ಜಿಲ್ಲೆಯಲ್ಲಿ ಮತ್ತೆ ಶುರುವಾಯ್ತು ಪೋಸ್ಟರ್ ವಾರ್

ಕಡೂರು:  (ನ್ಯೂಸ್ ಮಲ್ನಾಡ್ ವರದಿ) ಹಾಸನ ಲೋಕಸಭಾ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಕಡೂರು ಕಾಂಗ್ರೆಸ್ ಪೋಸ್ಟರ್ ವಾರ್ ಬೆನ್ನಲ್ಲೆ ಇದೀಗ ಜೆಡಿಎಸ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ವಿರುದ್ಧ ಪೋಸ್ಟರ್ ವಾರ್ ಶುರುವಾಗಿದೆ.

ಇದನ್ನೂ ಓದಿ; ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಉದ್ಯೋಗ; 44 ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ; ಮತ್ತೆ ಟ್ರೆಂಡಿಂಗ್ ನಲ್ಲಿ ‘RCB Hawa’ ರ‍್ಯಾಪ್ ಸಾಂಗ್; CSK ಫ್ಯಾನ್ಸ್ ಗೆ ಪರೋಕ್ಷವಾಗಿ ಕೌಂಟರ್ ಕೊಟ್ಟ ರ‍್ಯಾಪರ್ ಚೇತನ್

ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ 5 ವರ್ಷಗಳ ಕಾಲ ದಂಡಿಗನಹಳ್ಳಿ ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದ ನೀವು, ನಿಮ್ಮ ಅಧಿಕಾರಾವಧಿಯಲ್ಲಿ ನಿಮ್ಮದೇ ಕಾಂಗ್ರೆಸ್ ಪಕ್ಷ 2 ವರ್ಷಗಳ ಕಲಾ ಅವಧಿಯಲ್ಲಿತ್ತು. ಆ ಸಮಯದಲ್ಲಿ ಕ್ಷೇತ್ರಕ್ಕೆ ನಿಮ್ಮ ಕೊಡುಗೆ ಏನೆಂದು ಜನರ ಮುಂದಿಟ್ಟು ಈಗಿನ ಚುನಾವಣೆಗೆ ಮತ ಕೇಳಿ ಎಂದು ಅಭಿಯಾನ ನಡೆಸಿದ್ದಾರೆ.

ಇದನ್ನೂ ಓದಿ; ವೋಟರ್‌ ಲಿಸ್ಟ್‌ನಲ್ಲಿ ನಿಮ್ಮ ಹೆಸರು ಇದೆಯೇ?; ಚೆಕ್‌ ಮಾಡಿಕೊಳ್ಳುವ ಸುಲಭ ವಿಧಾನ ಇಲ್ಲಿದೆ..

ಅಲ್ಲದೆ ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯದ ಕುರಿತು “ಕೈ ಕೊಟ್ಟಿದೆ ಕಾಂಗ್ರೆಸ್” ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಹಂಚಿಕೊಂಡಿದ್ದು, ಎಲ್ಲೆಡೆ ವೈರಲ್ ಆಗುತ್ತಿದೆ.

ಇದನ್ನೂ ಓದಿ; ಈ ಬ್ಯಾಂಕ್ ನಲ್ಲಿ ಸಿಗುತ್ತೆ ಆರೋಗ್ಯವೆಚ್ಚದ ಸಾಲ; ಯಾವ ಬ್ಯಾಂಕ್. ಯಾರು ಅರ್ಹರು ಇಲ್ಲಿದೆ ಡಿಟೈಲ್ಸ್

ಕಡೂರು: ಪ್ರಜ್ವಲ್ ರೇವಣ್ಣ ವಿರುದ್ಧ ಪೋಸ್ಟರ್ ಸಮರ!

ಕಡೂರು: (ನ್ಯೂಸ್ ಮಲ್ನಾಡ್ ವರದಿ) ಹಾಸನ ಲೋಕಸಭಾ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಕಡೂರು ಕಾಂಗ್ರೆಸ್ ಪೋಸ್ಟರ್ ವಾರ್ ತಂತ್ರ ಹೂಡಿದೆ. ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರಜ್ವಲ್ ರೇವಣ್ಣ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ “ಲೋಕಸಭಾ ಚುನಾವಣಾ ಕ್ವಿಜ್ 2024” ಎಂದು ಪೋಸ್ಟರ್ ಹಂಚಿಕೊಂಡಿದ್ದಾರೆ.

ಪೋಸ್ಟರ್ ಗಳಲ್ಲಿ ಹಲವು ಪ್ರಶ್ನೆಗಳನ್ನು ಕೇಳಲಾಗಿದ್ದು, ಸಂಸದರಾದ ಬಳಿಕ ಕಡೂರಿಗೆ ನಿಮ್ಮ ಕೊಡುಗೆ ಏನು?… ಚುನಾವಣೆ ಸಂದರ್ಭದಲ್ಲಿ ಮಾತ್ರ ಕಡೂರು ಪ್ರವಾಸ ಮಾತ್ರಾನಾ?… ಲೋಕಸಭಾ ಸದಸ್ಯರಾಗಿ ಕಡೂರಿಗೆ ಮಾಡಿರುವ ಅಭಿವೃದ್ಧಿ ಕೆಲಸಗಳು ಎಷ್ಟು? ಎಂದು ಪೋಸ್ಟರ್ ನಲ್ಲಿ ಬರೆಯಲಾಗಿದೆ.

ಆತ್ಮಸಾಕ್ಷಿ ಕೇಳಿಕೊಳ್ಳಿ ಸಂಸದರೇ ಎಂದು ಸವಾಲೊಡ್ಡಿದ್ದು, ಜೆಡಿಎಸ್ ಹಾಗೂ ಬಿಜೆಪಿಗೆ ಮತ ನೀಡಬೇಡಿ ಎಂದು ಕಡೂರು ಶಾಸಕ ಕೆಎಸ್ ಆನಂದ್ ಇರುವ ವಾಟ್ಸಪ್ ಗ್ರೂಪ್ ನಿಂದ ಪೋಸ್ಟರ್ ವೈರಲ್ ಆಗುತ್ತಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.