ಮೂಡಿಗೆರೆ/ಬೆಂಗಳೂರು: (ನ್ಯೂಸ್ ಮಲ್ನಾಡ್ ವರದಿ) ಹೃದಯಾಘಾತದಿಂದ ಯುವಕನೊರ್ವ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿ ಕೋಡದಿಣ್ಣೆ ಗ್ರಾಮದ ವ ಸುರೇಶ ಗೌಡ ಮತ್ತು ಶ್ರೀಮತಿ ಮಮತ ದಂಪತಿಗಳ ಪುತ್ರ ಸುಹಾಸ್ ಗೌಡ (25) ಹೃದಯಾಘಾತದಿಂದ ಮೃತಪಟ್ಟ ಯುವಕ.
ಇದನ್ನೂ ಓದಿ; ನಿಮ್ಮ ವಾಹನದ ಫಾಸ್ಟ್ ಟ್ಯಾಗ್ KYC ಆಗಿದ್ಯಾ?;ಈ ದಿನದೊಳಗೆ ಫಾಸ್ಟ್ ಟ್ಯಾಗ್ ಗಳ ಕೆವೈಸಿ ಪೂರ್ಣಗೊಳಿಸಲು ಡೆಡ್ ಲೈನ್

ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸುಹಾಸ್ ಗೌಡ, ಇಂದು ಮುಂಜಾನೆ ಎದೆನೋವಿನಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇನ್ನು ಸುಹಾಸ್ ಗೌಡ ಅವರ ಅಂತ್ಯಸಂಸ್ಕಾರ ಸೋಮವಾರ ಬೆಳಿಗ್ಗೆ ಕೋಡದಿಣ್ಣೆ ಗ್ರಾಮದಲ್ಲಿ ನೆರವೇರಲಿದೆ.

ಇದನ್ನೂ ಓದಿ; ಶಿವಮೊಗ್ಗ GTTC ಯಲ್ಲಿ ಉದ್ಯೋಗವಕಾಶ; ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆ ಏನು?
ಬಿಜೆಪಿ ಸಂಸದನನ್ನು ಗೆಲ್ಲಿಸುವಂತೆ ಕಾಂಗ್ರೆಸ್ ಶಾಸಕನ ಮನವಿ
ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಮತ್ತೊಮ್ಮೆ ಗೆಲ್ಲಿಸುವಂತೆ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಕರೆ ನೀಡಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನವನ್ನುಂಟು ಮಾಡಿದೆ.
ಇದನ್ನೂ ಓದಿ; ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
ಬಿ.ವೈ ರಾಘವೇಂದ್ರ ಅವರಂಥ ಲೋಕಸಭಾ ಸದಸ್ಯರನ್ನು ಪಡೆದಿರುವ ನೀವೇ ಧನ್ಯರು. ಜಿಲ್ಲೆಯಲ್ಲಿ ಆಗಬೇಕಿರುವ ಎಲ್ಲ ಕೆಲಸಗಳನ್ನು ಪೂರ್ಣ ಮಾಡಿ ಮುನ್ನಡೆಯುತ್ತಿದ್ದಾರೆ. ಜನರಿಗೆ ಅಭಿವೃದ್ಧಿ ಕೆಲಸ ಆಗಬೇಕಿರುವುದು ಮೊದಲ ಆದ್ಯತೆಯಾಗಬೇಕು. ಜನರ ಅಭಿಲಾಷೆಯಂತೆ ಕೆಲಸ ಮಾಡಿರುವ ಲೋಕಸಭಾ ಸದಸ್ಯರನ್ನು ಮುಂಬರುವ ಚುನಾವಣೆಯಲ್ಲೂ ಗೆಲ್ಲಿಸಬೇಕು. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲ್ಲಿಸುವಂತೆ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಕರೆ ನೀಡಿದ್ದಾರೆ.
ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರಿರುವ ಸಾಮಾನ್ಯ ಕಾರ್ಯಕರ್ತರು ಎಲ್ಲಾ ಪಕ್ಷಗಳ ಮುಖಂಡರುಗಳ ಹಣೆಬರಹ ಇದು, ತಾಲ್ಲೂಕು ಮಟ್ಟದಿಂದ ರಾಜ್ಯ ಮಟ್ಟದಲ್ಲೂ ಸಹ ಇಂತಹ ವಾತಾವರಣ ಇದೆ, ಕಾರ್ಯಕರ್ತರನ್ನು ಮಾತ್ರ ಬಲಿಪಶು ಮಾಡುತ್ತಾರೆ, ಈಗಿನ ಘಟನೆ ದೊಡ್ಡವರ ಹೊಂದಾಣಿಕೆ ರಾಜಕಾರಣಕ್ಕೆ ಉದಾಹರಣೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.













