ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಶ್ರೀರಾಮಸೇನೆ ನೇತೃತ್ವದಲ್ಲಿ ದತ್ತಮಾಲಾ ಅಭಿಯಾನ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಪೊಲೀಸರು ನಗರದಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲಾದ್ಯಂತ ಏಳು ದಿನಗಳ ಕಾಲ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದೆ.
ಇದನ್ನೂ ಓದಿ; ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!

ಅಲ್ಲದೇ, ಮುಂಜಾಗ್ರತ ಕ್ರಮವಾಗಿ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರಾ ಮತ್ತು ಗಾಳಿಕೆರೆ ಸೇರಿದಂತೆ ಸುತ್ತಮುತ್ತಲಿನ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡುವುದನ್ನು ನವೆಂಬರ್ 9ರ ಬೆಳಗ್ಗೆ 6 ಗಂಟೆಯಿಂದ ನವೆಂಬರ್ 11ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಿಸಲಾಗಿದೆ.
ಇದನ್ನೂ ಓದಿ; ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
ದತ್ತ ಮಾಲಾಧಾರಿಗಳು ನವೆಂಬರ್ 10ರಂದು ದತ್ತಪೀಠಕ್ಕೆ ಭೇಟಿ ನೀಡಲಿದ್ದಾರೆ. ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಮಾಲಾಧಾರಿಗಳು ಬರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪ್ರವಾಸಿ ತಾಣಗಳಿಗೆ ನಿರ್ಬಂಧಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ; ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ













