ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮದುವೆ ಆಮಮಂತ್ರಣ ಪತ್ರಿಕೆಯಲ್ಲಿ ನರೇಂದ್ರ ಮೋದಿಯವರ ಭಾವಚಿತ್ರ ಸಹಿತ ಈ ಭಾರೀ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಗೆ ಮತ ನೀಡಿದರೆ ಮದುವೆಗೆ ನಿಜವಾದ ಉಡುಗೊರೆ ಎಂದು ಮುದ್ರಿಸುವ ಮೂಲಕ ಮೋದಿ ಅಭಿಮಾನಿಗಳು ಸದ್ದಿಲ್ಲದೆ ಪ್ರಚಾರ ನಡೆಸುತ್ತಿದ್ದಾರೆ.
ಇದನ್ನೂ ಓದಿ; ನಿಮ್ಮ ವಾಹನದ ಫಾಸ್ಟ್ ಟ್ಯಾಗ್ KYC ಆಗಿದ್ಯಾ?;ಈ ದಿನದೊಳಗೆ ಫಾಸ್ಟ್ ಟ್ಯಾಗ್ ಗಳ ಕೆವೈಸಿ ಪೂರ್ಣಗೊಳಿಸಲು ಡೆಡ್ ಲೈನ್

ಚಿಕ್ಕಮಗಳೂರು ತಾಲೂಕಿನ ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿಯಾದ ಆಲ್ದೂರಿನ ಶಶಿ, ಫೆಬ್ರವರಿ 5 ರಂದು ಚಿಕ್ಕಮಗಳೂರಿನಲ್ಲಿ ತಂಗಿ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪರ ಮತಯಾಚಿಸಿ ಲಗ್ನ ಪತ್ರಿಕೆ ಮುದ್ರಿಸಿದ್ದಾರೆ. ವಧುವರರಿಗೆ ಉಡುಗೊರೆ ಬೇಡ… ಮೋದಿಗೆ ಮತ ನೀಡಿ. ಯಾಕೆಂದರೆ ಮಕ್ಕಳ ಭವಿಷ್ಯ ಮೋದಿಯಿಂದ ಮಾತ್ರ ಸುಭದ್ರ ಎಂದು ಮದುವೆ ಆಮಂತ್ರಣದಲ್ಲಿ ಮೋದಿ ಮತ ನೀಡುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ; ಶಿವಮೊಗ್ಗ GTTC ಯಲ್ಲಿ ಉದ್ಯೋಗವಕಾಶ; ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆ ಏನು?
ಕಾಡಿನ ನಡುವೆ ತೇಜಸ್ವಿ ಕೃತಿಗಳ ಓದು
ಬಣಕಲ್: (ನ್ಯೂಸ್ ಮಲ್ನಾಡ್ ವರದಿ) ಸದಾ ಪ್ರವಾಸಿಗರಿಂದ ಗಿಜಿಗುಡುವ ರಾಣಿಝರಿ ಬಲ್ಲಾಳರಾಯನ ದುರ್ಗದಲ್ಲಿ ಶನಿವಾರ ಪರಿಸರ ಸಂರಕ್ಷಣೆಯ ಕುರಿತು ತೇಜಸ್ವಿ ಅವರ ಕೃತಿಗಳ ಓದಿನ ಸದ್ದು ಎಲ್ಲೆಡೆ ಮನೆ ಮಾಡಿತ್ತು.
ಕೀಟತಜ್ಞರಾದ ಮೂಡಿಗೆರೆಯ ಅವಿನಾಶ್ ಮಾತನಾಡಿ, ಪರಿಸರದ ಬಗ್ಗೆ ಬೆರಗು ಮತ್ತು ಪರಿಸರದ ಉಳಿವಿನ ಮಹತ್ವವನ್ನು ತೇಜಸ್ವಿ ಅವರು ತಮ್ಮ ಬಹುತೇಕ ಕೃತಿಗಳಲ್ಲಿ ಪ್ರತಿಪಾದಿಸಿದ್ದಾರೆ. ತೇಜಸ್ವಿ ಕೃತಿಗಳಿಂದಾಗಿ ಹೊಸದೊಂದು ಓದುಗ ವರ್ಗ ಸೃಷ್ಠಿಯಾಗಿ ಓದಿನ ರುಚಿ ಎಲ್ಲರಲ್ಲೂ ಮೂಡುತ್ತಿದೆ. ಪರಿಸರ, ಜೀವಸಂಕುಲ, ಬಾಹ್ಯಾಕಾಶ, ಮುಂತಾದ ವಿಷಯಗಳ ಬಗ್ಗೆ ತೇಜಸ್ವಿ ಅವರು ತಮ್ಮ ಕೃತಿಗಳಲ್ಲಿ ಮನಮುಟ್ಟುವಂತೆ ಚಿತ್ರಿಸಿದ್ದಾರೆ ಎಂದರು.
