ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ವಿಚಾರಣಾಧೀನ ಕೈದಿಯೊಬ್ಬ ಮೃತಪಟ್ಟಿರುವ ಘಟನೆ ಬುಧವಾರ ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಸತೀಶ್ ಮೃತಪಟ್ಟ ಕೈದಿ.
ಇದನ್ನೂ ಓದಿ; ಪಿಎಂ ಕಿಸಾನ್ ಸಮ್ಮಾನ್ ಯೋಜನೆ; 16 ನೇ ಕಂತಿನ ಹಣ ಜಮಾ; ಹೀಗೆ ಚೆಕ್ ಮಾಡಿ

ದಾಯಾದಿಗಳ ಕಲಹ ಪ್ರಕರಣ ಸಂಬಂಧ 7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಸತೀಶ್ ನನ್ನು ನಾಲ್ಕು ದಿನಗಳ ಹಿಂದೆ ಪೊಲೀಸರು ಬಂಧಿಸಿ ಜಿಲ್ಲಾ ಕಾರಾಗೃಹದಲ್ಲಿ ಇರಿಸಿದ್ದರು. ಕಾರಾಗೃಹಕ್ಕೆ ಬಂದ ದಿನವೇ ಅನಾರೋಗ್ಯ ಉಂಟಾಗಿ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಗಿನ ಜಾವ ಸಾವನ್ನಪ್ಪಿದ್ದಾನೆ.
ಇದನ್ನೂ ಓದಿ; ಗೃಹಲಕ್ಷ್ಮೀ ಯೋಜನೆ; ಹಣ ಬಾರದೇ ಇರುವ ಮಹಿಳೆಯರಿಗೆ ಬಂಪರ್ ಸುದ್ದಿ ಕೊಟ್ಟ ಸರ್ಕಾರ!; ಏನದು? ಇಲ್ಲಿದೆ ಮಾಹಿತಿ
ಸತೀಶ್ ಸಾವಿನ ಗೆ ಪತ್ನಿ ನೇತ್ರಾ ಅನುಮಾನ ವ್ಯಕ್ತಪಡಿಸಿದ್ದಾರೆ. ಸತೀಶ್ ಕುತ್ತಿಗೆ, ಕೈ, ದೇಹದ ಇತರೆ ಭಾಗದಲ್ಲಿ ಗಾಯದ ಗುರುತುಗಳಿದ್ದು, ಕಾರಾಗೃಹದ ಸಿಬ್ಬಂದಿ ಮತ್ತು ಪೊಲೀಸರು ತೀವ್ರವಾಗಿ ಹಲ್ಲೆ ನಡೆಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದರಿಂದಾಗಿ ಸತೀಶ್ ಮೃತಪಟ್ಟಿದ್ದಾಗಿ ಆರೋಪಿಸಿದ್ದಾರೆ. ಪ್ರಕರಣ ಸಂಬಂಧ ನ್ಯಾಯಾಧೀಶರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮೃತನ ಕುಟುಂಬದವರಿಂದ ಹೇಳಿಕೆ ದಾಖಲಿಸಿಕೊಂಡಿದ್ದಾರೆ.
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣೆ ವ್ಯಾಪ್ತಿಯ ಅನೆದಿಬ್ಬದಲ್ಲಿ ಮಹಿಳೆಯ ಕೊಳೆತ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸುಮಾರು 40 ರಿಂದ 50 ವರ್ಷದ ಮಹಿಳೆಯ ಮೃತದೇಹವಾಗಿದ್ದು, ವಾರಸುದಾರರಿದ್ದಾರೆ ಗೋಣಿಬೀಡು ಪೊಲೀಸ್ ಠಾಣೆಯನ್ನು ಸಂಪರ್ಕಿಸಿಬಹುದಾಗಿದೆ. 9448229532, 8050029532
ಸಮಾಜ ಸೇವಕ ಆರೀಫ್ ಮತ್ತು ಗೋಣಿಬೀಡು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಇದ್ದರು. (ವರದಿ- ತನು ಕೊಟ್ಟಿಗೆಹಾರ)












