ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ.
ಇದನ್ನೂ ಓದಿ; ಮಹಿಳೆಯರಿಗೆ ಸಿಗಲಿದೆ ಬಡ್ಡಿ ಇಲ್ಲದೆ 5 ಲಕ್ಷಗಳ ಸಾಲ!;ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯೂ ಕೂಡ ಇವರೇ ಆಗುವ ಎಲ್ಲ ಸಾಧ್ಯತೆ ಇದೆ. ಕಾಂಗ್ರೆಸ್ ಪಕ್ಷ ಸೇರಿ 2012 ರಲ್ಲಿ ನಡೆದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಗೆದ್ದು ಸಂಸದರಾಗಿದ್ದರು. 2014 ರ ಲೋಕಸಭೆ ಚುನಾವಣೆಯಲ್ಲಿ ಶೋಭಾಕರಂದ್ಲಾಜೆ ವಿರುದ್ದ ಸೋಲು ಕಂಡಿದ್ದರು. ನಂತರ ನಡೆದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷ ತ್ಯಜಿಸಿ ಬಿಜೆಪಿಗೆ ಸೇರಿಕೊಂಡಿದ್ದರು. ಬಿಜೆಪಿ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಿಸಿತ್ತು.
ಇದನ್ನೂ ಓದಿ; ಈ ಯೋಜನೆ ಅಡಿಯಲ್ಲಿ ಸಿಗಲಿದೆ 25,000 ಸಹಾಯಧನ!;ಯಾವ ಯೋಜನೆ, ಪ್ರಯೋಜನ ಪಡೆಯುವುದು ಹೇಗೆ?
ಇದೀಗ ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳಲಿದ್ದು, ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಮುಖಂಡರು ಜಯಪ್ರಕಾಶ್ ಹೆಗ್ಡೆ ಹೆಸರಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಜಯಪ್ರಕಾಶ್ ಹೆಗ್ಡೆಯೇ ಕೈ ಅಭ್ಯರ್ಥಿಯಾಗೋದು ಬಹುತೇಕ ಖಚಿತ ಎನ್ನಲಾಗಿದೆ.
ಇದನ್ನೂ ಓದಿ; ಮ್ಯಾನೇಜರ್ ಗ್ರೇಡ್-III ಮೇಲ್ವಿಚಾರಕೇತರ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
ಕೈ ಅಭ್ಯರ್ಥಿಯಾಗಿ ಹೆಗ್ಡೆ ಬಹುತೇಕ ಖಚಿತ… ಬಿಜೆಪಿ ಯಾರು…?:
2024 ರ ಲೋಕಸಭೆ ಚುನಾವಣೆಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಯಾರು?. ಸದ್ಯದ ಮಾಹಿತಿಯಂತೆ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಎನ್ನಲಾಗಿದೆ. ಆದರೆ, ಸ್ವಪಕ್ಷದ ಕಾರ್ಯಕರ್ತರೇ ಹಾಲಿ ಸಂಸದೆ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಬಾರದೆಂದು ಬೀದಿಗಿಳಿದಿದ್ದಾರೆ. ಪತ್ರ ಚಳುವಳಿ, ವಾಟ್ಸಾಪ್ ಸ್ಟೇಟಸ್ ಅಷ್ಟೇ ಅಲ್ಲದೆ ಚುನಾವಣಾ ಸಮಿತಿ ಎದುರು ನೂರಾರು ಕಾರ್ಯಕರ್ತರಿಂದ ಪ್ರತಿಭಟನೆಯನ್ನು ನಡೆಸಿದ್ದು, ಶೋಭಾ ವಿರುದ್ಧ ಕಾರ್ಯಕರ್ತರು ಗರಂ ಆಗಿದ್ದಾರೆ. ಸದ್ಯ ಯಾರಿಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಫೈನಲ್ ಆಗಲಿದೆ ಎಂದು ಕಾದು ನೋಡಬೇಕಿದೆ.
ಮೂಡಿಗೆರೆ: ಎದುರಿನ ವಾಹನಕ್ಕೆ ರಸ್ತೆ ಬಿಟ್ಟುಕೊಡಲು ಸಾಧ್ಯವಾಗದೇ ಹಳ್ಳಕ್ಕೆ ಬಿದ್ದ ಕಾರು
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಕಿರಿದಾದ ಸೇತುವೆಯಲ್ಲಿ ಎದುರಿನಿಂದ ಬಂದ ವಾಹನಕ್ಕೆ ರಸ್ತೆಬಿಟ್ಟುಕೊಡಲು ಸಾಧ್ಯವಾಗದೇ ಕಾರೊಂದು ಹಳ್ಳಕ್ಕೆ ಮಗುಚಿ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ-ಗೆಂಡೇಹಳ್ಳಿ ರಸ್ತೆಯ ಕನ್ನಾಪುರ ಸಮೀಪದ ಬೊಮ್ಮೇನಹಳ್ಳಿ ಎಂಬಲ್ಲಿ ನಡೆದಿದೆ.
