ಬೆಳ್ಳಂಬೆಳಗ್ಗೆ ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಆರ್ಭಟ

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರಿಗೆ ಗಡಿ ಭಾಗವಾಗಿರುವ ಚಾರ್ಮಾಡಿ ಘಾಟಿಯ ರಸ್ತೆಯಲ್ಲಿ ಕಾಡಾನೆ ಮತ್ತೆ ಮತ್ತೆ ಕಾಣಿಸಿಕೊಳ್ಳುತ್ತಿದೆ. ನಿನ್ನೆ ರಾತ್ರಿ ಘಾಟಿಯ ರಸ್ತೆಯಲ್ಲಿ ಕಾಣಿಸಿಕೊಂಡ ಕಾಡಾನೆ, ಮತ್ತೆ ಬೆಳ್ಳಂಬೆಳಗ್ಗೆ ಸೊಂಡಿಲಿನಲ್ಲಿ ಮರದ ದಿಂಬಿ ಹಿಡಿದು ರಸ್ತೆಗೆ ಅಡ್ಡಲಾಗಿ ನಿಂತಿದೆ.


ಇದನ್ನೂ ಓದಿ: ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?; ಅಡಿಕೆ ಮಾರುಕಟ್ಟೆ ಹೇಗಿದೆ| ಬೆಟ್ಟೆ, ಗೊರಬಲು, ಸರಕು, ಈಡಿ



ಇದನ್ನೂ ಓದಿ: ಕೇಂದ್ರ ಸರ್ಕಾರಿ ಉದ್ಯೋಗ ಹುಡುಕುವವರಿಗೆ ಗುಡ್ ನ್ಯೂಸ್; ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್


ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ ಓಡಾಟ ಮಿತಿಮೀರಿದೆ. ಪ್ರತಿ ರಾತ್ರಿ ಎಂಬಂತೆ ಒಂದೊಂದು ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗುತ್ತಿದೆ. ನಿನ್ನೆ ರಾತ್ರಿ ಇದ್ದಕ್ಕಿದ್ದಂತೆ ರಸ್ತೆಯ ಮಧ್ಯೆದಲ್ಲಿ ಒಂಟಿ ಸಲಗ ಸೊಂಡಿಲಿನಲ್ಲಿ ಮರದ ದಿಂಬಿ ಹಿಡಿದು ನಿಂತಿದ್ದನು. ಗಜರಾಜನ ಈ ಅವತಾರ ಕಂಡು ಜನರು ವಾಹನಗಳನ್ನು ಸೈಡ್ ಅಲ್ಲಿ ಪಾರ್ಕ್ ಮಾಡಿ, ಮೊಬೈಲ್ ನಲ್ಲಿ ಆನೆಯ ಆರ್ಭಟವನ್ನು ಸೆರೆ ಹಿಡಿದಿದ್ದಾರೆ. ರಸ್ತೆ ಮಧ್ಯೆದಲ್ಲಿ ಒಂಟಿ ಸಲಗ ನಿಂತಿದ್ದರಿಂದ ಚಾರ್ಮಾಡಿ ಘಾಟ್ ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ, ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಇನ್ನು ಈ ಒಂಟಿ ಸಲಗ ಹಗಲು-ರಾತ್ರಿ ಎನ್ನದೆ ಉಪಟಳ ನೀಡುತ್ತಿದೆ. ಆದರೂ ಕೂಡ ಅರಣ್ಯ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ.


ಇದನ್ನೂ ಓದಿ: ರೈತರಿಗೆ ಡಬಲ್ ಧಮಾಕಾ!; ಇಂತಹ ರೈತರ ಬ್ಯಾಂಕ್ ಖಾತೆಗೆ 9,500 ರೂಪಾಯಿ ಜಮಾ


ಚಾರ್ಮಾಡಿ ಘಾಟಿ ರಸ್ತೆಯಿಂದ ಹಲವು ತೀರ್ಥಕ್ಷೇತ್ರಗಳಿಗೆ ಬರುವವರ ವಾಹನಗಳ ಸಂಖ್ಯೆ ಹೆಚ್ಚು ಇದೆ. ಈಗ ಶಾಲೆಗಳಿಗೆ ರಜೆಯೂ ಇರುವುದರಿಂದ ವಾಹನಗಳು ಇನ್ನಷ್ಟು ಹೆಚ್ಚಿವೆ. ರಸ್ತೆಯಲ್ಲಿ ಆನೆ ಓಡಾಟದಿಂದ ಪದೇಪದೇ ಟ್ರಾಫಿಕ್ ಜಾಮ್ ಆಗುತ್ತಿದೆ. ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ತಲೆಕೆಡಿಸಿಕೊಳ್ಳುತ್ತಿಲ್ಲ. ಸಲಗ ವಾಹನಗಳ ಮೇಲೆ ಎರಗುವುದಕ್ಕೆ ಮೊದಲು ಎಚ್ಚೆತ್ತುಕೊಳ್ಳಬೇಕಿದೆ ಎಂದು ಸ್ಥಳೀಯರು ದೂರಿದ್ದಾರೆ.


ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ; ವಾಹನ ಸವಾರರಿಗೆ ಮಹತ್ವದ ಮಾಹಿತಿ!; ಮಿಸ್ ಮಾಡ್ದೆ ಈ ಸುದ್ದಿ ಓದಿ


ಎನ್.ಆರ್.ಪುರ: ಕಾಫಿನಾಡ ಮಹಾಮಳೆಗೆ ಮೂರನೇ ಬಲಿ

ಎನ್.ಆರ್. ಪುರ:  (ನ್ಯೂಸ್ ಮಲ್ನಾಡ್ ವರದಿ) ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆ ಮೇಲೆ ಮರ ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಕಟ್ಟಿನಮನೆ ಗ್ರಾಮದಲ್ಲಿ ನಡೆದಿದೆ. ಕೊಪ್ಪ ಮೂಲದ ಸವಿತಾ (48) ಮೃತ ದುರ್ದೈವಿ.

ಇದನ್ನೂ ಓದಿ: ಚಿನ್ನದ ಮೇಲೆ ಸಾಲ ಪಡೆಯುವವರಿಗೆ ಮಹತ್ವದ ಮಾಹಿತಿ; RBI ನಿಂದ ಮತ್ತೆ ನಿಯಮ ಬದಲಾವಣೆ; ಮಿಸ್ ಮಾಡ್ದೆ ಈ ಸುದ್ದಿ ಓದಿ


ಭಾರೀ ಗಾಳಿ-ಮಳೆಗೆ ಮಹಿಳೆ ಹಾಗೂ ಕಾರಿನ ಮೇಲೆ ಏಕಕಾಲಕ್ಕೆ ಮರ ಬಿದ್ದಿದೆ. ಪರಿಣಾಮ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಮೂವರಿಗೂ ಗಂಭೀರ ಗಾಯವಾಗಿದೆ. ಕಾರಿನ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ. ತಕ್ಷಣವೇ ಗಾಯಾಳುಗಳನ್ನು ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಎನ್.ಆರ್.ಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್; ನಿಮ್ಮ ಖಾತೆಗೆ ಶೀಘ್ರವೇ ಬರಲಿದೆ ಪಿಎಂ ಕಿಸಾನ್ ಹಣ!


ಇನ್ನು ಮುಂಗಾರು ಪೂರ್ವ ಬಿರುಗಾಳಿ ಮಳೆಗೆ ಇದು ಮೂರನೇ ಬಲಿಯಾಗಿದ್ದು, ಕಳೆದ ಒಂದು ತಿಂಗಳ ಅಂತರದಲ್ಲಿ ಮರ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.