಿ!
ಬೈಕ್ ಸವಾರರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು, ಬೈಕ್ ಜಖಂಗೊಂಡಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳಾದ ಅಭಿಜಿತ್, ಪರಮೇಶ್, ಬಣಕಲ್ ಠಾಣಾ ಪಿ.ಎಸ್.ಐ ಎನ್.ಕೆ.ಓಮನಾ, ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ; ಹಟ್ಟಿ ಚಿನ್ನದ ಗಣಿಯಲ್ಲಿ ಉದ್ಯೋಗ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮೂಡಿಗೆರೆ: ಘಾಟಿಯಲ್ಲಿ ಕೆಟ್ಟು ನಿಂತ 16 ಚಕ್ರದ ಲಾರಿ: ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್
ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನ 10ನೇ ತಿರುವಿನಲ್ಲಿ 16 ಚಕ್ರದ ಲಾರಿಯೊಂದು ತಿರುವು ತೆಗೆದುಕೊಳ್ಳಲಾಗದೆ ಸಿಕ್ಕಿಹಾಕಿಕೊಂಡ ಪರಿಣಾಮ ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಸ್ಥಗಿತಗೊಂಡು, ಸವಾರರು, ಪ್ರಯಾಣಿಕರು ಪರದಾಡಿದರು.

ಹುಬ್ಬಳ್ಳಿಯಿಂದ ಮಂಗಳೂರು ಕಡೆಗೆ ಸಿಮೆಂಟ್ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾರ್ಮಾಡಿ ಘಾಟ್ ನ 10ನೇ ತಿರುವಿನಲ್ಲಿ ಸಿಲುಕಿಕೊಂಡಿತು. ಇದರಿಂದಾಗಿ ಸಕಾಲಕ್ಕೆ ನಿಗದಿತ ಸ್ಥಳ ತಲುಪಲಾಗದೆ ರೋಗಿಗಳು, ವಿದ್ಯಾರ್ಥಿಗಳು ಪ್ರಯಾಣಿಕರು ಪರದಾಡಿದರು.
ಇನ್ನು ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿದ್ದರೂ, 16 ಚಕ್ರದ ಲಾರಿ ಈ ಮಾರ್ಗದಲ್ಲಿ ಸಂಚರಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕೊಟ್ಟಿಗೆಹಾರದಲ್ಲಿ ಚುನಾವಣೆ ಹಿನ್ನಲೆಯಲ್ಲಿ ಚೆಕ್ ಪೋಸ್ಟ್ ಅಳವಡಿಸಿ ವಾಹನ ತಪಾಸಣೆ ನಡೆಸುತ್ತಿದ್ದರೂ ಈ ಲಾರಿ ಆ ಮಾರ್ಗದಲ್ಲೇ ಸಾಗಿರುವುದಕ್ಕೆ ಸ್ಥಳೀಯರಿಂದ ಅಸಮಾಧಾನ ವ್ಯಕ್ತವಾಗಿದೆ.












