ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕೇರಳದ ವಯನಾಡು ಗುಡ್ಡ ಕುಸಿತದ ಬಳಿಕ ಕರ್ನಾಟಕದಲ್ಲಿ ಅಪಾಯಕಾರಿ ಪ್ರದೇಶಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಜಿಯೋಲಾಜಿಕಲ್ ಸರ್ವೇ ತಂಡದ ತನಿಖೆಗೆ ಸರ್ಕಾರ ಆದೇಶ ನೀಡಿತ್ತು. ಅದರಂತೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಮೀಕ್ಷೆ ನಡೆಸಿದ ಜಿಯೋಲಾಜಿಕಲ್ ಸರ್ವೇ ತಂಡ ಚಂದ್ರದ್ರೋಣ ಪರ್ವತದ ಸಾಲು, ಮುಳ್ಳಯ್ಯನಗಿರಿ ಹಾಗೂ ಚಾರ್ಮಾಡಿ ಘಾಟಿ ಅಪಾಯಕಾರಿ ಪ್ರದೇಶಗಳಾಗಿ ಪರಿಣಮಿಸಿವೆ ಎಂದು ಜಿಯೋಲಾಜಿಕಲ್ ಸರ್ವೇ ವರದಿಯಲ್ಲಿ ಉಲ್ಲೇಖಿಸಿತ್ತು. ಅಲ್ಲದೆ ಜಿಲ್ಲೆಯ 5 ಗ್ರಾಮಗಳು ಅಪಾಯಕಾರಿ ಎಂದು ವರದಿ ನೀಡಿದೆ. 2019 ರಲ್ಲಿ ಮಹಾಮಳೆಗೆ ಈ 5 ಗ್ರಾಮಗಳಲ್ಲಿ ಭೂಕುಸಿತ ಸಂಭವಿಸಿತ್ತು. ಅದೇ ಗ್ರಾಮಗಳಲ್ಲಿ ಮತ್ತೆ ಭೂಮಿ ಕುಸಿಯುವ ಸೂಚನೆಯನ್ನು ನೀಡಿದ್ದು, ಮುಂದಿನ ಮಳೆಗಾಲದೊಳಗೆ ಗ್ರಾಮಗಳಲ್ಲಿರುವ ಜನರನ್ನು ಸ್ಥಳಾಂತರ ಮಾಡಬೇಕೆಂದು ಸೂಚನೆ ನೀಡಲಾಗಿದೆ.
ಇದನ್ನೂ ಓದಿ; ಪವರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 2975 ಹುದ್ದೆ, 10th ವಿದ್ಯಾರ್ಹತೆ; ಈಗಲೇ ಅರ್ಜಿ ಸಲ್ಲಿಸಿ

ಹೌದು, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಗುಡ್ಡೇತೋಟ, ಬಸರಿಕಟ್ಟೆ, ಶೃಂಗೇರಿ ತಾಲೂಕಿನ ಕೆರೆದಂಡೆ, ಕಳಸ ತಾಲೂಕಿನ ಸೋಮನಕಟ್ಟೆ, ಚನ್ನಹಡ್ಲು ಗ್ರಾಮಗಳಲ್ಲಿ ಭೂಕುಸಿತ ಸಾಧ್ಯತೆ ಇದೆ ಎಂದು ಜಿಯೋಲಾಜಿಕಲ್ ಸರ್ವೇ ತಂಡ ಇತ್ತೀಚೆಗೆ ಜಿಲ್ಲಾಧಿಕಾರಿಗೆ ಸಲ್ಲಿಸಿದ ಸಮೀಕ್ಷಾ ವರದಿಯಲ್ಲಿ ಉಲ್ಲೇಖಿಸಿದೆ. ಮಳೆ ಹೆಚ್ಚಾದರೆ ಮತ್ತೆ ಈ 5 ಗ್ರಾಮಗಳಲ್ಲಿ ಭೂ ಕುಸಿತವಾಗುವ ಸಾಧ್ಯತೆ ಎಂದು ವರದಿಯಲ್ಲಿ ಹೇಳಲಾಗಿದೆ. ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ವರದಿ ಆಧರಿಸಿ ಕ್ರಮ ಕೈಗೊಳ್ಳಲು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಾಲೂಕು ಆಡಳಿತಕ್ಕೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ; ಜಿಲ್ಲೆಯ ಅಂಗನವಾಡಿಯಲ್ಲಿ ಭರ್ಜರಿ ಜಾಬ್ ಆಫರ್; 1170 ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ಗುಡ್ಡೇತೋಟ ಸೇರಿದಂತೆ 5 ಗ್ರಾಮಗಳ ಸ್ಥಳಾಂತರ ಮಾಡಲು ಸೂಚನೆ ನೀಡಲಾಗಿದೆ. ಪರ್ಯಾಯ ವ್ಯವಸ್ಥೆ ಬಗ್ಗೆ ಚರ್ಚೆ ನಡೆಯುತ್ತಿದ್ದು, ಅಧಿಕಾರಿಗಳ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ವರದಿಯನ್ನು ಸರ್ಕಾರಕ್ಕೆ ಕಳುಹಿಸಿ ಚರ್ಚೆ ನಡೆಸಲಾಗುತ್ತದೆ. ಸರ್ಕಾರದ ಸೂಚನೆ ಮೇರೆಗೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?













