ಆಲ್ದೂರು: (ನ್ಯೂಸ್ ಮಲ್ನಾಡ್ ವರದಿ) ಮಹಿಳೆಯೊಬ್ಬರ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿ ವ್ಯಾಪ್ತಿಯ ಹುಣಸೇಮಕ್ಕಿಯಲ್ಲಿ ಗುರುವಾರ ನಡೆದಿದೆ. ಲಲಿತಾ (43) ಬರ್ಬರವಾಗಿ ಹತ್ಯೆಯಾದ ಮಹಿಳೆ.
ಇದನ್ನೂ ಓದಿ; ಈ ದಿನ ಆಧಾರ್ ಅಪ್ಡೇಟ್ ಮಾಡಲು ಕೊನೆಯ ದಿನ; ಅಪ್ಡೇಟ್ ಮಾಡುವುದು ಹೇಗೆ? ಇಲ್ಲಿದೆ ಡಿಟೈಲ್ಸ್

ಅನೇಕ ವರ್ಷಗಳಿಂದ ಒಬ್ಬಂಟಿಯಾಗಿ ವಾಸವಾಗಿದ್ದ ಮಹಿಳೆ, ಬುಧವಾರ ರಾತ್ರಿ ಅಪರಿಚಿತ ವ್ಯಕ್ತಿಗಳು ಮನೆಗೆ ನುಗ್ಗಿ ಕತ್ತು ಸೀಳಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಗುರುವಾರ ಮಹಿಳೆ ಮನೆಯಿಂದ ಹೊರ ಬಾರದಿರುವುದನ್ನು ಗಮನಿಸಿ, ಗ್ರಾಮದ ನಿವಾಸಿಗಳು ಮನೆಯೊಳಗೆ ನೋಡಿದಾಗ ಮಹಿಳೆ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ. ಮಹಿಳೆಯ ಕತ್ತು ಸೀಳಿದ್ದರಿಂದ ರಕ್ತಸ್ರಾವ ಉಂಟಾಗಿ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ; ಗ್ರಾಮ ಪಂಚಾಯಿತಿಯಲ್ಲೇ ಸಿಗಲಿದೆ ಇ-ಶ್ರಮ ಕಾರ್ಡ್; ಕೆಲಸದ ಭದ್ರತೆ ಸೇರಿದಂತೆ 2 ಲಕ್ಷ ರೂ.ವರೆಗೆ ವಿಮೆ ಸೌಲಭ್ಯ
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದು, ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಹತ್ಯೆ ಮಾಡಿರುವ ಆರೋಪಿಗಳಿಗೆ ಬಲೆ ಬೀಸಿದ್ದಾರೆ.
ಇದನ್ನೂ ಓದಿ; ನಿಮ್ಮ ಖಾತೆಗೆ ಬೆಳೆ ವಿಮೆ ಹಣ ಜಮಾ ಆಗಿದ್ಯಾ?; ಈ ರೀತಿ ಚೆಕ್ ಮಾಡಿ
ಪಿಯುಸಿಯಲ್ಲಿ ಶೃಂಗೇರಿಯ ಜೆ. ಸಿ. ಬಿ. ಎಂ. ಕಾಲೇಜಿಗೆ 100% ಫಲಿತಾಂಶ
2023-24ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೃಂಗೇರಿಯ ಜೆ. ಸಿ. ಬಿ. ಎಂ. ಕಾಲೇಜು 115 ಅತ್ಯುನ್ನತ ಶ್ರೇಣಿಯೊಂದಿಗೆ ಶೇ 100 ಫಲಿತಾಂಶ ಪಡೆದುಕೊಂಡಿದೆ.
ಮಾರ್ಚ್ 2024ರಲ್ಲಿ ನಡೆದ ದ್ವಿತೀಯ ಪಿ. ಯು. ಸಿ. ಪರೀಕ್ಷೆಯಲ್ಲಿ ಹಾಜರಾದ ಒಟ್ಟು 257 ವಿದ್ಯಾರ್ಥಿಗಳಲ್ಲಿ 257 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ 100 ಫಲಿತಾಂಶ ಬಂದಿರುತ್ತದೆ ಎಂದು ಪದವಿ ಪೂರ್ವ ವಿಭಾಗದ ಸಂಯೋಜಕರಾದ ಪ್ರಶಾಂತ್ ತಿಳಿಸಿದ್ದಾರೆ.
115 ವಿದ್ಯಾರ್ಥಿಗಳು ಡಿಸ್ಟಿಂಗ್ಷನ್, 123 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು, ವಾಣಿಜ್ಯ ವಿಭಾಗದ ಕು. ಇಂಚರಾ ಕೆ.ಜಿ 587 (ಶೇ. 98) ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾಳೆ. ವಾಣಿಜ್ಯ ವಿಭಾಗದ ಕು. ಆಶಿಕಾ ಎ. ಎಲ್ 585 (ಶೇ 97.55) ಮತ್ತು ಮಧುಸೂಧನ್ ವಿ ಆರ್ 585 (ಶೇ 97.55) ಅಂಕಗಳೊಂದಿಗೆ ದ್ವಿತೀಯ ಸ್ಥಾನವನ್ನು ಪಡೆದಿದ್ದು, ವಿಜ್ಞಾನ ವಿಭಾಗದ ಐಶ್ವರ್ಯ ಯು ಪೈ 581 (ಶೇ 97) ಮತ್ತು ವಿಧಾತ್ರಿ ಬಿ.ಯು 581 (ಶೇ 97) ಅಂಕಗಳೊಂದಿಗೆ ತೃತೀಯ ಸ್ಥಾನವನ್ನು ಪಡೆದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಡಾ. ಎಂ ಸ್ವಾಮಿ ಹಾಗೂ ಸಿಬ್ಬಂದಿವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.













