ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಬ್ಯಾಂಕ್ ಸಿಬ್ಬಂದಿಗಳೇ ಗ್ರಾಹಕರಿಗೆ ವಂಚಿಸಿರುವ ಘಟನೆ ಚಿಕ್ಕಮಗಳೂರು ನಗರದ ಬೋಳರಾಮೇಶ್ವರ ದೇಗುಲ ಬಳಿ ಇರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನಡೆದಿದೆ.

ಗ್ರಾಹಕರ ಚಿನ್ನವನ್ನು ಮಾರಾಟ ಮಾಡಿ ನಕಲಿ ಚಿನ್ನವನ್ನು ಬ್ಯಾಂಕ್ ಲಾಕರ್ ನಲ್ಲಿ ಇಟ್ಟಿದ್ದಾರೆ. ಬೆಂಗಳೂರು ಮುಖ್ಯ ಶಾಖೆ ಅಧಿಕಾರಿಗಳ ಪರಿಶೀಲನೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. 141 ಚಿನ್ನದ ಪ್ಯಾಕೆಟ್ ಗಳ ಪೈಕಿ 140 ಪ್ಯಾಕೆಟ್ ಗಳಲ್ಲಿ ನಕಲಿ ಚಿನ್ನ ಪತ್ತೆಯಾಗಿವೆ. ಬ್ಯಾಂಕ್ ಆಡಿಟ್ ನಲ್ಲಿ ಕೋಟ್ಯಂತರ ರೂ. ವಂಚನೆ ಮಾಡಿರುವುದು ಬಹಿರಂಗವಾಗಿದೆ.
ಗ್ರಾಹಕರ ಚಿನ್ನವನ್ನು ಮಾರಾಟ ಮಾಡಿರುವ ಸಿಬ್ಬಂದಿ:
ಆರೋಪಿಗಳು ಮೊದಲಯೇ ನಕಲಿ ಚಿನ್ನವನ್ನು ತಂದು ಇಟ್ಟುಕೊಂಡಿದ್ದರು. ಗ್ರಾಹಕರಿಂದ ಅಸಲಿ ಚಿನ್ನವನ್ನು ಪಡೆದು ಸಾಲ ನೀಡುತ್ತಿದ್ದರು. ಆದರೆ ಲಾಕರ್ ನಲ್ಲಿ ಇಡುವಾಗ ಅಸಲಿ ಚಿನ್ನದ ಬದಲು ನಕಲಿ ಚಿನ್ನವನ್ನು ಇಡುತ್ತಿದ್ದರು. ಬಳಿಕ ಅಸಲಿ ಚಿನ್ನವನ್ನು ಬೇರೆ ಕಡೆ ಮಾರುತ್ತಿದ್ದರು ಎನ್ನಲಾಗಿದೆ.
ಪತ್ನಿ ಹೆಸರಿನಲ್ಲಿ ನಕಲಿ ಚಿನ್ನವಿಟ್ಟು ಲಕ್ಷಾಂತರ ರೂಪಾಯಿ ಲೋನ್:
ಬ್ಯಾಂಕ್ ಮ್ಯಾನೇಜರ್ ಸಂದೀಪ್ ಮತ್ತು ಸಿಬ್ಬಂದಿ ನಾರಾಯಣಸ್ವಾಮಿ ಪತ್ನಿ ಹೆಸರಿನಲ್ಲಿ ವಂಚನೆ ಮಾಡಿದ್ದಾರೆ. ಮ್ಯಾನೇಜರ್ ಸಂದೀಪ್ ಪತ್ನಿ ಶ್ವೇತಾ ಹೆಸರಲಿನಲ್ಲಿ ನಕಲಿ ಚಿನ್ನವನ್ನು ಅಡವಿಟ್ಟು ಸಾಲ ಪಡೆದ್ದಿದ್ದನು. ಇದೇ ರೀತಿಯಾಗಿ ನಾರಾಯಣಸ್ವಾಮಿ ಕೂಡ ಪತ್ನಿ ಲಾವಣ್ಯ ಹೆಸರಿನಲ್ಲಿ ನಕಲಿ ಚಿನ್ನವನ್ನು ಅಡವಿಟ್ಟು 50 ಲಕ್ಷ ರೂ. ಸಾಲ ಪಡೆದಿದ್ದನು.
ಮ್ಯಾನೇಜರ್ ಸೇರಿದಂತೆ 5 ಜನರ ವಿರುದ್ಧ ಪ್ರಕರಣ ದಾಖಲು:
ಇನ್ನು ಬ್ಯಾಂಕ್ ಮ್ಯಾನೇಜರ್ ಸೇರಿದಂತೆ 5 ಜನರ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಸಂದೀಪ್, ಪ್ರಶಾಂತ್, ನಾರಾಯಣಸ್ವಾಮಿ, ಶ್ವೇತಾ, ಲಾವಣ್ಯ ಎಸ್ಕೇಪ್ ಆಗಿದ್ದಾರೆ.
ಮೂಡಿಗೆರೆ: ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ : 7 ಮಂದಿ ಬಂಧನ
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಕೋಗಿಲೆ ಗ್ರಾಮದ ಸಮೀಪವಿರುವ ಪ್ಲಾಂಟೇಶನ್ ಬಳಿ ನಡೆದಿದೆ.
ಖಚಿತ ಮಾಹಿತಿಯೊಂದಿಗೆ ಬಾನುವಾರ ಬಣಕಲ್ ಸಬ್ ಇನ್ಸ್ಪೆಕ್ಟರ್ ರೇಣುಕಾ ಸಾರಥ್ಯದಲ್ಲಿ ಪೊಲೀಸರ ತಂಡದೊಂದಿಗೆ ಇಸ್ಪೀಟ್ ಆಟ ಆಡುತ್ತಿದ್ದ ಅಡ್ಡೆ ಮೇಲೆ ದಾಳಿ ಮಾಡಿದ್ದು, ಹಣದೊಂದಿಗೆ ಒಟ್ಟು 7 ಮಂದಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಬಣಕಲ್ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಜಗದೀಶ್, ಕಿರಣ್, ಮೆಹಬೂಬ್, ಮಾಲತೇಶ್, ಅಶೋಕ್, ಸಚ್ಚಿನ್, ದಿಲೀಪ್ ಇದ್ದರು.












