ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ತಾಲೂಕಿನ ಉದ್ದೆಬೋರನಹಳ್ಳಿ ವ್ಯಾಪ್ತಿಯ ಪಾದಮನೆ ಗ್ರಾಮದ ಮನೆಯೊಂದರ ಬಳಿ ಪುನುಗು ಬೆಕ್ಕು ಬೇಟೆ ಮಾಡಿ ಚರ್ಮ ಸುಲಿದು ಮಾಂಸ ತೆಗೆಯುವ ವೇಳೆ ದಾಳಿ ನಡೆಸಿರುವ ಘಟನೆ ನಡೆದಿದೆ.
ಇದನ್ನೂ ಓದಿ: ರಾಜ್ಯದ SC, ST ಸಮುದಾಯದವರ ಗಮನಕ್ಕೆ; ಇಲ್ಲಿದೆ ನಿಮಗೆ ಮುಖ್ಯ ಮಾಹಿತಿ

ಉಪ ವಲಯ ಅರಣ್ಯಾಧಿಕಾರಿ ನಾರಾಯಣ್ ಎಲ್ ಮತ್ತು ಸಿಬ್ಬಂದಿ ದಾಳಿ ಮಾಡಿ ರವಿ ಎಂಬಾತನನ್ನು ವಶಕ್ಕೆ ಪಡೆದು ವನ್ಯಜೀವಿ ಸಂರಕ್ಷಣಾ ಕಾಯಿದೆ ಅನ್ವಯ ಪ್ರಕರಣ ದಾಖಲು ಮಾಡಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕಾರ್ಯಾಚರಣೆಯನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಬಾಬು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್ ವಲಯ ಅರಣ್ಯಾಧಿಕಾರಿ ತನುಜ್ ಕುಮಾರ್ ಮಾರ್ಗದರ್ಶನದಲ್ಲಿ ಸಿಬ್ಬಂದಿ ಗೀತಾ, ಮಧು, ಗಣೇಶ್, ಅಶೋಕ್, ನವೀನ್ ಇದ್ದರು.
ಇದನ್ನೂ ಓದಿ: ವಿವಿಧ ಯೋಜನೆಗೆ ಅರ್ಜಿ ಆಹ್ವಾನ; 4 ಲಕ್ಷ ಸಹಾಯಧನ












