
ಆಲ್ದೂರು: (ನ್ಯೂಸ್ ಮಲ್ನಾಡ್ ವರದಿ) ಕೃಷಿ ಹೊಂಡದಲ್ಲಿ ಶೇಖರಣೆಗೊಂಡಿದ್ದ ನೀರಿನಲ್ಲಿ ಈಜಲು ತೆರಳಿದ್ದ ಬಾಲಕನೋರ್ವ ಮುಳುಗಿ ಮೃತಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರಿನಲ್ಲಿ ನಡೆದಿದೆ.
ಇದನ್ನೂ ಓದಿ: ರಾಜ್ಯದ ಈ ಜಿಲ್ಲಾ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ!; ಅರ್ಜಿ ಸಲ್ಲಿಸುವುದು ಹೇಗೆ..? ಅರ್ಹತೆ ಏನು?

ಮೃತರನ್ನು ಪೂರ್ಣೇಶ್ (16) ಎಂದು ಗುರುತಿಸಲಾಗಿದೆ. ಮಂಗಳೂರಿನ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಈತ ಶಾಲೆಗೆ ರಜೆ ಇದ್ದ ಕಾರಣ ಊರಿಗೆ ಆಗಮಿಸಿದ್ದ.

ಕೃಷಿ ಹೊಂಡದ ಆಳದ ಅರಿವಿಲ್ಲದ ಪೂರ್ಣೇಶ್ ಈಜಲು ಇಳಿದಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ರಾಜ್ಯಕ್ಕೆ ಕೇಂದ್ರದಿಂದ ಭರ್ಜರಿ ಗಿಫ್ಟ್; ನೂತನ ಕೇಂದ್ರ ಸಚಿವರಿಂದ ಬಂಪರ್ ಘೋಷಣೆ
ಈ ಬಗ್ಗೆ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎನ್ ಆರ್ ಪುರ: ತೆಪ್ಪ ಮುಳುಗಿ ಭೀಕರ ದುರಂತ, ಮೂವರು ಯುವಕರು ಸಾವು!
ಎನ್ ಆರ್ ಪುರ: (ನ್ಯೂಸ್ ಮಲ್ನಾಡ್ ವರದಿ) ತೆಪ್ಪ ಮುಳುಗಿ ಮೂವರು ಯುವಕರು ಸಾವನ್ನಪ್ಪಿರುವ ಧಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಭೈರಾಪುರ ಗ್ರಾಮದಲ್ಲಿ ನಡೆದಿದೆ.
ಪ್ರವಾಸಕ್ಕೆ ಬಂದಿದ್ದ ಮೂವರು ಭದ್ರಾ ಹಿನ್ನೀರಿನಲ್ಲಿ ತೆಪ್ಪದಲ್ಲಿ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ. ಮೃತರನ್ನು ಆದಿಲ್, ಸಾಜಿದ್, ಅಫ್ದಾಖಾನ್ ಎಂದು ಗುರುತಿಸಲಾಗಿದ್ದು, ಮೂವರು ಶಿವಮೊಗ್ಗ ನಗರದ ವಿದ್ಯಾನಗರದವರು ಎನ್ನಲಾಗಿದೆ.
ಸ್ಥಳಕ್ಕೆ ವನ್ಯಜೀವಿ ವಿಭಾಗ, ಪೊಲೀಸ್, ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕರ ಮೃತದೇಹಕ್ಕಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದು, ಈ ಸಂಬಂಧ ನರಸಿಂಹರಾಜಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














