ಮೂಡಿಗೆರೆ: ಹುಲಿ ಕೊಂದು ಮುಚ್ಚಿದ ಆರೋಪ: ಇಬ್ಬರ ಬಂಧನ

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ಹುಲಿಯೊಂದನ್ನು ಕೊಂದು ಮುಚ್ಚಿದ ಆರೋಪದಲ್ಲಿ ಮತ್ತಿಬ್ಬರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.


ಇದನ್ನೂ ಓದಿ: ಈ ಜಿಲ್ಲೆಯ ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ; 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ



ಇದನ್ನೂ ಓದಿ: ನವೋದಯ ವಿದ್ಯಾಲಯ ಸಮಿತಿಯಲ್ಲಿ ಉದ್ಯೋಗ; ಬರೋಬ್ಬರಿ 1,377 ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ; 10ನೇ ತರಗತಿ ಪಾಸಾದವರೂ ಅಪ್ಲೈ ಮಾಡಿ


ಮೂರು ತಿಂಗಳ ಹಿಂದೆ ಹುಲಿಯ ತಲೆ ಬುರುಡೆ ಸಾಗಿಸುತ್ತಿದ್ದ ಆರೋಪದಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನು ಬಂಧಿಸಲಾಗಿದ್ದು, ಗುರುವಾರ ಆರೋಪಿಗಳನ್ನು ಸ್ಥಳಕ್ಕೆ ಕರೆದುಕೊಂಡು ಹೋಗಿ ಮಹಜರು ನಡೆಸಿದ್ದು, ಕಳೆಬರದ ಕುರುಹುಗಳು ಪತ್ತೆಯಾಗಿವೆ.


ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್


ಪ್ರಕರಣದ ತನಿಖೆ ನಡೆಯುತ್ತಿರುವುದರಿಂದ ಆರೋಪಿಗಳ ಹೆಸರು ಬಹಿರಂಗಗೊಳಿಸುವುದಿಲ್ಲ. ತನಿಖೆ ಪೂರ್ಣಗೊಂಡ ಬಳಿಕ ಪ್ರಕರಣದ ಪೂರ್ಣ ಮಾಹಿತಿ ನೀಡಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.


ಇದನ್ನೂ ಓದಿ: ಉದ್ಯೋಗಕ್ಕಾಗಿ ನೀಡುವ ರೆಸ್ಯೂಮ್‌ ಈ ಕಾರಣಗಳಿಂದ ರಿಜೆಕ್ಟ್‌ ಆಗಬಹುದು.. ಎಚ್ಚರ!; ಜಾಬ್‌ಗೆ ಶಾರ್ಟ್‌ ಲಿಸ್ಟ್‌ ಆಗದಿರಲು ಸಾಮಾನ್ಯ ಕಾರಣಗಳೇನು?;  ಈ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ


ತೀರ್ಥಹಳ್ಳಿ: ಮೂಲಭೂತ ಸೌಕರ್ಯಗಳಿಂದ ವಂಚಿತ: ಲೋಕಸಭಾ ಚುನಾವಣೆ ಬಹಿಷ್ಕಾರ

ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ತಾಲೂಕಿನ ಬಿದರಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಗುಂಬೆ ಹೋಬಳಿಯ ಬಾಳೆಹಳ್ಳಿ, ಉಳುಮಡಿ ಸುರುಳಿಗದ್ದೆ, ಕಣಗುಲ್ ಈ ಗ್ರಾಮಗಳಿಗೆ ರಸ್ತೆ ಮಾರ್ಗ ಆಗುವರೆಗೂ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ.

ಸುಮಾರು 40 ರಿಂದ 45 ಕುಟುಂಬಗಳು ವಾಸವಾಗಿರುವ ಈ ಗ್ರಾಮಗಳಲ್ಲಿ ಮನೆಗಳಿಗೆ ಹೋಗಲು ಸರಿಯಾದ ರಸ್ತೆ ಸಂಪರ್ಕವಿಲ್ಲ, ರಸ್ತೆ ಸರಿ ಇಲ್ಲದ ಕಾರಣ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಕೂಡ ತೊಂದರೆಯಾಗುತ್ತಿದೆ. ಹಾಗೆಯೇ ಗ್ರಾಮಕ್ಕೆ ಕರೆಂಟಿನ ವ್ಯವಸ್ಥೆ ಇದ್ದರೂ ಕೂಡ ಸರಿಯಾದ ಟಿಸಿ ಇಲ್ಲದ ಕಾರಣ ನೀರಿನ ಸಮಸ್ಯೆ ಕೂಡ ಎದುರಾಗಿದೆ.

ಕಳೆದ ಎಂಟು ತಿಂಗಳ ಹಿಂದೆ ತಲ್ಲೂರಂಗಡಿ ಕೈಮರದಿಂದ ಉಳುಮಡಿ ಹೋಗುವ ಸುಮಾರು 5 ಕಿಮೀ ರಸ್ತೆ ಕಾಮಗಾರಿ ಮಾಡಲಾಗಿತ್ತು. ಆದರೆ, ಇದೀಗ ಅಲ್ಲಲ್ಲಿ ರಸ್ತೆ ಕಿತ್ತು ಬಂದು ಕಳಪೆಯಾಗಿದೆ. ಕಾಡು ಪ್ರಾಣಿಗಳ ಸಮಸ್ಯೆ ಮತ್ತು ನೆಟ್ವರ್ಕ್ ಸಮಸ್ಯೆ ಉಂಟಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಬಗ್ಗೆ ಮನವಿ ಸಲ್ಲಿಸಿದ್ದರು ಪ್ರಯೋಜನವಾಗಿಲ್ಲ. ಈ ಪ್ರದೇಶ ನಕ್ಸಲ್ ಪೀಡಿತ ಪ್ರದೇಶಕ್ಕೆ ಒಳಪಟ್ಟಿದ್ದು, ಮೂಲಭೂತ ಸೌಕರ್ಯಗಳು ದೊರಕುತ್ತಿಲ್ಲ. ಹೀಗಾಗಿ ಚುನಾವಣೆ ಬಹಿಷ್ಕಾರ ಮಾಡುವುದರ ಮೂಲಕ ತಮ್ಮ ಅಕ್ರೋಶ ವ್ಯಕ್ತಪಡಿಸಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.