ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಲೋಕಸಭಾ ಸಮರಕ್ಕೆ ಸಿದ್ಧವಾಗುತ್ತಿರುವ ಬಿಜೆಪಿ ಸಂಘಟನೆಯನ್ನು ಬಲಪಡಿಸುತ್ತಿದೆ. ಈ ನಿಟ್ಟಿನಲ್ಲಿ ನೂತನ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ; ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಉದ್ಯೋಗ; ನೇರ ಸಂದರ್ಶನ ಮೂಲಕ ಆಯ್ಕೆ

ಚಿಕ್ಕಮಗಳೂರಿನ ಡಾ. ಎ. ನರೇಂದ್ರ, ರವೀಂದ್ರ ಬೆಳವಾಡಿ ಹಾಗೂ ಕೊಪ್ಪದ ಪುಣ್ಯಪಾಲ್ ಅವರನ್ನು ನೇಮಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ; ಮಹಿಳೆಯರೇ ಸ್ವಂತ ಉದ್ಯಮ ಪ್ರಾರಂಭಿಸೋ ಆಸಕ್ತಿ ಇದೆಯೇ?; ಈ ಯೋಜನೆಯಡಿ ಸಿಗುತ್ತೆ 3 ಲಕ್ಷ ಸಾಲ
ಕೊಪ್ಪ: ಸಂಬಳದ ಹಣ ಕೇಳಿದ್ದಕ್ಕೆ ಮನಸ್ಸೋ ಇಚ್ಚೆ ಹಲ್ಲೆ
ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಸಂಬಳದ ಹಣ ಕೇಳಿದ್ದಕ್ಕೆ ಕಾಡಿನಲ್ಲಿ ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಸೋಮಲಾಪುರ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಸತೀಶ್ ಹಲ್ಲೆಗೊಳಗಾದ ಹೋಟೆಲ್ ಕಾರ್ಮಿಕ.
ಬೆಂಗಳೂರಿನಲ್ಲಿ ಕೊಪ್ಪ ಮೂಲದ ಮಂಜು ಎಂಬುವರ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಸತೀಶ್, ಸಂಬಳದ ವಿಚಾರವಾಗಿ ಗಲಾಟೆಯಿಂದ ಕೆಲಸ ಬಿಟ್ಟು ಊರಿಗೆ ಬಂದಿದ್ದ. ಹೋಟೇಲ್ ಮಾಲೀಕ ಮಂಜುಗೆ ಫೋನ್ ಮೂಲಕ ಸಂಬಳ ಕೇಳುತ್ತಿದ್ದ. ಈ ವಿಚಾರವಾಗಿ ಕೆಲಸದ ಹಣ ಕೊಡುವುದಾಗಿ ಕರೆಸಿ ಮರಕ್ಕೆ ಕಟ್ಟಿ ಹಾಕಿ ಆರು ಜನರಿಂದ ರಾಡ್, ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ. ಈ ಘಟನೆಯ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಹೇಶ್, ವಿಠಲ್, ಸಿರಿಲ್, ಸುನೀಲ್, ಸುನೀಲ್ ಕಟ್ಟೆಹಕ್ಲು, ಮಂಜು ಎಂಬುವವರ ವಿರುದ್ಧ ಸತೀಶ್ ದೂರು ನೀಡಿದ್ದಾರೆ. ಬಟ್ಟೆ ಬಿಚ್ಚಿ, ದೊಣ್ಣೆ, ರಾಡ್, ಬೆಲ್ಟ್ ನಿಂದ ಹೊಡೆದಿದ್ದಾರೆ. ಕೊಪ್ಪ ದ್ಯಾವೇಗೌಡ ವೃತ್ತದಲ್ಲಿರುವ ಪೆಟ್ರೋಲ್ ಬಂಕ್ ಬಳಿ ಬಿಟ್ಟು ಹೋಗಿದ್ದಾರೆ. ಅಲ್ಲದೆ ಪೊಲೀಸರಿಗೆ ದೂರು ನೀಡಿದರೆ ಸಾಯಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇನ್ನು ಸತೀಶ್ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು: ಗ್ರಾಮಕ್ಕೆ ಎಂಟ್ರಿ ಕೊಟ್ಟ ಬೀಟಮ್ಮ ಗ್ಯಾಂಗ್ | ರಸ್ತೆ ಗಿಳಿಯದಂತೆ ಎಚ್ಚರಿಕೆ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯಲ್ಲಿ ಬೀಟಮ್ಮ ಗ್ಯಾಂಗ್ ಆನೆಗಳ ಹಾವಳಿ ಹೆಚ್ಚಾಗಿದ್ದು, ತೋರಣಮಾವು ಗ್ರಾಮಕ್ಕೆ ಆನೆಗಳ ಗ್ಯಾಂಗ್ ಎಂಟ್ರಿಯಾಗಿದೆ. ಅರಣ್ಯ ಇಲಾಖೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು, ಮೈಕ್ ನಲ್ಲಿ ಅನೌನ್ಸ್ ಮೆಂಟ್ ಮಾಡಲಾಗಿದೆ.
ಇದನ್ನೂ ಓದಿ; ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 89 ಹುದ್ದೆಗಳಿಗೆ ನೇರ ನೇಮಕಾತಿ
ಗ್ರಾಮಸ್ಥರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ ನೀಡಿದೆ. ಅನವಶ್ಯಕವಾಗಿ ರಸ್ತೆ ಗಿಳಿಯಬೇಡಿ, ಬೆಳಗ್ಗೆ ಬೇಗನೆ ಕಾರ್ಮಿಕರು ಕಾಫಿ ತೋಟಕ್ಕೆ ಹೋಗಬೇಡಿ, ಯಾವುದೇ ಸಮಯದಲ್ಲಿ ಕಾಫಿ ತೋಟಕ್ಕೆ ಆನೆಗಳು ನುಗ್ಗುವ ಸಾಧ್ಯತೆ ಇವೆ ಎಂದು ಹಳ್ಳಿಗಳನ್ನು ಸುತ್ತಿ ಅರಣ್ಯಾಧಿಕಾರಿಗಳು ಸೂಚನೆ ನೀಡುತ್ತಿದ್ದಾರೆ.
ಐದಾರು ಗ್ರಾಮಗಳ ವ್ಯಾಪ್ತಿಯಲ್ಲಿ 24 ಆನೆಗಳ ಸಂಚಾರಿಸುತ್ತಿವೆ. ಚಿಕ್ಕಮಗಳೂರು ತಾಲೂಕಿನ ತೋರಣ ಮಾವು, ಕೋಡುವಳ್ಳಿ, ಗೌತಮೇಶ್ವರ, ಅಣೂರು, ದಿಣ್ಣೆಕೆರೆ ಗ್ರಾಮಗಳಲ್ಲಿ ಕಾಡಾನೆಗಳ ಆತಂಕ ಎದುರಾಗಿದೆ.












