ಡೇಂಜರ್ ಝೂನ್ ಪಟ್ಟಿಗೆ ಸೇರಿದ ಚಿಕ್ಕಮಗಳೂರು | ಜಿಯೋಲಾಜಿಕಲ್ ಸರ್ವೇ ತಂಡದ ವರದಿಯಲ್ಲಿ ಬಹಿರಂಗ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತದ ಸಾಲು ಹಾಗೂ ಚಾರ್ಮಾಡಿ ಘಾಟ್ ಡೇಂಜರ್ ಝೂನ್ ಪಟ್ಟಿಗೆ ಸೇರಿದ್ದು, ಜಿಯೋಲಾಜಿಕಲ್ ಸರ್ವೇ ತಂಡದ ವರದಿಯಲ್ಲಿ ಅವೈಜ್ಞಾನಿಕ ಕಾಮಗಾರಿಗಳ ಕುರಿತು ಬಹಿರಂಗವಾಗಿದೆ.


ಇದನ್ನೂ ಓದಿ; ಗ್ರಾಮ ಪಂಚಾಯಿತಿ ಸದಸ್ಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ


ವಯನಾಡು ದುರಂತದ ಬಳಿಕ ಮಲೆನಾಡು ಭಾಗದ ಅಪಾಯಕಾರಿ ಸ್ಥಳಗಳ ಪಟ್ಟಿ ನೀಡುವಂತೆ ರಾಜ್ಯ ಸರ್ಕಾರ ಕೇಳಿತ್ತು. ಚಿಕ್ಕಮಗಳೂರು ಜಿಲ್ಲಾಡಳಿತ 77 ಅಪಾಯಕಾರಿ ಸ್ಥಳಗಳನ್ನು ಗುರುತು ಮಾಡಿ ವರದಿ ಕಳುಹಿಸಿತ್ತು. ಬಳಿಕ ಆಗಸ್ಟ್ ನಲ್ಲಿ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಅನೇಕ ಕಡೆಗಳಲ್ಲಿ ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಇದೀಗ ಜಿಯೋಲಾಜಿಕಲ್ ಸರ್ವೇ ತಂಡ ಚಿಕ್ಕಮಗಳೂರು ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿದ್ದು, ಈ ವರದಿಯಲ್ಲಿ ಅವೈಜ್ಞಾನಿಕ ಕಾಮಗಾರಿಗಳ ಕುರಿತು ಬಹಿರಂಗವಾಗಿದೆ.


ಇದನ್ನೂ ಓದಿ; ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಸಿಎಂ ನಿಂದ ಗುಡ್ ನ್ಯೂಸ್; ಮುಖ್ಯಮಂತ್ರಿ ಹೇಳಿದ್ದೇನು?


ವರದಿಯಲ್ಲಿ ಏನಿದೆ?;
ಅವೈಜ್ಞಾನಿಕ ಕಾಮಗಾರಿ, ವಾಹನಗಳ ದಟ್ಟನೆ, ಅತಿಹೆಚ್ಚು ಮಳೆಯಿಂದ ಗುಡ್ಡ, ಭೂ ಕುಸಿತವಾಗುತ್ತಿದೆ. ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತದ ಸಾಲು, ಚಾರ್ಮಾಡಿ ಘಾಟ್ ಡೇಂಜರ್ ಝೂನ್ ಆಗಿದೆ. ಹೀಗಾಗಿ ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತದ ಸಾಲುಗಳಲ್ಲಿ ವಾಹನ ದಟ್ಟನೆ ನಿಲ್ಲಿಸುವಂತೆ ಜಿಯೋಲಾಜಿಕಲ್ ಸರ್ವೇ ತಂಡ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ. ೮೦% ಅವೈಜ್ಞಾನಿಕ ಕಾಮಗಾರಿಯಿಂದಲೇ ಪಶ್ಚಿಮ ಘಟ್ಟಗಳ ಸಾಲು, ಮಲೆನಾಡು ಭಾಗದಲ್ಲಿ ಕುಸಿತ ಉಂಟಾಗುತ್ತಿದೆ ಎಂಬ ಅಂಶ ಜಿಯೋಲಾಜಿಕಲ್ ಸರ್ವೇ ತಂಡದ ವರದಿಯಲ್ಲಿ ಪತ್ತೆಯಾಗಿದೆ.


ಇದನ್ನೂ ಓದಿ; ಅಪ್ರಾಪ್ತ ದ್ವಿಚಕ್ರ ಚಾಲಕರಿಗೆ ಸಿಹಿ ಸುದ್ದಿ; ವಾಹನ ಚಲಾವಣೆಯಲ್ಲಿ ನಿಯಮ ಬದಲು- ಹೊಸ ನಿಯಮವೇನು..?


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.