ಕಡೂರು: (ನ್ಯೂಸ್ ಮಲ್ನಾಡ್ ವರದಿ) ಲಾರಿ ಹಾಗೂ ಟಿಟಿ ವಾಹನದ ಮಧ್ಯ ಸರಣಿ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿದ್ದು ಐವರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬಯಲು ಬಸಪ್ಪನ ದಿಬ್ಬ ಬಳಿ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ.


ಇದನ್ನೂ ಓದಿ: ಬಾಕಿ ಉಳಿದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ; ಈ ರೀತಿ ಮಾಡದೇ ಇದ್ದರೆ ರೈತರಿಗೆ ಸಿಗಲ್ಲ ಪರಿಹಾರ


ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬಯಲು ಬಸಪ್ಪನ ದಿಬ್ಬ ಗ್ರಾಮದಲ್ಲಿ ಸರಣಿ ಅಪಘಾತದಲ್ಲಿ ಓರ್ವ ಸಾವನಪ್ಪಿದ್ದಾರೆ. ಇದೆ ವೇಳೆ ಟಿಟಿ ವಾಹನಕ್ಕೆ ಮತ್ತೊಂದು ಲಾರಿ ಹಿಂದಿನಿಂದ ಬಂದು ಗುದ್ದಿದೆ ಟಿಟಿ ಅಲ್ಲಿದ್ದ ಹಾಸನ ಮೂಲದ ಮಂಜುನಾಥ್ (40) ಮೃತಪಟ್ಟವರು. ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಎರಡು ಲಾರಿ ಒಂದು ಟಿಟಿ ವಾಹನದ ನಡುವೆ ಅಪಘಾತ ಸಂಭವಿಸಿದೆ. ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ವಾಹನ ಗುದ್ದಿದೆ.

ಇದನ್ನೂ ಓದಿ: ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್; ಏನದು? ಇಲ್ಲಿದೆ ನೋಡಿ ಡಿಟೈಲ್ಸ್

ಅಲ್ಲದೆ ವಾಹನದಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ತಕ್ಷಣ ಶಿವಮೊಗ್ಗದ ಮೆಗನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತಂತೆ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