ಇದನ್ನೂ ಓದಿ; ಯಾವುದೇ ಗ್ಯಾರಂಟಿ ಬೇಕಿಲ್ಲ!; ಕೇಂದ್ರ ಸರ್ಕಾರದಿಂದಲೇ ಸಿಗುತ್ತೆ 2 ಲಕ್ಷ ಲೋನ್; ಹೇಗೆ? ಇಲ್ಲಿದೆ ಡಿಟೈಲ್ಸ್
ಅಧಿಕಾರಿಗಳ ನಿರ್ಲಕ್ಷ್ಯ, ಗ್ರಾಮಸ್ಥರ ಆಕ್ರೋಶ:
ಬೊಮ್ಮೇನಹಳ್ಳಿ ಸಮೀಪ ಹರಿಯುತ್ತಿರುವ ಹಳ್ಳಕ್ಕೆ ನಿರ್ಮಾಣ ಮಾಡಿರುವ ಸೇತುವೆ ಬಹಳ ಕಿರಿದಾಗಿದ್ದು, ವಾಹನಗಳು ಏಕಾಏಕಿ ಎದುರಾದಾಗ ಪರಸ್ಪರ ರಸ್ತೆ ಬಿಟ್ಟುಕೊಡಲು ಸಾಧ್ಯವಾಗುತ್ತಿಲ್ಲ. ಸೇತುವೆ ತುಂಬಾ ಕಿರಿದಾಗಿದ್ದು, ಸೇತುವೆಗೆ ಯಾವುದೇ ತಡೆಗೋಡೆಯನ್ನು ಕೂಡ ನಿರ್ಮಾಣ ಮಾಡಿಲ್ಲ. ಏಕಕಾಲದಲ್ಲಿ ಎರಡು ವಾಹನಗಳು ಎದುರಾದಾಗ ಅಪಘಾತಗಳು ಸಂಭವಿಸಿವೆ. ಇತ್ತೀಚೆಗೆ ಈ ರಸ್ತೆಯಲ್ಲಿ ವಾಹನ ದಟ್ಟಣೆ ಅಧಿಕವಾಗಿದ್ದು, ಈ ಸೇತುವೆ ಈಗಿನ ವಾಹನ ದಟ್ಟಣೆಗೆ ಸೂಕ್ತವಾಗಿಲ್ಲ. ಮಳೆಗಾಲದಲ್ಲಿ ಹೊಳೆಯ ನೀರು ಸೇತುವೆಯ ಮೇಲೆಯೇ ಉಕ್ಕಿ ಹರಿಯುತ್ತದೆ. ಜೊತೆಗೆ ಈ ಸೇತುವೆ ತಿರುವಿನಲ್ಲಿ ಇರುವುದರಿಂದ ಎದುರಿನಿಂದ ಬರುವ ವಾಹನಗಳ ಸೂಚನೆಯೂ ತಿಳಿಯುವುದಿಲ್ಲ. ಹಾಗಾಗಿ ಈ ಸೇತುವೆಯನ್ನು ಅಗಲೀಕರಣಗೊಳಿಸಿ ತಡೆಗೋಡೆ ಸಹಿತ ಉತ್ತಮ ಸೇತುವೆ ನಿರ್ಮಾಣ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸುತ್ತಲೇ ಬರುತ್ತಿದ್ದಾರೆ. ಆದರೆ, ಇದರ ಬಗ್ಗೆ ಜನಪ್ರತಿನಿಧಿಗಳು, ಅಧಿಕಾರಿಗಳು ಗಮನ ಹರಿಸಿಲ್ಲ. ಈ ಸೇತುವೆ ಮೇಲ್ದರ್ಜೆಗೆ ಏರಿಸುವ ಬಗ್ಗೆ ಸ್ಥಳೀಯ ಶಾಸಕರು ಗಮನಹರಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ; ಈ ಯೋಜನೆಯಡಿ ಪ್ರತಿ ತಿಂಗಳು 3000 ಹಣ; ಕೂಡಲೇ ಈ ಕೆಲಸ ಮಾಡಿ












