ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ಸರ್ಕಾರಿ ಶಾಲೆಗಳನ್ನು ಉಳಿಸಬೇಕು ಬೆಳೆಸಬೇಕು ಎಂಬ ನಿಟ್ಟಿನಲ್ಲಿ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿ ಪ್ರಚಾರ ಮಾಡುತ್ತಿದೆ. ಆದರೆ, ಅಧಿಕಾರಿಗಳ ಬೇಜವಾಬ್ದಾರಿತನದಿಂದ ಸರ್ಕಾರಿ ಶಾಲೆಯನ್ನು ಮುಚ್ಚುವ ಸ್ಥಿತಿಗೆ ಬಂದಿದೆ.
ಇದನ್ನೂ ಓದಿ: ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಈ ದಿನ ಲಾಸ್ಟ್ ಡೇಟ್!; ಇಲ್ಲಿದೆ ನೋಡಿ ಡಿಟೈಲ್ಸ್

ಮಲೆನಾಡು ಭಾಗದಲ್ಲಿ ಕಳೆದ ವಾರ ಸುರಿದ ಮಳೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಕೆಲವು ದಿನ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಇದೀಗ ಕೊಂಚ ಮಳೆ ಕಡಿಮೆ ಆದ ಕಾರಣ ಶಾಲೆಗಳು ಪ್ರಾರಂಭವಾಗಿದೆ. ಆದರೆ ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಅಳೇಹಳ್ಳಿ ಶಾಲೆಗೆ ಮಾತ್ರ ಮಳೆ ಕಡಿಮೆ ಆದಂತೆ ಕಾಣುತ್ತಿಲ್ಲ.
ಹೌದು, ಎನ್. ಆರ್. ಪುರ ತಾಲೂಕಿನ ಅಳೇಹಳ್ಳಿ ಶಾಲೆಯಲ್ಲಿ ಮಕ್ಕಳ ಕೊರತೆಯಿಂದ ಮುಚ್ಚುವ ಹಂತಕ್ಕೆ ತಲುಪಿತ್ತು. ಇದನ್ನು ಗಮನಿಸಿದ ಗ್ರಾಮಸ್ಥರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಸೇರಿ ಸರ್ಕಾರಿ ಶಾಲೆ ಉಳಿಸುವ ಅಭಿಯಾನವನ್ನು ಮಾಡಿ ಶಾಲೆಗೆ ಬೇಕಾದ ಸೌಲಭ್ಯಗಳನ್ನು ಒದಗಿಸಿದ್ದಾರೆ. ಆದರೆ ಶಿಕ್ಷಣಾಧಿಕಾರಿಯ ಬೇಜವಾಬ್ದಾರಿತನದಿಂದ ಮುಚ್ಚುವ ಹಂತಕ್ಕೆ ತಲುಪಿದೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆಯಲ್ಲಿ ಮತ್ತೊಂದು ಅಪ್ಡೇಟ್; ಇದೇ ನೋಡಿ ಕೊನೆಯ ದಿನಾಂಕ
ಮುಚ್ಚುವ ಹಂತಕ್ಕೆ ತಲುಪಿಸುತ್ತಿದ್ದಾರಾ ಕ್ಷೇತ್ರ ಶಿಕ್ಷಣಾಧಿಕಾರಿ?!:
ಹೌದು, ನಿಯಮಗಳ ಪ್ರಕಾರ ಈ ಶಾಲೆಗೆ ಇಬ್ಬರು ಶಿಕ್ಷಕರನ್ನು ನೇಮಿಸಬೇಕಿತ್ತು. ಆದರೆ ನೇಮಿಸಿರುವ ಶಿಕ್ಷಕರು ಕೂಡ ವಾರಕ್ಕೆ ಒಂದೆರಡು ಭಾರಿ ಬಂದು ಹೋಗುತ್ತಿದ್ದಾರೆ. ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ. ಪೋಷಕರು ಮಕ್ಕಳನ್ನ ಶಾಲೆಗೆ ಕರೆತಂದು ಶಿಕ್ಷಕರು ಬಾರದೇ ಇರುವುದನ್ನು ಗಮನಿಸಿ ವಾಪಸ್ ಕರೆದುಕೊಂಡು ಹೋಗುತ್ತಿದ್ದಾರೆ. ಕಳೆದ ಮೂರು ನಾಲ್ಕು ತಿಂಗಳಿನಿಂದ ಇದೇ ರೀತಿ ಶಾಲೆ ನಡೆಯುತ್ತಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿಯ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡಿಲ್ಲ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: ವಾಹನ ಸವಾರರೇ ಇಂದಿನಿಂದ ಬದಲಾಗಲಿದೆ ಈ ರೂಲ್ಸ್; ನಿಯಮ ಉಲ್ಲಂಘಿಸಿದ್ರೆ ದಂಡ ಫಿಕ್ಸ್.!
ಸರ್ಕಾರಿ ಶಾಲೆಗೆ ಮಕ್ಕಳು ಬರುತ್ತಿಲ್ಲವೆಂಬ ಕೂಗು ಒಂದೆಡೆಯಾದರೆ ಬಂದ ಮಕ್ಕಳಿಗೆ ಪಾಠ ಮಾಡಲು ಸಹ ಶಿಕ್ಷಕರನ್ನು ಕೊಡದೆ ಶಾಲೆಯನ್ನು ಮುಚ್ಚುವ ಹಂತಕ್ಕೆ ಕೊಂಡೊಯ್ಯುತ್ತಿರುವ ಶಿಕ್ಷಣ ಇಲಾಖೆಯ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆಲ್ಲಾ ನೇರ ಕಾರಣ ಕ್ಷೇತ್ರ ಶಿಕ್ಷಣಾಧಿಕಾರಿ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.
ಇದನ್ನೂ ಓದಿ: ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 30,000 ಸ್ಕಾಲರ್ ಶಿಪ್;ಈ ಷರತ್ತು ಅನ್ವಯ















