ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ತಡರಾತ್ರಿ ಕಾರು, ಟಿಪ್ಪರ್ ಲಾರಿ, ಬೈಕ್ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಬೈಕ್ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಸಮೀಪ ನಡೆದಿದೆ

ಇದನ್ನೂ ಓದಿ; ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ; 60,000 ರವರೆಗೆ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ ಮೂಲದ ಸಯ್ಯದ್ ಆಸೀಫ್ (38), ಮಾಜಿನಾ (33) ಅಪಘಾತದಲ್ಲಿ ಸಾವನ್ನಪ್ಪಿದ ದಂಪತಿ. ಇನ್ನು ಈ ದಂಪತಿಯ 1 ವರ್ಷದ ಮಗುವಿಗೆ ಗಂಭೀರ ಗಾಯಗಳಾಗಿವೆ.

ಇದನ್ನೂ ಓದಿ; ಗೌರಿ ಗಣೇಶ ಹಬ್ಬಕ್ಕೆ ಕೆಎಸ್ಆರ್ಟಿಸಿಯಿಂದ ಗುಡ್ ನ್ಯೂಸ್; 1200 ವಿಶೇಷ ಬಸ್ಗಳ ವ್ಯವಸ್ಥೆ; ಮಾರ್ಗ ಕುರಿತು ಮಾಹಿತಿ ಇಲ್ಲಿದೆ
ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿರುವಾಗ ಬೈಕ್ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದ್ದು, ಈ ವೇಳೆ ಬೈಕ್ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ; ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
ಚಿಕ್ಕಮಗಳೂರು; ಬಸ್- ಕಾರು ಮುಖಾಮುಖಿ ಡಿಕ್ಕಿ | 9 ಮಂದಿಗೆ ಗಂಭೀರ ಗಾಯ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಒಂಬತ್ತು ಜನ ಪ್ರಯಾಣಿಕರಿಗೆ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಬೇಲೇನಹಳ್ಳಿ ಸಮೀಪ ಸಂಭವಿಸಿದೆ.
ಕೆ.ಎಸ್.ಆರ್.ಟಿ.ಸಿ ಬಸ್ ಶಿವಮೊಗ್ಗ ಕಡೆಯಿಂದ ತರೀಕೆರೆ ಮಾರ್ಗವಾಗಿ ಸಂಚರಿಸುತ್ತಿತ್ತು. ಕಾರಿನಲ್ಲಿದ್ದವರು ತರೀಕೆರೆಯಿಂದ ಭದ್ರಾವತಿ ಕಡೆಗೆ ತೆರಳುತ್ತಿದ್ದರು. ಬಸ್ ಮತ್ತು ಕಾರು ನಡುವೆ ಬೇಲನಹಳ್ಳಿ ಗ್ರಾಮದ ಸಮೀಪ ಡಿಕ್ಕಿ ಸಂಭವಿಸಿದ್ದು ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಇನ್ನು ಕಾರಿನಲ್ಲಿದ್ದ 9 ಜನರಿಗೆ ಗಂಭೀರ ಗಾಯಗಳಾಗಿದ್ದು ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾರಿನಲ್ಲಿದ್ದ 9 ಜನರು ಭದ್ರಾವತಿ ಮೂಲದವರು ಎಂದು ತಿಳಿದುಬಂದಿದ್ದು, ಅಪಘಾತ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ; ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ
ಬಾಳೆಹೊನ್ನೂರು: ಭಿಕ್ಷೆ ಬೇಡಿ ತಾತ್ಕಾಲಿಕ ಬಸ್ ನಿಲ್ದಾಣ ನಿರ್ಮಾಣ
ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಬಸ್ ನಿಲ್ದಾಣಕ್ಕಾಗಿ ಭಿಕ್ಷೆ ಬೇಡಿ ವಿನೂತನವಾಗಿ ಪ್ರತಿಭಟನೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಡಬಗೆರೆ ಗ್ರಾಮದಲ್ಲಿ ನಡೆದಿದೆ
ಇಲ್ಲಿಯ ಜನರು ಬಸ್ ನಿಲ್ದಾಣವಿಲ್ಲದೆ ಪರದಾಟ ನಡೆಸುತ್ತಿದ್ದರು. ಜನಪ್ರತಿನಿಧಿಗಳಿಗೆ ನೂರಾರು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಲ್ಲದೇ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ಅವರಿಗೂ ಮನವಿ ಮಾಡಿದರೂ ಯಾವುದೇ ಪ್ರಯೋಜವಾಗಿಲ್ಲ. ಇದರಿಂದ ರೋಸಿಹೋದ ಸಾರ್ವಜನಿಕರು ಭಿಕ್ಷಾಟನೆ ಮಾಡಿ ಅದರಿಂದ ಬಂದ ಹಣದಿಂದ ಟಾರ್ಪಲ್ ಖರೀದಿಸಿ ತಾತ್ಕಾಲಿಕ ಬಸ್ ನಿಲ್ದಾಣ ನಿರ್ಮಿಸಿದ್ದಾರೆ.












