ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರಿನಿಂದ ಹೊರಟು ಬೆಂಗಳೂರು ಮಾರ್ಗವಾಗಿ ತಿರುಪತಿಗೆ ನೂತನ ರೈಲು ಸಂಚಾರ ಆರಂಭಿಸುವ ಕುರಿತು ಮಾಹಿತಿ ಕಲೆ ಹಾಕಲು ಅಧಿಕಾರಿಗಳಿಗೆ ರೈಲ್ವೆ ಖಾತೆಯ ರಾಜ್ಯ ಸಚಿವ ಸೋಮಣ್ಣ ಸೂಚನೆ ನೀಡಿದರು.
ಇದನ್ನೂ ಓದಿ; ರಾಜ್ಯದ 1 ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಧನಸಹಾಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಈ ಮಾರ್ಗದಲ್ಲಿ ರೈಲು ಸಂಚಾರ ಅತ್ಯಾವಶ್ಯಕವಿದ್ದು, ಆದಷ್ಟು ಶೀಘ್ರ ಹೊಸ ರೈಲು ಸೇವೆ ಒದಗಿಸಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ರೈಲ್ವೇ ಸಚಿವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸಮಗ್ರ ಮಾಹಿತಿ ಸಿದ್ಧಪಡಿಸಿ, ನೂತನ ರೈಲ್ವೆ ಮಂಜೂರಾತಿಗೆ ಕಡತ ಮಂಡಿಸುವಂತೆ ಸಚಿವರು ನಿರ್ದೇಶಿಸಿದರು. ಜೊತೆಗೆ ಕ್ರೈಸ್ತ ಸಮುದಾಯದ ಮನವಿ ಮೇರೆಗೆ ವೆಲಂಕಣಿಗೆ ಕ್ರಿಸ್ಮಸ್ ವಿಶೇಷ ರೈಲು ಸಂಚಾರದ ವ್ಯವಸ್ಥೆ ಅವಕಾಶ ಕಲ್ಪಿಸುವುದಾಗಿಯೂ ತಿಳಿಸಿದ್ದಾರೆ.
ಇದನ್ನೂ ಓದಿ; ಬೆಳೆ ಹಾನಿ ಪರಿಹಾರಕ್ಕೆ 297 ಕೋಟಿ ರೂ. ಬಿಡುಗಡೆ; ಈ ದಿನ ಜಮಾ- ಸಚಿವ ಕೃಷ್ಣಬೈರೇಗೌಡ ಮಾಹಿತಿ












