
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚುತ್ತಿದ್ದಂತೆ ಕಾಡ್ಗಿಚ್ಚು ಪ್ರಕರಣಗಳು ಜಾಸ್ತಿಯಾಗುತ್ತಿದೆ. ಇತ್ತೀಚೆಗೆ ಮುಳ್ಳಯ್ಯನಗಿರಿ ಸಮೀಪದ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿತ್ತು, ಇದೀಗ ಜಿಲ್ಲೆಯ ತರೀಕೆರೆ ತಾಲೂಕು ಕೆಮ್ಮಣ್ಣುಗುಂಡಿ ಪ್ರವಾಸಿ ತಾಣದಲ್ಲಿನ ಪರ್ವತ ಪ್ರದೇಶದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ.
ಇದನ್ನೂ ಓದಿ; ರೈತ ಸಿರಿ ಯೋಜನೆ; ಪ್ರತಿ ಹೆಕ್ಟೇರ್ ಗೆ 10,000 ಪ್ರೋತ್ಸಾಹ ಧನ; ಯೋಜನೆಯ ಉದ್ದೇಶ, ಅರ್ಹತೆ, ಬೇಕಾಗುವ ದಾಖಲೆ ಏನು?

ಬೆಂಕಿಗೆ ಕಿಡಿಗೇಡಿಗಳು ಕಾರಣ ಎನ್ನಲಾಗುತ್ತಿದೆ. ಕಾಡ್ಗಿಚ್ಚಿಗೆ ಶೋಲಾರಣ್ಯ ಗುಡ್ಡದಲ್ಲಿ ನೂರಾರು ಎಕರೆ ಪ್ರದೇಶ ನಾಶವಾಗಿದೆ. ಕಾಡ್ಗಿಚ್ಚಿನಿಂದ ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶವಾಗಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟರು.

ಇದನ್ನೂ ಓದಿ; ಆನೆ ದಾಳಿ: ಕೇರಳ ವ್ಯಕ್ತಿಯ ಸಾವಿಗೆ ರಾಜ್ಯದಿಂದ ಪರಿಹಾರ; ರಾಜ್ಯ ಸರ್ಕಾರ ಮಾನ-ಮರ್ಯಾದೆ ಎಲ್ಲ ಬಿಟ್ಟಿದೆ
ಈ ಬಾರಿ ಬಿಸಿಲಿನ ತೀವ್ರತೆ ಹೆಚ್ಚಾಗಿರುವುದರಿಂದ ಕಾಡಿಚ್ಚು ಕಂಡು ಬರುವ ಪ್ರದೇಶಗಳಲ್ಲಿ ಅರಣ್ಯ ಇಲಾಖೆ ಕಟ್ಟೆಚ್ಚರ ವಹಿಸಿದ್ದು, ಅರಣ್ಯ ಪ್ರದೇಶದತ್ತ ತೆರಳುವ ಪ್ರವಾಸಿಗರಲ್ಲಿ ಈ ಸಂಬಂಧ ಜಾಗೃತಿ ಮೂಡಿಸಲು ಕ್ರಮಕೈಗೊಂಡಿದೆ.
ಕೊಪ್ಪ: ಗ್ರಾಮ ಪಂಚಾಯಿತಿಯ ಹಾಲಿ ಸದಸ್ಯ ಮತ್ತು ಮಾಜಿ ಅಧ್ಯಕ್ಷರ ಸದಸ್ಯತ್ವ ವಜಾ!
ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಶಾನುವಳ್ಳಿ ಗ್ರಾಮ ಪಂಚಾಯ್ತಿ ಹಾಲಿ ಸದಸ್ಯ ಮತ್ತು ಮಾಜಿ ಅಧ್ಯಕ್ಷರನ್ನು 6 ವರ್ಷಗಳ ಕಾಲ ಚುನಾವಣೆಗೆ ನಿಲ್ಲದಂತೆ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ಇಲ್ಲಿನ ಹಾಲಿ ಸದಸ್ಯ ಮತ್ತು ಮಾಜಿ ಅಧ್ಯಕ್ಷರಾದ ಶಿವಾಕರ್ ಎಸ್ ಶೆಟ್ಟಿಯವರು ಕರ್ತವ್ಯ ಲೋಪ ಹಾಗೂ ಹಣ ದುರುಪಯೋಗ ಸಾಬೀತಾದ ಹಿನ್ನೆಲೆ ಚುನಾವಣೆಗೆ ನಿಲ್ಲದಂತೆ ನಿರ್ಬಂಧಿಸಿ ಆದೇಶ ಹೊರಡಿಸಿ ಸದಸ್ಯತ್ವ ವಜಾಗೊಳಿಸಲಾಗಿದೆ.
ಇದನ್ನೂ ಓದಿ; ಕರ್ನಾಟಕ ಸರ್ಕಾರದಿಂದ ಲ್ಯಾಪ್ ಟಾಪ್ ಭಾಗ್ಯ; ಉಚಿತ ಲ್ಯಾಪ್ ಟಾಪ್ ಪಡೆಯಲು ಅರ್ಜಿ ಸಲ್ಲಿಸಿ
34 ಲಕ್ಷ ಹಣ ದುರಪಯೋಗ!
ಶಿವಾಕರ್ ಎಸ್ ಶೆಟ್ಟಿ ಶಾನುವಳ್ಳಿ ಗ್ರಾ.ಪಂ ಅಧ್ಯಕ್ಷರಾಗಿದ್ದ ಸಮಯದಲ್ಲಿ 2016-17ನೇ ಸಾಲಿನಲ್ಲಿ ಕೆಲ ಕಾಮಗಾರಿಗಳಿಗೆ ಕ್ರಿಯಾಯೋಜನೆ ತಯಾರಿಸದೇ, ಎಂ ಬಿ ದಾಖಲಿಸದೇ ಸರ್ಕಾರದ ಹಣವನ್ನು ಚೆಕ್ ಮೂಲಕ ನಗದೀಕರಿಸಿದ ಆರೋಪವನ್ನು ಎದುರಿಸುತ್ತಿದ್ದರು. ಇದೀಗ ಕರ್ತವ್ಯ ಲೋಪ ಮತ್ತು ಸುಮಾರು 34 ಲಕ್ಷ ರೂ. ಹಣ ದುರುಪಯೋಗ ಸಾಬೀತಾದ ಹಿನ್ನೆಲೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ; ರಂಭಾಪುರಿ ಶ್ರೀಗಳ ಕಾರಿನ ಮೇಲೆ ಚಪ್ಪಲಿ ಎಸೆತ ಪ್ರಕರಣ; 59 ಜನರ ವಿರುದ್ಧ FIR ದಾಖಲು













