ಕಡೂರು: (ನ್ಯೂಸ್ ಮಲ್ನಾಡ್ ವರದಿ) ಸರ್ಕಾರಿ ಜಾಗದಲ್ಲಿ ನಿರ್ಮಿಸಿಕೊಂಡಿದ್ದ ಗುಡಿಸಲನ್ನು ನೆಲಸಮ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮೇಲನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ; APL-BPL ಕಾರ್ಡ್ದಾರರಿಗೆ ಮುಖ್ಯ ಮಾಹಿತಿ; ಮಿಸ್ ಮಾಡ್ದೆ ಈ ಸುದ್ದಿ ಓದಿ

ಕಡೂರು ತಾಲೂಕಿನ ಮೇಲನಹಳ್ಳಿ ಸರ್ವೆ ನಂ 22ರಲ್ಲಿ ಇದ್ದ ಗುಡಿಸಲನ್ನು, ಮನೆಯವರು ಕೆಲಸಕ್ಕೆ ಹೋದಾಗ ಏಕಾಏಕಿ ಬಂದು ನೆಲಸಮ ಮಾಡಿದ್ದಾರೆ. ಗುಡಿಸಲಿನಲ್ಲಿದ್ದ ಪಾತ್ರೆ, ಆಹಾರ ಸಾಮಾಗ್ರಿಗಳು ನಾಶವಾಗಿದೆ ಎಂದು ತಾಲೂಕು ಆಡಳಿತದ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ; ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಮಿನಿ ಟ್ರ್ಯಾಕ್ಟರ್ ಖರೀದಿಗೆ ಅರ್ಜಿ ಆಹ್ವಾನ; ಶೇ.90 ಸಹಾಯಧನ
ಮೇಲನಹಳ್ಳಿ ಗ್ರಾಮದಲ್ಲಿ ಜನಸಂಖ್ಯೆ ಹೆಚ್ಚಾದ ಕಾರಣ ವಾಸಕ್ಕಾಗಿ ಸರ್ಕಾರಿ ಜಾಗದಲ್ಲಿ ಗುಡಿಸಲು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದರು. ಆದರೆ, ಏಕಾಏಕಿ ಗುಡಿಸಲು ನೆಲಸಮ ಮಾಡಿರುವ ಹಿನ್ನೆಲೆ ತಾಲೂಕು ಆಡಳಿತದ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದು, ಹೋರಾಟಕ್ಕೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ST ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ತಿಂಗಳಿಗೆ ಸಿಗಲಿದೆ 25,000 ಶಿಷ್ಯ ವೇತನ
ಅಲ್ಲದೆ ಕಡೂರಲ್ಲಿ ಸಾವಿರಾರು ಎಕರೆ ಒತ್ತುವರಿ ಮಾಡಿದ್ದಾರೆ, ಅದನ್ನ ತೆರವುಗೊಳಿಸಲ್ಲ. ಬದಲಾಗಿ ದಲಿತರು ವಾಸಕ್ಕಾಗಿ ಗೋಮಾಳದಲ್ಲಿ ಗುಡಿಸಲು ಹಾಕ್ಕೊಂಡ್ರೆ ತೆರವು ಮಾಡುತ್ತಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ST ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ತಿಂಗಳಿಗೆ ಸಿಗಲಿದೆ 25,000 ಶಿಷ್ಯ ವೇತನ












