
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಕಳೆದ ಕೆಲ ದಿನಗಳಿಂದ ನಿರಂತರ ಸುರಿಯುತಿದ್ದ ಮಳೆಯಿಂದ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು ಅವರಿಸಿಕೊಂಡಿದ್ದು ಪರಿಣಾಮ ಲಾರಿಯೊಂದು ನೂರು ಅಡಿ ಪ್ರಪಾತಕ್ಕೆ ಉರುಳಿಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ.
ಇದನ್ನೂ ಓದಿ; ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ; ಏನಿದು ಸ್ಟೋರಿ?

ಶುಕ್ರವಾರ ರಾತ್ರಿ ಪುತ್ತೂರಿನಿಂದ ಚಿತ್ರದುರ್ಗಕ್ಕೆ ನೀರಿನ ಬಾಟಲ್ ತುಂಬಿದ ಲಾರಿ ಚಾರ್ಮಾಡಿ ಘಾಟಿಯಲ್ಲಿ ಆವರಿಸಿದ ದಟ್ಟ ಮಂಜಿನಿಂದ ದಾರಿ ಕಾಣದೆ 100 ಅಡಿ ಪ್ರಪಾತಕ್ಕೆ ಬಿದ್ದಿದೆ ಅದೃಷ್ಟವಶಾತ್ ಲಾರಿ ಚಾಲಕ ಹಾಗೂ ಕ್ಲೀನರ್ ಗೆ ಯಾವುದೇ ಪ್ರಾಣಪಾಯವಿಲ್ಲದೆ ಪಾರಾಗಿದ್ದಾರೆ.

ಇದನ್ನೂ ಓದಿ; 14 ನ್ಯೂಸ್ ಆ್ಯಂಕರ್ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
ಲಾರಿ ತಡೆಗೋಡೆಗೆ ಡಿಕ್ಕಿ ಹೊಡೆದು ನೂರು ಅಡಿ ಪ್ರಪಾತಕ್ಕೆ ಉರುಳಿದೆ ಈ ವೇಳೆ ಅಲ್ಲಿ ಇದ್ದ ದೈತ್ಯ ಮರಕ್ಕೆ ಲಾರಿ ಸಿಲುಕಿಕೊಂಡ ಪರಿಣಾಮ ಅವಘಡ ತಪ್ಪಿದೆ ಒಂದು ವೇಳೆ ಲಾರಿ ಮರಕ್ಕೆ ಸಿಕ್ಕಿಕೊಳ್ಳದಿದ್ದಲ್ಲಿ ಸಾವಿರ ಅಡಿ ಪ್ರಪಾತಕ್ಕೆ ಹೋಗಿ ಬೀಳುತ್ತಿತ್ತು ಎನ್ನಲಾಗಿದೆ. ಈ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರವಾಸದಲ್ಲಿರುವಾಗಲೇ ವೈದ್ಯನ ಮೇಲೆ ಚಾಕು ಇರಿತ
ಚಿಕ್ಕಮಗಳೂರು; (ನ್ಯೂಸ್ ಮಲ್ನಾಡ್ ವರದಿ) ವೈದ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ.
ವೈದ್ಯ ಗಣೇಶ್ ತೋಟದ ಕಾರ್ಮಿಕರ ಮೇಲೆ, ಪಕ್ಕದ ತೋಟದ ಕಾರ್ಮಿಕರಿಂದ ಹಲ್ಲೆ ನಡೆದಿತ್ತು, ಕೂಡಲೇ ಚಿಕಿತ್ಸೆಗೆಂದು ಸ್ಥಳಕ್ಕೆ ಹೋದ ವೈದ್ಯ ಗಣೇಶ್ ಮೇಲೂ ಕೂಡ ಚಾಕುವಿನಿಂದ ಕೈ ಹಾಗೂ ಹೊಟ್ಟೆ ಭಾಗಕ್ಕೆ ಹಲ್ಲೆ ಮಾಡಲಾಗಿದೆ.
ತೀವ್ರ ಅಸ್ವಸ್ಥರಾಗಿದ್ದ ವೈದ್ಯ ಗಣೇಶ್ ನನ್ನು ಕೂಡಲೇ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಇನ್ನು ಸಚಿವ ದಿನೇಶ್ ಗುಂಡೂರಾವ್ ಹಲ್ಲೆಗೊಳಗಾದ ವೈದ್ಯ ಗಣೇಶ್ ಅವರ ಆರೋಗ್ಯವನ್ನು ವಿಚಾರಿಸಿದರು.
ಇದನ್ನೂ ಓದಿ; arecanut price: 15 ಸೆಪ್ಟೆಂಬರ್ 2023 ಅಡಿಕೆ ರೇಟ್, ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ
ಹಲ್ಲೆ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













