ಮೂಡಿಗೆರೆ: ಮನೆ ಮಾಲೀಕನಿಗೆ ಖಾರದಪುಡಿ ಎರಚಿ ಲಕ್ಷಾಂತರ ಮೌಲ್ಯದ ನಗದು ದರೋಡೆ

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ನಾಲ್ವರು ಅಪರಿಚಿತ ಯುವಕರ ತಂಡವೊಂದು ಮನೆ ಮಾಲಿಕನಿಗೆ ಖಾರದ ಪುಡಿ ಎರಚಿ ಕುತ್ತಿಗೆಗೆ ಲಾಂಗ್ ಇಟ್ಟು ಮನೆಯಲ್ಲಿದ್ದ ಸುಮಾರು 5 ಲಕ್ಷ ನಗದು, 30 ಗ್ರಾಂ ಮಾಂಗಲ್ಯ ಸರವನ್ನ ಹೊತ್ತೊಯ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಳಿಗನಾಡು ಹೆಬ್ಬಾರಟ್ಟಿ ಗ್ರಾಮದಲ್ಲಿ ಗುರುವಾರ ರಾತ್ರಿ 8 ಗಂಟೆಗೆ ನಡೆದಿದೆ.

 

ಇದನ್ನೂ ಓದಿ; ಮೋಸ್ಟ್ ವಾಂಟೆಡ್‌ ನಕ್ಸಲೈಟ್ ಅನ್ನು ಕಾರ್ಕಳಕ್ಕೆ ಕರೆ ತಂದ ಪೊಲೀಸ್

ಹೆಬ್ಬಾರಟ್ಟಿ ಅನಂತ ಹೆಬ್ಬಾರ್ ಎಂಬುವರ ಮನೆಯಲ್ಲಿ ದರೋಡೆ ನಡೆದಿದ್ದು, ನಾಲ್ವರು ಅಪರಿಚಿತ ಯುವಕರ ತಂಡ ಮನೆಯ ಮೇಲೆ ದಾಳಿ ನಡೆಸಿ ಮನೆ ಮಾಲೀಕನ ಕುತ್ತಿಗೆಗೆ ಹರಿತವಾದ ಲಾಂಗ್ ಇಟ್ಟು ಬೆದರಿಸಿ ಮನೆಯಲ್ಲಿದ್ದ ಸುಮಾರು ಐದು ಲಕ್ಷ ನಗದು ಸೇರಿದಂತೆ ಚಿನ್ನಾಭರಣಗಳನ್ನು ದರೋಡೆ ಮಾಡಿದ್ದಾರೆ. ಈ ವೇಳೆ ತಡೆಯಲು ಬಂದ ಕಾರ್ಮಿಕ ಮಾಣಿ ಭಟ್ಟ ಎಂಬವರ ಕೈಗೆ ಹರಿತವಾದ ಆಯುಧದಿಂದ ಕೈ ಕಡಿದಿದ್ದಾರೆ. ಈ ವೇಳೆ ಕಾರ್ಮಿಕ ಬೊಬ್ಬೆ ಹೊಡೆದ ಪರಿಣಾಮ ಅಕ್ಕಪಕ್ಕದ ಜನ ಸೇರುತ್ತಿದ್ದಂತೆ ಮೂವರು ಕಾರಿನಲ್ಲಿ ಪರಾರಿಯಾಗಿದ್ದಾರೆ. ಓರ್ವ ಅರಮನೆ ತಲಗೂರು ಎಂಬ ಗ್ರಾಮದ ಅರಣ್ಯದಲ್ಲಿ ಅವಿತು ಕೂತಿದ್ದು, ಸ್ಥಳೀಯರು ಸೇರಿ ಅರಣ್ಯ ಪ್ರದೇಶದಲ್ಲಿ ಹುಡುಕಾಡಿದಾಗ ಓರ್ವ ಪತ್ತೆಯಾಗಿದ್ದು, ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನಾ ಸ್ಥಳಕ್ಕೆ ಬಾಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ; ಕೇಂದ್ರದ 300 ಯೂನಿಟ್ ಉಚಿತ ವಿದ್ಯುತ್ ಪಡೆಯುವುದು ಹೇಗೆ?; ಹೇಗೆ ಸಿಗಲಿದೆ ಸಬ್ಸಿಡಿ ಲಾಭ; ಅರ್ಜಿ ಸಲ್ಲಿಕೆ ಹೇಗೆ?

