ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಖಾಸಗಿ ಶಾಲಾ ಬಸ್ ಚಾಲಕ ಮತ್ತು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಆಡಳಿತ ಮಂಡಳಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ; ಯಾವ ಜಿಲ್ಲಾ ನ್ಯಾಯಾಲಯ, ಅರ್ಹತೆ ಏನು, ಅರ್ಜಿ ಸಲ್ಲಿಕೆ ಹೇಗೆ?

ಏನಿದು ಪ್ರಕರಣ:
ಸ್ನೇಹಿತರ ಜೊತೆ ಪಾರ್ಟಿಗೆ ಹೋಗುವುದಾಗಿ ಮನೆಯಿಂದ ತೆರಳಿದ್ದ ವಿದ್ಯಾರ್ಥಿನಿ ಜಾನವಿ (14) ಮತ್ತು ಶಾಲಾ ಬಸ್ ಚಾಲಕ ಸಂತೋಷ್ (46) ರೈಲಿನಡಿ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಬಂಕನಕಟ್ಟೆಯಲ್ಲಿ ನಡೆದಿತ್ತು.

ಇದನ್ನೂ ಓದಿ; ಹೊಸ ವರ್ಷಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ; LPG ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ
ಮೃತ ಜಾನವಿ ಅಜ್ಜಂಪುರ ತಾಲೂಕಿನ ಗಿರಿಯಾಪುರ ಗ್ರಾಮದ ಜ್ಞಾನದೀಪ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಇದೇ ಶಾಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಸಂತೋಷ್ ಶಾಲಾ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದನು. ತನ್ನನ್ನು ಪ್ರೀತಿಸುವಂತೆ ಮಗಳು ಜಾನವಿಗೆ ಸಂತೋಷ್ ಕಿರುಕುಳ ನೀಡುತ್ತಿದ್ದ ಬಗ್ಗೆ ಪೋಷಕರು ಶಾಲಾ ಮುಖ್ಯಸ್ಥರ ಗಮನಕ್ಕೆ ತಂದಿದ್ದರು. ಆದರೆ ಸಂತೋಷ್ ವಿರುದ್ಧ ಆಡಳಿತ ಮಂಡಳಿ ಕ್ರಮ ಕೈಗೊಂಡಿರಲಿಲ್ಲ. ಹೊಸ ವರ್ಷದ ಪಾರ್ಟಿ ಹಿನ್ನೆಲೆ ಸ್ನೇಹಿತರ ಜೊತೆ ಹೋಗುವುದಾಗಿ ಹೇಳಿದ್ದ ಜಾನವಿಯನ್ನು ಸಂತೋಷ್ ತನ್ನ ಜೊತೆ ಕರೆದೊಯ್ದಿದ್ದನು. ಆದರೆ, ರೈಲಿನಡಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದರು.
ಇದನ್ನೂ ಓದಿ; ವಿಶೇಷಚೇತನರ ಸಬಲೀಕರಣ ಇಲಾಖೆಯಲ್ಲಿ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆ ಹೇಗೆ?, ವೇತನ ಎಷ್ಟು
ಈ ಕುರಿತು ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂಡಿಗೆರೆ: ವಾಕ್ ಮುಗಿಸಿ ರಸ್ತೆ ದಾಟುವಾಗ ಸ್ಕೂಟಿ ಡಿಕ್ಕಿ | ಗಂಭೀರ ಗಾಯ
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ವಾಕ್ ಮುಗಿಸಿ ರಸ್ತೆ ದಾಟುವಾಗ ಸ್ಕೂಟಿ ಡಿಕ್ಕಿಯಾಗಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುದ್ರೆಮನೆ ಕಾಫಿ ಕ್ಯೂರಿಂಗ್ ಬಳಿ ನಡೆದಿದೆ. ಸಮೀರ್ ಅಪಘಾತಕ್ಕೊಳಗಾದ ವ್ಯಕ್ತಿ.
ಬೆಳಗಿನ ಜಾವ ವಾಕ್ ಮುಗಿಸಿ ರಸ್ತೆ ದಾಟುವಾಗ ಸ್ಕೂಟಿ ಡಿಕ್ಕಿಯಾದ ರಭಸಕ್ಕೆ ಬೈಕ್ ಸವಾರ ಜೊತೆಗೆ ದಾರಿ ಹೊಕ್ಕ ಹಾರಿ ಬಿದ್ದಿದ್ದಾರೆ. ಅಪಘಾತದ ತೀವ್ರತೆಗೆ ಸಮೀರ್ ಕಾಲು ಮುರಿದಿದ್ದು, ಮುಖ-ಕೈ- ಕಾಲಿಗೆ ತೀವ್ರ ಪೆಟ್ಟಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಕೂಟಿ ಚಾಲಕನಿಗೂ ಗಂಭೀರ ಗಾಯವಾಗಿದ್ದು, ಮೂಡಿಗೆರೆ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.













