ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಪತಿ ಜೊತೆ ಜಗಳವಾಡಿ ಕೆರೆಗೆ ಹಾರಿ ಕೊನೆ ಕ್ಷಣದಲ್ಲಿ ತನ್ನ ನಿರ್ಧಾರ ಬದಲಿಸಿ ಬದುಕುಳಿದ ಘಟನೆ ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ: ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಅರ್ಜಿ ಆಹ್ವಾನ

ಚಿಕ್ಕಮಗಳೂರಿನ ರಾಮನಹಳ್ಳಿ ವಾಸಿ ರಂಜಿತಾ ಗಂಡನ ಜೊತೆ ಜಗಳವಾಡಿ ಕೆರೆಗೆ ಹಾರಿದ್ದಾರೆ. ನೀರಿಗೆ ಬಿದ್ದ ಬಳಿಕ ಅದೇನೂ ಅನ್ನಿಸಿತೋ ಬದುಕಿಸುವಂತೆ ಆಂಜನೇಯ ಮೊರೆ ಹೋಗಿದ್ದಾಳೆ. ಕಾಪಾಡು ಆಂಜನೇಯ ಕಾಪಾಡು ಆಂಜನೇಯ ಎಂದು ಗೋಗರೆಯುತ್ತಿದ್ದ ದೃಶ್ಯವನ್ನು ದಾರಿಯಲ್ಲಿ ಹೋಗುತ್ತಿದ್ದ ಪಕ್ಕದ ಹೋಂ ಸ್ಟೇ ಮಾಲೀಕರೊಬ್ಬರು ಗಮನಿಸಿ ತಕ್ಷಣ ಹುಡುಗರಿಬ್ಬರನ್ನು ಕರೆಸಿ ಮಹಿಳೆಯನ್ನು ರಕ್ಷಿಸಿದ್ದಾರೆ.
ಇದನ್ನೂ ಓದಿ: ರೈತರಿಗೆ ಹೊಸ ಪಹಣಿ, ನಕ್ಷೆ ನೀಡಲು ಅಭಿಯಾನ; ಸಚಿವ ಕೃಷ್ಣ ಬೈರೇಗೌಡ ಮಾಹಿತಿ
ಘಟನೆ ಕುರಿತು ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












