ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) ವೈದ್ಯರ ನಿರ್ಲಕ್ಷಕ್ಕೆ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ.
ಇದನ್ನೂ ಓದಿ; ಇ-ಖಾತೆ ಪಡೆಯುವವರಿಗೆ ಮುಖ್ಯ ಮಾಹಿತಿ; ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್

ತರೀಕೆರೆ ಹೊರವಲಯದ ದೋರನಾಳು ಗ್ರಾಮದ ನವೀನ್ ಹಾಗೂ ಮೀನಾ ದಂಪತಿಯ ಪುತ್ರ ಒಂದೂವರೆ ವರ್ಷದ ಮನ್ವಿತ್ ಗೆ ಮಂಗಳವಾರ ಮಧ್ಯಾಹ್ನದ ವೇಳೆಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಕೂಡಲೇ ಪಾಲಕರು ಮನ್ವಿತ್ನನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಇದನ್ನೂ ಓದಿ; ರೈತರ ಗಮನಕ್ಕೆ; ತೋಟಗಾರಿಕೆ ಬೆಳೆ ಬೆಳೆಯಲು ಅರ್ಜಿ ಆಹ್ವಾನ
ಆದರೆ, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೇ ಒಂದೂವರೆ ವರ್ಷದ ಮಗು ಮನ್ವಿತ್ ಸಾವನ್ನಪ್ಪಿದೆ. ವೈದ್ಯರ ನಿರ್ಲಕ್ಷ್ಯ ಖಂಡಿಸಿ ಮೃತ ಮಗುವಿನೊಂದಿಗೆ ತಂದೆ, ತಾಯಿ ಸೇರಿದಂತೆ ಸಂಬಂಧಿಕರು ಮಂಗಳವಾರ ಸಂಜೆ ಪ್ರತಿಭಟನೆ ನಡೆಸಿ ವೈದ್ಯರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಬಿಗ್ ಶಾಕ್; ಜಾರಿಗೆ ಬರಲಿವೆ ಈ ಹೊಸ ನಿಯಮಗಳು!












