ಚಿಕ್ಕಮಗಳೂರು: ಬಿಜೆಪಿ ಫಲಾನುಭವಿ ಪ್ರಕೋಷ್ಟದ ರಾಜ್ಯ ಸಮಿತಿ ಸದಸ್ಯರಾಗಿ ಪ್ರವೀಣ್ ಖಾಂಡ್ಯ ನೇಮಕ

ಚಿಕ್ಕಮಗಳೂರು:  (ನ್ಯೂಸ್ ಮಲ್ನಾಡ್ ವರದಿ) ಭಾರತೀಯ ಜನತಾ ಪಕ್ಷದ ಫಲಾನುಭವಿ ಪ್ರಕೋಷ್ಟದ ರಾಜ್ಯ ಸಮಿತಿಯ ಸದಸ್ಯರನ್ನಾಗಿ ಶ್ರೀ ಪ್ರವೀಣ್ ಕುಮಾರ್ (ಖಾಂಡ್ಯ) ಅವರನ್ನು ನಿಯುಕ್ತಿ ಮಾಡಿ ಆದೇಶಿಸಲಾಗಿದೆ.


ಇದನ್ನೂ ಓದಿ: 10th ಪಾಸ್ ಆದ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,500 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಫಲಾನುಭವಿ ಪ್ರಕೋಷ್ಠದ ರಾಜ್ಯ ಸಂಚಾಲಕರಾದ ಪ್ರಸನ್ನ ನಾಯ್ಕ ಅವರು ಆದೇಶ ಪತ್ರವನ್ನು ಹಸ್ತಾಂತರ ಮಾಡುವ ನೂತನ ಜವಾಬ್ದಾರಿಯನ್ನು ಘೋಷಿಸಿದರು.

ಪ್ರವೀಣ್ ಖಾಂಡ್ಯ ಈ ಹಿಂದೆ ಬಜರಂಗದಳದ ರಾಜ್ಯ ಮಟ್ಟದ ಮುಖಂಡರಾಗಿ ಜವಾಬ್ದಾರಿ ನಿರ್ವಹಿಸಿದ್ದರು, ಕಳೆದ ಎರಡು ಚುನಾವಣೆಯಿಂದ ಬಿಜೆಪಿ ಸಕ್ರಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಶಂಕರ ಭಾರತಿ ಎಂಬ ಗೋಶಾಲೆಯನ್ನು ಸಹ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,200 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಮಲೆನಾಡಿನಲ್ಲಿ ಧಾರಾಕಾರ ಮಳೆ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು
ಮೂಡಿಗೆರೆ:  (ನ್ಯೂಸ್ ಮಲ್ನಾಡ್ ವರದಿ) ಮಲೆನಾಡಿನಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು ಗುಡ್ಡ ಕುಸಿತ, ವಾಹನ ಅಪಘಾತದಂತಹ ಪ್ರಕರಣಗಳು ಸಂಭವಿಸುತ್ತಿವೆ.

ಇಂದು ಮೂಡಿಗೆರೆ ತಾಲ್ಲೂಕಿನ ಬಿದ್ರಹಳ್ಳಿ ಸಮೀಪ ಎರ್ಟಿಗ ವಾಹನವೊಂದು ಪಲ್ಟಿಯಾದ ಘಟನೆ ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ನೀರು ನಿಂತ ಕಾರಣದಿಂದ ಚಾಲಕನ ನಿಯಂತ್ರಣ ತಪ್ಪಿ ವಾಹನವು ಪಲ್ಟಿ ಹೊಡೆದಿದೆ.

ಕೊಡಗಿನ ಸೋಮವಾರಪೇಟೆಯಿಂದ ಕಳಸಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.