ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಗಾಂಜಾ ಪ್ರಕರಣದಲ್ಲಿ ಪ್ರತ್ಯೇಕವಾಗಿ ಇಬ್ಬರನ್ನು ಬಂಧಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಇದನ್ನೂ ಓದಿ; ಸಂಗೀತಾ ಶೃಂಗೇರಿ ಫಿಟ್ನೆಸ್ ಹಿಂದಿನ ಸೀಕ್ರೆಟ್ ಏನು ಗೊತ್ತಾ?; ಇವರ ಬೋಲ್ಡ್ ಲುಕ್ ಗೆ ಫ್ಯಾನ್ಸ್ ಫಿದಾ


ಇದನ್ನೂ ಓದಿ; ಸೌಥ್ ಈಸ್ಟ್ ಸೆಂಟ್ರಲ್ ರೈಲ್ವೆಯಲ್ಲಿ ಉದ್ಯೋಗ; 1113 ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಲ್ದೂರು ಸಮೀಪದ ಸತ್ತಿಹಳ್ಳಿ ಪಂಚಾಯಿತಿ ವ್ಯಾಪ್ತಿಯ ಗುಲ್ಲನ್ ಪೇಟೆ ಗ್ರಾಮದಲ್ಲಿ ಕಾಫಿ ತೋಟದೊಳಗೆ ಗಾಂಜಾ ಗಿಡಗಳನ್ನು ಬೆಳೆದಿರುವ ಖಚಿತ ಮಾಹಿತಿ ಆಧಾರದಲ್ಲಿ ಪಿಎಸ್‌ಐ ಧನರಾಜ್ ಟಿ.ಎಂ ನೇತೃತ್ವದ ಪೊಲೀಸರು ದಾಳಿ ನಡೆಸಿ ಅಬ್ದುಲ್ ಬಶೀರ್ ಎಂಬಾತನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ; ಮತದಾರರೇ ಗಮನಿಸಿ; ವೋಟರ್ ಲಿಸ್ಟ್ ನಲ್ಲಿ ಹೆಸರು ಸೇರ್ಪಡೆಗೆ ಇನ್ನೂ ಇದೆ ಕಾಲಾವಕಾಶ
ಮತ್ತೊಂದು ಪ್ರಕರಣದಲ್ಲಿ ಕಡೂರು ಪಟ್ಟಣದ ಹಳೇ ಸಂತೆ ಮೈದಾನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಪಿ.ಎಸ್.ಐ ಕಡೂರು ಪೊಲೀಸ್ ಠಾಣೆ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ, 316 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಬಡ್ಡಿಯಿಲ್ಲದೆ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ!
ಬೆಚ್ಚಿಬಿದ್ದ ತೀರ್ಥಹಳ್ಳಿ: ಲಾಡ್ಜ್‌ನಲ್ಲಿ ಯುವತಿಯ ಭೀಕರ ಹತ್ಯೆ
ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಲಾಡ್ಜ್ ವೊಂದರಲ್ಲಿ ಯುವತಿಯೊಬ್ಬಳ ಬರ್ಬರ ಹತ್ಯೆ ನಡೆದಿರುವ ಘಟನೆ ಶಿವಮೊಗ್ಗದ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯ ಚೌಡೇಶ್ವರಿ ದೇವಸ್ಥಾನದ ಪಕ್ಕದ ಲಾಡ್ಜ್ ನಲ್ಲಿ ನಡೆದಿದೆ.
ಕಳೆದ ಸೋಮವಾರ (ಏ.1) ರಂದು ಲಾಡ್ಜ್ ಗೆ ಬಂದಿದ್ದ ಯುವಕ-ಯುವತಿ ರೂಂ ಬಾಡಿಗೆ ಪಡೆದಿದ್ದರು. ಲಾಡ್ಜ್ ನಲ್ಲಿ ತಂಗಿದ್ದಾಗ ಜೊತೆಗೆ ಇದ್ದ ಯುವಕನೇ ಯುವತಿಯ ಕತ್ತು ಸೀಳಿ ಕೊಲೆ ಮಾಡಿ ಓಡಿ ಹೋಗಿದ್ದಾನೆ. ಲಾಡ್ಜ್ ಸಿಬ್ಬಂದಿ ರೂಮಿಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆ; 8ನೇ ಕಂತಿನ ಹಣ ಈ ದಿನ ಬಿಡುಗಡೆ..!
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮೃತಳ ಗುರುತು ಇನ್ನೂ ಪತ್ತೆಯಾಗಿಲ್ಲ. ಈ ಸಂಬಂಧ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಾಗಿ ತೀರ್ಥಹಳ್ಳಿ ಪೊಲೀಸರು ಶೋಧ ನಡೆಸಿದ್ದಾರೆ.
ಇದನ್ನೂ ಓದಿ; ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್