ಮಂಡ್ಯದ ಅಂಶು ಅವರು ಪರಿಸರದ ಕಥೆ, ಚಿಕ್ಕಮಗಳೂರಿನ ಕಾರ್ತಿಕ್ ಎಂ.ಕೆ ಹುಲಿಯೂರಿನ ಸರಹದ್ದು, ದೀಪಗೌಡ ಅವರು ಪಾಕಕ್ರಾಂತಿ, ತುಮಕೂರಿನ ಪಲ್ಲವಿ ರಂಗನಾಥ್ ಮಾಯಾಲೋಕ, ಚಿತ್ರದುರ್ಗದ ದಿನೇಶ್ ಕೆ.ಎಸ್ ಅವರು ಮಿಸ್ಸಿಂಗ್ ಲಿಂಕ್, ಬೆಂಗಳೂರಿನ ಪ್ರೇಮ ಅವರು ಹೆಜ್ಜೆ ಮೂಡದ ಹಾದಿ, ಬೆಂಗಳೂರಿನ ಸುನಿತಾ ಮತ್ತು ವಿನೋದ್ ಅವರು ವಿಸ್ಮಯ ವಿಶ್ವ, ಶಿರಾದ ಶ್ರೀನಾಥ್ ಅವರು ಪಾಕಕ್ರಾಂತಿ, ಮೂಡಿಗೆರೆಯ ಅವಿನಾಶ್ ಅವರು ಪಾಕಕ್ರಾಂತಿ, ನಂದೀಶ್ ಬಂಕೇನಹಳ್ಳಿ ಅವರು ಕರ್ವಾಲೊ, ಕೃತಿಯನ್ನು ಓದಿದರು. ಚಿಕ್ಕಮಗಳೂರಿನ ಸತ್ಯನಾರಾಯಣ, ಓಂಕಾರಪ್ಪ, ಹಾಸನದ ಬಾಲು ತೇಜಸ್ವಿ ಅವರ ಬದುಕು ಬರಹದ ಕುರಿತು ಚರ್ಚೆ ನಡೆಸಿದರು.
ಪರಿಸರದ ಸಂರಕ್ಷಣೆ, ತೇಜಸ್ವಿ ಅವರ ಬದುಕು, ಬರಹಗಳ ಬಗ್ಗೆ ವಿಚಾರ ವಿನಿಮಯ ನಡೆಯಿತು. ಕಾಡಿನಲ್ಲಿ ಓದು ಕಾರ್ಯಕ್ರಮಕ್ಕೂ ಮುನ್ನ ರಾಣಿಝರಿಯಿಂದ ಬಲ್ಲಾಳರಾಯನ ದುರ್ಗಕ್ಕೆ ಚಾರಣ ನಡೆಸಲಾಯಿತು. ಕೀಟತಜ್ಞರಾದ ಅವಿನಾಶ್ ಅವರು ಕೀಟಗಳ ಬಗ್ಗೆ ಮಾಹಿತಿ ನೀಡಿದರು. ಪ್ಲಾಸ್ಟಿಕ್ ನ್ನು ಎಲ್ಲಿಯೂ ಬಳಕೆ ಮಾಡದೇ ಪ್ಲಾಸ್ಟಿಕ್ ಮುಕ್ತ ಚಾರಣ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.
ಈ ಸಂದರ್ಭದಲ್ಲಿ ಕೀಟ ತಜ್ಞರಾದ ಅವಿನಾಶ್, ತೇಜಸ್ವಿ ಅವರ ಒಡನಾಡಿ ಹಾಗೂ ಕಲಾವಿದರಾದ ಬಾಪುದಿನೇಶ್, ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸಂಯೋಜಕ ನಂದೀಶ್ ಬಂಕೇನಹಳ್ಳಿ, ಸಿಬ್ಬಂದಿಗಳಾದ ಸತೀಶ್ ತರುವೆ, ಸಂಗೀತಾ, ಅರಣ್ಯ ಇಲಾಖೆಯ ಅಧಿಕಾರಿಗಳಾದ ಅಭಿಲಾಷ್, ಚಂದನ್ ಸಿಬ್ಬಂದಿ ಭವಿತ್ ಹಾಗೂ ರಾಜ್ಯದ ವಿವಿದೆಡೆಯಿಂದ ಆಗಮಿಸಿದ 40 ಕ್ಕೂ ಹೆಚ್ಚು ಚಾರಣಿಗರು ಇದ್ದರು.












