ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ಎಂ ಕೆ ಪೂರ್ಣೇಶ್ ಎಸ್ಕೇಪ್ ಆಗಿದ್ದ, ಈ ಸಂಬಂಧ ಇದೀಗ ಮತ್ತೆ ಪೊಲೀಸ್ ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ; ರೈತರೇ ಗಮನಿಸಿ; PM KISAN ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ

ಏನಿದು ಘಟನೆ:
ಕಳೆದ ನವೆಂಬರ್ ನಲ್ಲಿ ಮನೆಯಲ್ಲಿರೋ ಖಚಿತ ಮಾಹಿತಿ ಮೇರೆಗೆ ಬಂಧಿಸಲು ಹೋದಾಗ ಪೊಲೀಸರ ಮೇಲೆ ಲಾಂಗ್ ಬೀಸಿದ, ಆತನ ಕಾಲಿನ ಮಂಡಿಗೆ ಫೈರಿಂಗ್ ಮಾಡಿದ್ದರು. ಫೈರಿಂಗ್ ವೇಳೆ ಪೂರ್ಣೇಶ್ ಬಲಗಾಲಿಗೆ ಗುಂಡು ತಗಲಿದ್ದು ಸೂಕ್ತ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಕಳೆದ ಮೂರು ದಿನಗಳ ಹಿಂದೆ ನಗರದ ಮಲ್ಲೇಗೌಡ ಆಸ್ಪತ್ರೆಯಿಂದ ಮುಂಜಾನೆ ಎಸ್ಕೇಪ್ ಆಗಿದ್ದ.
ಇದನ್ನೂ ಓದಿ; ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ
ಆರೋಪಿಯ ಪತ್ತೆಗೆ ಪೊಲೀಸರ ಶೋಧ:
ಎಸ್ಕೇಪ್ ಆಗಿದ್ದ ಆರೋಪಿ ಪೂರ್ಣೇಶ್ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ನಡೆಸಿ, ಇಂದು ಬೆಳಗ್ಗೆ 6:30 ಗಂಟೆ ಸಮಯದಲ್ಲಿ ಬಾಳೆಹೊನ್ನೂರು ಠಾಣಾ ವ್ಯಾಪ್ತಿಯ ಮಾಗಲ ಬ್ರಿಡ್ಜ್ ಕಡೆಯಿಂದ ಮಾಗಲಬಸ್ ನಿಲ್ದಾಣದ ಕಡೆ ಬರುತ್ತಿರುವಾಗ ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ; ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
ಇನ್ನು ಈ ಕಾರ್ಯಾಚಾರಣೆಯಲ್ಲಿ ಕೊಪ್ಪ ಉಪ ವಿಭಾಗದ ಬಾಳೆಹೊನ್ನೂರು ಠಾಣೆ ಪಿಎಸ್ ಐ ದಿಲೀಪ್ ಕುಮಾರ್, ಜಯಪುರ ಠಾಣೆ ಪಿಎಸ್ ಐ ಗುರು ಎ ಸಜ್ಜನ್ ಹಾಗೂ ಸಿಬ್ಬಂದಿಗಳು ಇದ್ದರು.
ಮೂಡಿಗೆರೆ: ಗುರುತು ಸಿಗದಂತೆ ಮಂಕಿ ಕ್ಯಾಪ್ ಧರಿಸಿ ಗೋವು ಕಳ್ಳತನ
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಗುರುತು ಸಿಗದಂತೆ ಮಂಕಿ ಕ್ಯಾಪ್ ಧರಿಸಿ ಗೋವು ಕಳ್ಳತನ ಮಾಡಿರುವ ಘಟನೆ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಐಷಾರಾಮಿ ಕಾರಿನಲ್ಲಿ ಬಂದು ಗುರುತು ಸಿಗದಂತೆ ಮಂಕಿ ಕ್ಯಾಪ್ ಧರಿಸಿ ಗೋವು ಕಳ್ಳತನ ಮಾಡಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ರಸ್ತೆ ಬದಿ ಮಲಗಿದ್ದ ಗೋವನ್ನು ಮಧ್ಯರಾತ್ರಿ ಕದ್ದೊಯ್ದಿದ್ದಾರೆ. ಕಾರಿನಲ್ಲಿ ಒಂದು ಗೋವನ್ನು ತುಂಬಿಕೊಳ್ಳುತ್ತಿದ್ದಂತೆ ಮತ್ತೊಂದು ಗೋವು ಕಾರಿನ ಹಿಂದೆಯೇ ಓಡಿದೆ. ಆ ಗೋವನ್ನು ರಕ್ಷಿಸಲು ಯತ್ನಿಸಿದೆ. ಈ ಎಲ್ಲ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.












