ಚಿಕ್ಕಮಗಳೂರು; ಬಸ್‌- ಕಾರು ಮುಖಾಮುಖಿ ಡಿಕ್ಕಿ | 9 ಮಂದಿಗೆ ಗಂಭೀರ ಗಾಯ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಒಂಬತ್ತು ಜನ ಪ್ರಯಾಣಿಕರಿಗೆ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಬೇಲೇನಹಳ್ಳಿ ಸಮೀಪ ಸಂಭವಿಸಿದೆ.

 

ಇದನ್ನೂ ಓದಿ; ಕುಸಿಯುತ್ತಿದೆ ಚಿನ್ನದ ಬೆಲೆ; ಇಲ್ಲಿದೆ ನೋಡಿ ಇಂದಿನ ದರ-11.09.2023

ಕೆ.ಎಸ್.ಆರ್.ಟಿ.ಸಿ ಬಸ್ ಶಿವಮೊಗ್ಗ ಕಡೆಯಿಂದ ತರೀಕೆರೆ ಮಾರ್ಗವಾಗಿ ಸಂಚರಿಸುತ್ತಿತ್ತು. ಕಾರಿನಲ್ಲಿದ್ದವರು ತರೀಕೆರೆಯಿಂದ ಭದ್ರಾವತಿ ಕಡೆಗೆ ತೆರಳುತ್ತಿದ್ದರು. ಬಸ್ ಮತ್ತು ಕಾರು ನಡುವೆ ಬೇಲನಹಳ್ಳಿ ಗ್ರಾಮದ ಸಮೀಪ ಡಿಕ್ಕಿ ಸಂಭವಿಸಿದ್ದು ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಇನ್ನು ಕಾರಿನಲ್ಲಿದ್ದ 9 ಜನರಿಗೆ ಗಂಭೀರ ಗಾಯಗಳಾಗಿದ್ದು ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

 

Road Accident:
Road Accident:

ಇದನ್ನೂ ಓದಿ; ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು

ಕಾರಿನಲ್ಲಿದ್ದ 9 ಜನರು ಭದ್ರಾವತಿ ಮೂಲದವರು ಎಂದು ತಿಳಿದುಬಂದಿದ್ದು, ಅಪಘಾತ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಬಾಳೆಹೊನ್ನೂರು: ಭಿಕ್ಷೆ ಬೇಡಿ ತಾತ್ಕಾಲಿಕ ಬಸ್ ನಿಲ್ದಾಣ ನಿರ್ಮಾಣ

ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಬಸ್ ನಿಲ್ದಾಣಕ್ಕಾಗಿ ಭಿಕ್ಷೆ ಬೇಡಿ ವಿನೂತನವಾಗಿ ಪ್ರತಿಭಟನೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಡಬಗೆರೆ ಗ್ರಾಮದಲ್ಲಿ ನಡೆದಿದೆ

ಇಲ್ಲಿಯ ಜನರು ಬಸ್ ನಿಲ್ದಾಣವಿಲ್ಲದೆ ಪರದಾಟ ನಡೆಸುತ್ತಿದ್ದರು. ಜನಪ್ರತಿನಿಧಿಗಳಿಗೆ ನೂರಾರು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಲ್ಲದೇ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ಅವರಿಗೂ ಮನವಿ ಮಾಡಿದರೂ ಯಾವುದೇ ಪ್ರಯೋಜವಾಗಿಲ್ಲ. ಇದರಿಂದ ರೋಸಿಹೋದ ಸಾರ್ವಜನಿಕರು ಭಿಕ್ಷಾಟನೆ ಮಾಡಿ ಅದರಿಂದ ಬಂದ ಹಣದಿಂದ ಟಾರ್ಪಲ್ ಖರೀದಿಸಿ ತಾತ್ಕಾಲಿಕ ಬಸ್ ನಿಲ್ದಾಣ ನಿರ್ಮಿಸಿದ್ದಾರೆ.

 

ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನಾಪತ್ತೆ ಪ್ರಕರಣ | ಒಬ್ಬರ ಮೃತ ದೇಹ ಪತ್ತೆ

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಭೀಮನಕಟ್ಟೆ ಸಮೀಪ ನಡೆದಿದೆ. ಗೌತಮ್ (27) ಮತ್ತು ಸಂಜಯ್ (25) ನಾಪತ್ತೆಯಾಗಿರುವ ಯುವಕರು. ಅದರಲ್ಲಿ ಗೌತಮ್ ಅವರ ಮೃತದೇಹವನ್ನು ನೀರಿನಿಂದ ತೆಗೆಯಲಾಗಿದೆ. ಇನ್ನೋರ್ವ ಯುವಕನ ಪತ್ತೆಗಾಗಿ ಶೋಧ ಕಾರ್ಯಚರಣೆ ನಡೆಸುತ್ತಿದ್ದಾರೆ.

ಬೆಂಗಳೂರಿನಿಂದ ತೀರ್ಥಹಳ್ಳಿಗೆ ಪ್ರವಾಸ ಬಂದಿದ್ದ ಬೆಂಗಳೂರಿನ ಮೂವರು ಯುವಕರು ಭಾನುವಾರ ಭೀಮನಕಟ್ಟೆಗೆ ಹೋಗಿದ್ದರು. ಅಲ್ಲಿ ತುಂಗಾ ನದಿಗೆ ಈಜಲು ತೆರಳಿದ್ದಾರೆ. ಆದರೆ ಗೌತಮ್ ಮತ್ತು ಸಂಜಯ್ ನೀರಿನ ಸೆಳವಿಗೆ ಸಿಕ್ಕಿ ಕೊಚ್ಚಿಕೊಂಡು ಹೋಗಿದ್ದಾರೆ. ಅವರ ಜೊತೆಗಿದ್ದ ಗಿರೀಶ್ ಮತ್ತು ಸ್ಥಳದಲ್ಲಿದ್ದ ಸ್ಥಳೀಯರು ಕೂಡಲೇ ಪೊಲೀಸರು ಮತ್ತು ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.