ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಭದ್ರಾ ಅಭಯಾರಣ್ಯ ಹುಲಿ ಮೀಸಲು ವ್ಯಾಪ್ತಿಯ ಲಕ್ಕವಳ್ಳಿ ವಲಯದ ಹಿನ್ನೀರು ಪ್ರದೇಶವಾಗಿರುವ ಭೈರಾಪುರ ಅರಣ್ಯ ವಲಯದಲ್ಲಿ ಆನೆಯನ್ನು ಕೊಂದು ದಂತ ಅಪಹರಣ ಮಾಡಿರುವ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿಯೇ ಭಾಗಿಯಾಗಿರುವ ಆರೋಪದ ಮೇರೆಗೆ ಇಬ್ಬರು ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಇದನ್ನೂ ಓದಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯಲ್ಲಿ ಜಾಬ್ ಆಫರ್; ಪಿಯುಸಿ ವಿದ್ಯಾರ್ಹತೆ, ಆಕರ್ಷಕ ಸಂಬಳ

ಪ್ರಕರಣದ ತನಿಖೆ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಭಾಗಿಯಾಗಿರುವುದು ಖಚಿತವಾದ ಹಿನ್ನೆಲೆಯಲ್ಲಿ ಫಾರೆಸ್ಟ್ ಗಾರ್ಡ್ ದೇವರಾಜ್ ಹಾಗೂ ಉಪ ವಲಯ ಅರಣ್ಯಾಧಿಕಾರಿ ಕುಮಾರ್ ನಾಯಕ್ ಅವರನ್ನು ಅಮಾನತು ಮಾಡಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಉಪೇಂದ್ರ ಪ್ರತಾಪ್ ಸಿಂಗ್ ಅವರು ಆದೇಶಿಸಿದ್ದಾರೆ.
ಕಳೆದ ನಾಲ್ಕು ತಿಂಗಳ ಹಿಂದೆ ಆನೆ ಕಳೇಬರ ಭದ್ರಾ ಹುಲಿ ಮೀಸಲು ಅರಣ್ಯದಲ್ಲಿ ಕಂಡುಬಂದಿದೆ. ಇದನ್ನು ಮೇಲಾಧಿಕಾರಿಗಳಿಗೆ ತಿಳಿಸದೇ ದಂತ ಕಳವು ಮಾಡಿರುವ ಸಾಧ್ಯತೆ ಇರುವುದು ಮೇಲ್ನೋಟಕ್ಕೆ ಖಚಿತವಾಗಿದೆ. ಆನೆ ಕಳೇಬರದ ಮರಣೋತ್ತರ ಪರೀಕ್ಷೆಯನ್ನು ಕಾಟಾಚಾರಕ್ಕೆ ಮಾಡಿಸಿ ಹೆಣ್ಣು ಆನೆ ಎಂದು ಮುಚ್ಚಿ ಹಾಕುವ ವ್ಯವಸ್ಥಿತ ಹುನ್ನಾರ ಮಾಡಿದ ಆರೋಪವಿದೆ.
ಇದನ್ನೂ ಓದಿ: ಈ ಯೋಜನೆಯಲ್ಲಿ ಶೇ. 60% ರಷ್ಟು ಸಹಾಯಧನ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ
ಮಾಧ್ಯಮ ವರದಿ, ಸಾಮಾಜಿಕ ಪರಿಸರ ಕಾರ್ಯಕರ್ತರು ದೂರು ನೀಡಿದ ಮೇಲೆ ಅರಣ್ಯ ಸಚಿವರು ತನಿಖೆ ಮಾಡುವಂತೆ ಆದೇಶ ಮಾಡಿದ್ದರು.
ಸಿಐಡಿ ತನಿಖೆಗೆ ಒತ್ತಾಯ:
ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಳಪಡಿಸಬೇಕು ಎಂದು ದೂರುದಾರ ಸಾಮಾಜಿಕ ಪರಿಸರ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಒತ್ತಾಯ ಮಾಡಿ ಅಧಿಕಾರಿಗಳು ತನಿಖೆ ಮಾಡಿ ಎಷ್ಟೇ ಪ್ರಭಾವಿಗಳು ಇದರಲ್ಲಿ ಇದ್ದರೂ ರಕ್ಷಿಸದೆ ತನಿಖೆ ಮಾಡಬೇಕು ಎಂದು ಮುಖ್ಯಮಂತ್ರಿ ಮತ್ತು ಅರಣ್ಯ ಸಚಿವರಿಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: SBI ಯಲ್ಲಿ ಜಾಬ್ ಆಫರ್; 17,900 ಸಂಬಳ, ವಿದ್ಯಾರ್ಹತೆ, ಅರ್ಜಿ ಲಿಂಕ್ ಇಲ್ಲಿದೆ