ಚಿಕ್ಕಮಗಳೂರು: ಬೀಟಮ್ಮ ಅಂಡ್ ಗ್ಯಾಂಗ್ ಆತಂಕ : ರಾಜ್ಯ ಹೆದ್ದಾರಿ ತಡೆದು ಸ್ಥಳೀಯರ ಆಕ್ರೋಶ

 

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ)ಬೀಟಮ್ಮ ಅಂಡ್ ಗ್ಯಾಂಗ್ ಕಳೆದ 20 ದಿನಗಳಿಂದ ಚಿಕ್ಕಮಗಳೂರು ತಾಲೂಕಿನ ಗ್ರಾಮಗಳಲ್ಲಿ ಬೀಡುಬಿಟ್ಟು ಕೋಟ್ಯಂತರ ಮೌಲ್ಯದ ಬೆಳೆ ಹಾನಿ ಮಾಡಿ, ದಿನಕ್ಕೊಂದು ಗ್ರಾಮದಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇಂದಾವರ ಗ್ರಾಮದಲ್ಲಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ; UPSC ಇಂದ ನೇಮಕ ಅಧಿಸೂಚನೆ; 122 ವಿವಿಧ ಪೋಸ್ಟ್‌ ಗಳ ನೇಮಕ

 

24 ಕ್ಕೂ ಹೆಚ್ಚು ಕಾಡಾನೆಗಳ ಹಿಂಡಿರುವ ಬೀಟಮ್ಮ ಗ್ಯಾಂಗ್ ವಾರದಿಂದ ಇಂದಾವರ ಸುತ್ತಮುತ್ತಾ ಬೀಡು ಬಿಟ್ಟಿದೆ. ಕಾಡಾನೆಗಳ ಉಪಟಳದಿಂದಾಗಿ ಗ್ರಾಮದ ಜನತೆ ಹಾಗೂ ರೈತರು ಹೈರಾಣಾಗಿ ಹೋಗಿದ್ದಾರೆ. ಇತ್ತ ತೋಟಗಳಿಗೆ ಹೋಗೋದಕ್ಕೂ ಭಯ ಪಡುವಂತೆ ಆಗಿದೆ. ಈ ಹಿನ್ನೆಲಯಲ್ಲಿ ತಕ್ಷಣವೇ ಸೂಕ್ತ ಕ್ರಮವಹಿಸಿ ಆನೆಗಳನ್ನ ಸ್ಥಳಾಂತರಿಸುವಂತೆ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ; ರಾಜ್ಯದ ರೈತರ ಗಮನಕ್ಕೆ; ಗ್ರಾಮ ಪಂಚಾಯಿತಿಗಳಲ್ಲಿ ಬರ ಪರಿಹಾರ ಪಟ್ಟಿ ಪ್ರಕಟ

 

ಹರಿಹರಪುರ: ಲೋಕ ಕಲ್ಯಾಣಾರ್ಥವಾಗಿ ಶಾರದಾ ಪರಮೇಶ್ವರಿ ದೇವಿಗೆ ಋಕ್ ಸಂಹಿತಾ ಮಹಾಭಿಷೇಕ

ಹರಿಹರಪುರ: (ನ್ಯೂಸ್ ಮಲ್ನಾಡ್ ವರದಿ) ದಿವ್ಯಕ್ಷೇತ್ರ ಹರಿಹರಪುರ ಮಠದಲ್ಲಿನ ಶಾರದಾ ಪರಮೇಶ್ವರಿ ದೇವಿಗೆ ಲೋಕ ಕಲ್ಯಾಣಾರ್ಥವಾಗಿ ಋಕ್ ಸಂಹಿತಾ ಮಹಾಭಿಷೇಕವನ್ನು ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ನೆರವೇರಿಸಿದರು.

ಶ್ರೀಮಠ ಹರಿಹರಪುರದ ಪರಮಪೂಜ್ಯ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳವರು, ಇತ್ತೀಚಿಗೆ ಅಯೋಧ್ಯೆಯಲ್ಲಿ ಲೋಕಾರ್ಪಣೆಗೊಂಡ ರಾಮಮಂದಿರದ ಪ್ರಾಣ ಪ್ರತಿಷ್ಠಾಪನಾ ಮಹೋತ್ಸವದಲ್ಲಿ ದಿವ್ಯ ಸಾನ್ನಿಧ್ಯವನ್ನು ವಹಿಸಿದ್ದರ ನಿಮಿತ್ತವಾಗಿ ಅಯೋಧ್ಯೆ – ಕಾಶಿ ತೀರ್ಥ ಸಮಾರಾಧನೆಯನ್ನು ಕೂಡ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಹರಿಹರಪುರದಲ್ಲಿ ಸಾಂಗವಾಗಿ ನೆರವೇರಿಸಿದರು.

ಭಕ್ತರು ಕಾರ್ಯಕ್ರಮದಲ್ಲಿ ಶ್ರದ್ಧಾಭಕ್ತಿಯಿಂದ ಭಾಗವಹಿಸಿ ದೇವರ ಪ್ರಸಾದ ಪಡೆದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.