ಇದನ್ನೂ ಓದಿ: ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಬಾಳೆಹೊನ್ನೂರು: ಕೃಷಿಕನ ಆತ್ಮಹತ್ಯೆ ಪ್ರಕರಣ: ಶೃಂಗೇರಿ ಶಾಸಕರ ಆಪ್ತರೊಬ್ಬರಿಂದ ಸಾಕ್ಷಿದಾರನಿಗೆ ಬೆದರಿಕೆ ಆರೋಪ
ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಕೊಪ್ಪದ ಬಸ್ತಿ ಬಾಳಕ್ಕಿ ತೋಟದ ಮಾಲೀಕ ಸುರೇಶ್, ಆತ್ಮಹತ್ಯೆಗೂ ಮುನ್ನ ಮಾಡಿರುವ ವಿಡಿಯೊವನ್ನು ಈ ಹಿಂದೆ ಪತ್ರಿಕಾಗೋಷ್ಠಿ ನಡೆಸಿ ಬಹಿರಂಗ ಪಡಿಸಿದ್ದರು. ಈ ಸಂಬಂಧ ಜಯಪುರ ಪೋಲಿಸ್ ಠಾಣೆಯಲ್ಲಿ 6 ಜನರ ವಿರುದ್ಧ FIR ದಾಖಲಿಸಲಾಗಿತ್ತು. ಆದರೆ, ಇದೀಗ ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡರ ಆಪ್ತರೊಬ್ಬರು ರಾಘವೇಂದ್ರ ಎಂಬುವವರಿಗೆ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ: ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?; ಅಡಿಕೆ ಮಾರುಕಟ್ಟೆ ಹೇಗಿದೆ| ಬೆಟ್ಟೆ, ಗೊರಬಲು, ಸರಕು, ಈಡಿ
ಏನಿದು ಘಟನೆ:
2023 ರ ಅಕ್ಟೋಬರ್ 2 ರಂದು ಕೊಪ್ಪದ ಬಸ್ತಿ ಬಾಳಕ್ಕಿ ತೋಟದ ಮಾಲೀಕ ಸುರೇಶ್, ರಾಘವೇಂದ್ರ ಎಂಬುವವರ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಆದರೆ, ಸುರೇಶ್ ಆತ್ಮಹತ್ಯೆಗೂ ಮುನ್ನ ಮಾಡಿರುವ ವಿಡಿಯೋವನ್ನ ಕಳೆದ ತಿಂಗಳು ಪತ್ರಿಕಾಗೋಷ್ಠಿ ನಡೆಸಿ ಬಹಿರಂಗ ಪಡಿಸಿದ್ದರು. ಆ ವಿಡಿಯೋದಲ್ಲಿ ಬಸ್ತಿ ಬಾಳಕ್ಕಿಯಲ್ಲಿ 3.5 ಎಕರೆ ಜಾಗದ ವಿಚಾರವಾಗಿ ಸ್ಥಳೀಯ ಕಾಂಗ್ರೆಸ್ ಮುಖಂಡರೊಬ್ಬರು ಹಾಗೂ ಕೆಲ ವ್ಯಕ್ತಿಗಳು ನೀಡಿದ ಕಿರುಕುಳ ಹಾಗೂ ಹಲ್ಲೆಯಿಂದ ಮಾನಸಿಕವಾಗಿ ನೊಂದು ಸುರೇಶ್ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದರು. ಹಲ್ಲೆಗೆ ಪ್ರತ್ಯಕ್ಷ ಸಾಕ್ಷಿಯಾಗಿ ರಾಘವೇಂದ್ರ ಇದ್ದು, ಜಯಪುರ ಠಾಣೆಯಲ್ಲಿ ಎಸ್ಸಿ.ಎಸ್.ಟಿ ದೌರ್ಜನ್ಯ ಪ್ರಕರಣ ದಾಖಲಾಗಿತ್ತು.
ಆದರೆ ಇದೀಗ ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡರ ಆಪ್ತರೊಬ್ಬರು ರಾಘವೇಂದ್ರ ವಿರುದ್ಧ FIR ದಾಖಲಿಸುವುದಾಗಿ ಫೋನ್ ಮೂಲಕ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ ಆತ್ಮಹತ್ಯೆ ವಿಚಾರದಲ್ಲಿ ಅಪರಾದಿಗಳು ಮತ್ತು ಶಾಸಕರು ಸೇರಿಕೊಂಡು ಕೇಸನ್ನು ಮುಚ್ಚಿ ಹಾಕುವ ಅನುಮಾನವನ್ನು ವ್ಯಕ್ತಪಡಿಸಿ, ಮಾನ್ಯ ಮುಖ್ಯಮಂತ್ರಿಗಳು ಸಿಬಿಐ ಗೆ ಈ ಪ್ರಕರಣವನ್ನು ಒಪ್ಪಿಸುವಂತೆ ಒತ್ತಾಯಿಸಿದ್ದಾರೆ. ಹಾಗೂ ಮುಂದಿನ ದಿನಗಳಲ್ಲಿ ವಿವಿಧ ಸಂಘಟನೆಯೊಂದಿಗೆ ಹಿಡುವಳಿಯ ರಸ್ತೆಯನ್ನು ಬಂದ್ ಮಾಡಿ ಪ್ರತಿಭಟನೆ ಮಾಡುವುದರ ಜೊತೆಗೆ ಕಾನೂನನ್ನು ದುರುಪಯೋಗ ಮಾಡಿಸಿಕೊಂಡಲ್ಲಿ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಸಿದ್ದಾರೆ.
ಇದನ್ನೂ ಓದಿ: ರೈತರಿಗೆ ಡಬಲ್ ಧಮಾಕಾ!; ಇಂತಹ ರೈತರ ಬ್ಯಾಂಕ್ ಖಾತೆಗೆ 9,500 ರೂಪಾಯಿ ಜಮಾ












