ಚಿಕ್ಕಮಗಳೂರು: ಜಿಲ್ಲೆಯ ವಿವಿಧೆಡೆ ಅಕ್ರಮ ಹಣ ಸೀಜ್

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯಲ್ಲಿ ಒಂದೇ ದಿನ 23,62,750 ರೂಪಾಯಿ ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ ಹಣವನ್ನ ಜಪ್ತಿ ಮಾಡಲಾಗಿದೆ.

 

ಇದನ್ನೂ ಓದಿ; ರಾಜ್ಯ ಸರ್ಕಾರದ ಕೃಷಿ ಭಾಗ್ಯ ಯೋಜನೆ; ಈ ಯೋಜನೆಯಲ್ಲಿ ನಿಮಗೂ ಸಹ ಹಣ ಸಿಗುತ್ತಾ?

ಚೌಡಿಪಾಳ್ಯ ಚೆಕ್ ಪೋಸ್ಟ್ ಬಳಿ ಎಸ್.ಎಫ್.ಸಿ ತಂಡದ ಅಧಿಕಾರಿಗಳು, ನಂಬರ್ ಪ್ಲೇಟ್ ಬದಲಾಯಿಸಿ ಓಮಿನಿ ಕಾರಿನಲ್ಲಿ ಸಾಗಿಸುತ್ತಿದ್ದ 20 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಈ ಹಣವನ್ನು ಪಂಚನಹಳ್ಳಿ ಗ್ರಾಮದಲ್ಲಿರುವ ಕೆನರಾ ಬ್ಯಾಂಕ್ ನಿಂದ ಡಿ.ಎಂ.ಕರ್ಕೆ ಗ್ರಾಮಕ್ಕೆ ಸಾಗಿಸಲಾಗುತ್ತಿತ್ತು ಎನ್ನಲಾಗಿದ್ದು, ಹಲವಾರು ಅನುಮಾನಕ್ಕೆ ಕಾರಣವಾಗಿದೆ. ಬ್ಯಾಂಕ್ ನ ಹಣವಾಗಿದ್ದರೇ ನಂಬರ್ ಪ್ಲೇಟ್ ಬದಲಾಯಿಸಿ ಸಾಗಿಸುತ್ತಿದ್ದುದು ಏಕೆ?, ಅಲ್ಲದೆ ಬ್ಯಾಂಕ್ ಹಣ ಸಾಗಿಸುವ ವೇಳೆ ಗನ್ ಮ್ಯಾನ್ ಅನ್ನು ಜೊತೆಯಲ್ಲಿ ಕರೆದೊಯ್ಯದಿರುವುದು ಏಕೆ? ಎಂಬ ಪ್ರಶ್ನೆ ಮೂಡಿದ್ದು, ಜಪ್ತಿ ಮಾಡಿ ಹಣದ ಮೂಲದ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ; ನಿರುದ್ಯೋಗಿಗಳಿಗೆ ಗುಡ್ ನ್ಯೂಸ್; ಉಚಿತ ಸಿಸಿಟಿವಿ ಅಳವಡಿಕೆ ತರಬೇತಿಗೆ ಅರ್ಜಿ ಆಹ್ವಾನ

ಇನ್ನು ಮೂಡಿಗೆರೆ ತಾಲೂಕಿನ ಕಸ್ಕೇಬೈಲು ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 3,62,750 ರೂಪಾಯಿ ಹಣವನ್ನ ವಶಕ್ಕೆ ಪಡೆಯಲಾಗಿದ್ದು, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಡಿ ದೂರು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ; ಬೆಳಗಾವಿ ನ್ಯಾಯಾಲಯದಲ್ಲಿ ಉದ್ಯೋಗ; 10th, 12th ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ

ಕಡೂರು: ತುಂಡಾಗಿ ಬಿದ್ದ ವಿದ್ಯುತ್ ತಂತಿ: ಹೊತ್ತಿ ಉರಿದ ಮನೆ

ಕಡೂರು: (ನ್ಯೂಸ್ ಮಲ್ನಾಡ್ ವರದಿ) ಮನೆ ಮೇಲೆ ತುಂಡಾಗಿ ವಿದ್ಯುತ್ ತಂತಿ ಬಿದ್ದ ಪರಿಣಾಮ ಮನೆಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬ್ಯಾಗಡೇಹಳ್ಳಿ ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ; ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ

ಮನೆಯವರು ತೋಟಕ್ಕೆ ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಮಂಜಮ್ಮ, ಚಂದ್ರಪ್ಪ ಎಂಬುವರ ಮನೆ ಬೆಂಕಿಯಿಂದ ಸಂಪೂರ್ಣ ಹಾನಿಯಾಗಿ, ಗೃಹಪಯೋಗಿ ವಸ್ತುಗಳು ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಈ ಅವಘಡ ಸಂಭವಿಸಿದೆ.

ಇದನ್ನೂ ಓದಿ; ಸ್ವಂತ ಕೃಷಿ ಭೂಮಿ ಹೊಂದಿರೋ ರೈತರಿಗೆ ಗುಡ್ ನ್ಯೂಸ್; ಸರ್ಕಾರದಿಂದ ಸಿಗುತ್ತೆ 25,000 ಹಣ! ಈಗಲೇ ಅರ್ಜಿ ಸಲ್ಲಿಸಿ

ಸ್ಥಳಿಯರು ಹಾಗೂ ಅಗ್ನಿಶಾಮಕ ತಂಡದಿಂದ ಬೆಂಕಿ ನಂದಿಸಿದ್ದು. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.