ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಸ್ವಾಮಿ ವಿವೇಕಾನಂದರ 161 ನೇ ಜನ್ಮ ದಿನವನ್ನು ಚಿಕ್ಕಮಗಳೂರು ನಗರದ ಕಲ್ದೊಡ್ಡಿ ಶಾಂತಿನಗರದಲ್ಲಿ ವಿವೇಕಾನಂದ ಯುವಕ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.
ಇದನ್ನೂ ಓದಿ; ಯುವಜನತೆಗೆ ಗುಡ್ ನ್ಯೂಸ್; ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನ

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿವೇಕಾನಂದ ಯುವಕ ಸಂಘದ ಅಧ್ಯಕ್ಷ ರಾಜು ಆರ್ ಕಲ್ದೊಡ್ಡಿ, ನೂರು ತರಣರು ಒಟ್ಟಾಗಿ ಇಡೀ ಭಾರತದ ಇತಿಹಾಸವನ್ನು ಬದಲಾಯಿಸಬಹುದು. ಭಾರತವನ್ನ ದಾಸ್ಯದ ಸಂಕೋಲೆಯಿಂದ ಮುಕ್ತಗೊಳಿಸಬಹುದು ಎಂದು ವಿವೇಕಾನಂದರು ಕರೆ ಕೊಟ್ಟಿದ್ದರು. ವಿವೇಕಾನಂದರ ತತ್ವ ಸಿದ್ಧಾಂತ ಆದರ್ಶಗಳನ್ನು ಅಳವಡಿಸಿಕೊಂಡು ಕೋಟ್ಯಾಂತರ ತರುಣರು ಒಟ್ಟಾಗಿ ಬಲಿಷ್ಠ ಭಾರತದ ನಿರ್ಮಾಣಕ್ಕಾಗಿ ಶ್ರಮ ಪಡುತ್ತಿದ್ದಾರೆ. ರಾಮನ ಜನ್ಮ ಭೂಮಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿರುವುದು ಕೋಟ್ಯಾಂತರ ಹಿಂದೂಗಳು ಹೆಮ್ಮೆ ಪಡುವಂತ ಸಂಗತಿ ಭಾರತವು ವಿಶ್ವಗುರು ಆಗುತ್ತಿರುವ ಕಾಲವು ಸನ್ನಿದವಾಗುತ್ತಿದೆ. ಪ್ರತಿಯೊಬ್ಬ ವ್ಯಕ್ತಿಯೂ ಬಲಿಷ್ಠ ಭಾರತದ ನಿರ್ಮಾಣಕ್ಕಾಗಿ ಸಂಕಲ್ಪ ತೊಡಬೇಕಾಗಿದೆ ಎಂದರು.
ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
ಈ ಸಂದರ್ಭದಲ್ಲಿ ವಿವೇಕಾನಂದ ಯುವಕ ಸಂಘದ ಪ್ರಧಾನ ಕಾರ್ಯದರ್ಶಿ ಚೇತನ್ ಕುಮಾರ್, ಎಚ್ ಟಿ. ಕುಮಾರ್, ಎಮ್ ವರುಣ, ಚಕ್ರವರ್ತಿ, ಪ್ರಸನ್ನ, ಅರುಣ ಮುಂತಾದವರು ಉಪಸ್ಥಿತರಿದ್ದರು.
ಚಿಕ್ಕಮಗಳೂರು: ಕ್ರಿಕೆಟ್ ಆಡಲು ಬಂದಿದ್ದ ಪಶುವೈದ್ಯ ಸಾವು
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕ್ರಿಕೆಟ್ ಆಡಲು ಬಂದಿದ್ದ ಪಶುವೈದ್ಯ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಸೋಮವಾರ ಪೇಟೆ ಪಶುವೈದ್ಯರಾಗಿದ್ದ ಶಿವಪ್ಪ ಬಾದಾಮಿ ಹೃದಯಾಘಾತದಿಂದ ಮೃತಪಟ್ಟ ವೈದ್ಯ.
ಶಿವಪ್ಪ ಬಾದಾಮಿ ಅಕಾಲಿಕ ಮರಣಕ್ಕೆ ಪಶುವೈದ್ಯ ಲೋಕದ ಕಂಬನಿ ಮಿಡಿದಿದ್ದು, ಕ್ರೀಡಾಕೂಟವನ್ನು ಸ್ಥಗಿತಗೊಳಿಸಲಾಯಿತು. ಶಿವಪ್ಪ ಬಾದಾಮಿಯವರ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.












