ಬಾಳೆಹೊನ್ನೂರು: ಬಿಜೆಪಿ ಕಾರ್ಯಕರ್ತರ ನಡುವೆಯೇ ಬಡಿದಾಟ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯಲ್ಲಿ ಶುಕ್ರವಾರ ಮತದಾನ ಪ್ರಕ್ರಿಯೆ ಮುಕ್ತಾಯಗೊಳ್ಳುವ ಹಂತದಲ್ಲಿ ಬಿಜೆಪಿ ಕಾರ್ಯಕರ್ತರ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು. ಶೃಂಗೇರಿ ಕ್ಷೇತ್ರ ವ್ಯಾಪ್ತಿಯ ಪ್ರಭಾವಿ ಬಿಜೆಪಿ ಹಾಗೂ ಮಾಜಿ ಬಜರಂಗದಳದ ಮುಖಂಡ ಖಾಂಡ್ಯ ಪ್ರವೀಣ್ ಮೇಲೆ ರಾಡ್ ನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಹಲ್ಲೆ ಮಾಡಿದವರು ಮಾಜಿ ಶಾಸಕ ಡಿ.ಎನ್ ಜೀವರಾಜ್ ಬೆಂಬಲಿಗರು ಎಂದು ಆರೋಪಿಸಲಾಗಿದೆ.


ಇದನ್ನೂ ಓದಿ: ನೀವು ವಾಟ್ಸಾಪ್‌ ಬಳಕೆದಾರರೇ?;  ವಾಟ್ಸಾಪ್‌ನಲ್ಲಿ ನಿಮಗೆ ಇನ್ನಷ್ಟು ಭದ್ರತೆ ಬೇಕೇ?; ಹಾಗಿದ್ರೆ ಈ ಸುದ್ದಿ ಓದಲೇಬೇಕು


ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಪ್ರವೀಣ್ ಖಾಂಡ್ಯ ತಮ್ಮ ಬೆಂಬಲಿಗರೊಂದಿಗೆ ಶೃಂಗೇರಿ ಕ್ಷೇತ್ರ ವ್ಯಾಪ್ತಿಯ ವಿವಿಧ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಸಂಚಾರ ಮಾಡುತ್ತಿದ್ದರು, ಉಜ್ಜಿನಿ ಮತದಾನ ಕೇಂದ್ರದ ಬಳಿ ಭೇಟಿ ಕೊಡುತ್ತಿದ್ದ ಖಾಂಡ್ಯ ಪ್ರವೀಣ್ ಹಾಗೂ ಬೆಂಬಲಿಗರ ಮೇಲೆ ಏಕಾಏಕಿ ರಘು ಮತ್ತು ತಂಡದವರು ಹಿಂಬದಿಯಿಂದ ತಲೆಗೆ ರಾಡ್ ನಿಂದ ಹಲ್ಲೆ ಮಾಡಿದ್ದಾರೆ.


ಇದನ್ನೂ ಓದಿ: ಈ ಯೋಜನೆಯಲ್ಲಿ ಸಿಗಲಿದೆ ಉಚಿತ ಮನೆ; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್


ಶೃಂಗೇರಿ ಕ್ಷೇತ್ರದ ಮಾಜಿ ಶಾಸಕ ಡಿ.ಎನ್.ಜೀವರಾಜ್ ಬೆಂಬಲಿಗರಾದ ವೆನಿಲ್ಲ ಭಾಸ್ಕರ್, ಅರುಣ್ ಸೇರಿದಂತೆ ಕೆಲ ಮಂದಿ ತನ್ನ ಮೇಲೆ ರಾಡ್ ನಿಂದ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದ್ದು, ಘಟನೆಯಲ್ಲಿ ಪ್ರವೀಣ್ ತಲೆಗೆ ತೀವ್ರ ಗಾಯವಾಗಿದೆ.

ಘಟನೆ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿರುವ ಪ್ರವೀಣ್ ಖಾಂಡ್ಯ, ಕ್ಷೇತ್ರದಲ್ಲಿ ಬ್ರಾಹ್ಮಣ ಸಮುದಾಯದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು, ತಾನೂ ಬ್ರಾಹ್ಮಣ ಸಮುದಾಯದವನಾಗಿದ್ದೇನೆ. ಕ್ಷೇತ್ರದಲ್ಲಿ ತನ್ನ ಏಳಿಗೆ ಸಹಿಸದ ಜೀವರಾಜ್ ತನ್ನ ಬೆಂಬಲಿಗರಿಗೆ ಕುಮ್ಮಕ್ಕು ನೀಡಿ ಹಲ್ಲೆ ಮಾಡಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.


ಇದನ್ನೂ ಓದಿ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುವವರಿಗೆ ಭರ್ಜರಿ ಜಾಬ್ ಆಫರ್; PUC ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ

ಶೃಂಗೇರಿ: ಪಾದಚಾರಿಗೆ ವಾಹನ ಡಿಕ್ಕಿ, ವ್ಯಕ್ತಿಗೆ ಗಂಭೀರ ಗಾಯ

ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕುಂಚೆಬೈಲು ಎಂಬಲ್ಲಿ ಪಾದಚಾರಿಗೆ ಫಾರ್ಚುನರ್ ಕಾರೊಂದು ಗುದ್ದಿದ ಪರಿಣಾಮ ಪಾದಚಾರಿಯ ಎರಡೂ ಕಾಲಿಗೆ ಗಂಭೀರವಾಗಿ ಪೆಟ್ಟಾಗಿದ್ದು, ಎಡಗಾಲಿನ ಎರಡು ಮೂಳೆಗಳು ಮುರಿದಿದ್ದು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.


ಇದನ್ನೂ ಓದಿ: ಚಿನ್ನದ ಮೇಲೆ ಸಾಲ ಪಡೆಯಬೇಕು ಅನ್ಕೊಂಡಿದ್ದೀರಾ?; ಹಾಗಾದ್ರೆ ಈ ಕುರಿತು ಬಿಗ್ ಅಪ್ಡೇಟ್ ಇಲ್ಲಿದೆ; ಮಿಸ್ ಮಾಡ್ದೆ ಓದಿ


ದ್ಯಾವಗೋಡು ನಿವಾಸಿಯಾದ ಆದರ್ಶ ಎಂಬುವವರು ಮತದಾನ ಮಾಡಲು ತೆರಳುತ್ತಿದ್ದ ವೇಳೆ ಶೃಂಗೇರಿ ಕಡೆಗೆ ಚಲಿಸುತ್ತಿದ್ದ ಕಾರು ಆದರ್ಶ ಗೆ ಗುದ್ದಿದೆ, ಚಾಲಕ ಸ್ಥಳದಲ್ಲಿ ವಾಹನವನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ. ಮೆಣಸೆ ಸಮೀಪ ಸ್ಥಳೀಯರ ಸಹಾಯದಿಂದ ಕಾರನ್ನು ಅಡ್ಡಗಟ್ಟಿದ್ದು ಪೊಲೀಸರಿಗೆ ದೂರು ನೀಡಲಾಗಿದೆ.
ಕಾರು ಹುಬ್ಬಳ್ಳಿಯ ವ್ಯಕ್ತಿಯದ್ದು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ; ಪೆಂಡಿಂಗ್ ಇರುವ ಹಣ ನಿಮ್ಮ ಖಾತೆಗೆ ಜಮಾ ಹೀಗೆ ಮಾಡಿ!

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.