ಮೂಡಿಗೆರೆ: ಹೃದಯಾಘಾತದಿಂದ ಯುವಕ ಸಾವು

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ)  ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಜಿಲ್ಲೆಯ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಸಮೀಪದ ಕಾರ್ ಬೈಲ್ ಗ್ರಾಮದ ಚಂದ್ರೇಗೌಡ ಎಂಬುವವರ ದ್ವಿತೀಯ ಪುತ್ರ ಕೆ.ಸಿ.ನಿಶಾಂತ್ ಹೃದಯಾಘಾತದಿಂದ ಮೃತಪಟ್ಟ ಯುವಕ.


ಇದನ್ನೂ ಓದಿ: ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ; ಅರ್ಹತೆ, ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಡಿಟೈಲ್ಸ್


ಗುರುವಾರ ಸಂಜೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಹೃದಯಾಘಾತದಿಂದ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ನಿಶಾಂತ್ ಅವರ ಪಾರ್ಥೀವ ಶರೀರವನ್ನು ಹುಟ್ಟೂರಿಗೆ ತರಲಾಗಿದ್ದು, ಇಂದು ಮಧ್ಯಾಹ್ನ 2 ಗಂಟೆಗೆ ಕಾರ್ ಬೈಲ್ ನಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ಬೇಕಾ?; APL ಹಾಗೂ BPL ಕಾರ್ಡ್ ಗೆ ಈ ರೀತಿ ಅರ್ಜಿ ಸಲ್ಲಿಸಿ


ಶೃಂಗೇರಿ: ಆಟೋ ಹಾಗೂ ಕಾರಿನ ನಡುವೆ ಅಪಘಾತ, ಹಲವರಿಗೆ ಗಾಯ

ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಆಟೋ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ವೃದ್ದೆಗೆ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಹೊಳೆಕೊಪ್ಪ ಸಮೀಪ ನಡೆದಿದೆ. ಸಣ್ಣಮ್ಮ (65) ಗಂಭೀರ ಗಾಯವಾಗಿರುವ ವೃದ್ದೆ.


ಇದನ್ನೂ ಓದಿ: ಇಂಡಿಯಾ ಪೋಸ್ಟ್ ಪೇಮೆಂಟ್ಸ್​ ಬ್ಯಾಂಕ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್


ಮಂಗಳೂರು ಮೂಲದ ಕಾರು ಹಾಗೂ ಶೃಂಗೇರಿಯ ಆಟೋದ ನಡುವೆ ಡಿಕ್ಕಿಯಾಗಿದ್ದು, ಪರಿಣಾಮ ಮೂವರು ಪ್ರಯಾಣಿಕರು ಹಾಗೂ ಚಾಲಕ ರವಿ ಶೆಟ್ಟಿಗೆ ಗಾಯವಾಗಿದೆ. ಇನ್ನು ಆಟೋದಲ್ಲಿದ್ದ ಪ್ರಯಾಣಿಕರು ಶೃಂಗೇರಿ ತಾಲೂಕಿನ ಹಾಲಂದೂರು ಸಮೀಪದ ಕೊಡೂರಿನವರು ಎನ್ನಲಾಗಿದ್ದು, ಗಾಯಾಳುಗಳನ್ನು ಶೃಂಗೇರಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೂವರನ್ನು ಮಣಿಪಾಲ ಆಸ್ಪತ್ರೆಗೆ ವರ್ಗಾಯಿಸಲಾಗಿದೆ.


ಇದನ್ನೂ ಓದಿ: ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?; ಅಡಿಕೆ ಮಾರುಕಟ್ಟೆ ಹೇಗಿದೆ | ಬೆಟ್ಟೆ, ಗೊರಬಲು, ಸರಕು, ಈಡಿ


ಶೃಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.