ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿದ್ಯುತ್ ತಂತಿ ತಗುಲಿ ಕಾಡಾನೆಯೊಂದು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ; ಈ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ; ನಿಮ್ಮ ರೇಷನ್ ಕಾರ್ಡ್ ಅನ್ನು ಇಲ್ಲಿ ಪಡೆಯಿರಿ

ಬೀಟಮ್ಮ ಗ್ಯಾಂಗ್ʼನ ಒಂದು ಸಲಗ ಚಿಕ್ಕಮಗಳೂರು ತಾಲೂಕಿನ ತುಡುಕೂರು ಗ್ರಾಮದ ಬಳಿ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿತ್ತು. ಇದಕ್ಕೆ ಸಂಬಂಧಿಸಿದಂತೆ ಇದೀಗ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಅರಣ್ಯಾಧಿಕಾರಿ ಹರೀಶ್ ದೂರು ನೀಡಿದ್ದು, ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಮೆಸ್ಕಾಂನ ಜ್ಯೂನಿಯರ್ ಎಂಜಿನಿಯರ್, ಅಸಿಸ್ಟೆಂಟ್ ಎಂಜಿನಿಯರ್, ಎಕ್ಸಿಕ್ಯೂಟಿವ್ ಎಂಜಿನಿಯರ್ ವಿರುದ್ದ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ; ರಾಜ್ಯದ ಎಲ್ಲಾ ರೈತರಿಗೆ ಮುಖ್ಯ ಮಾಹಿತಿ; ಈ ಕೆಲಸ ಮಾಡಲು ಮೂರು ದಿನ ಮಾತ್ರ ಬಾಕಿ
ಕಾಡಾನೆ ಹಾವಳಿ ಹೆಚ್ಚಾದ ಕಾರಣ ಕೆಲವು ಗ್ರಾಮಗಳಿಗೆ ನಿಷೇಧಾಜ್ಞೆ ಜಾರಿಗೊಳಿಸಿದ್ದ ಜಿಲ್ಲಾಡಳಿತ:
ಹೌದು, ಚಿಕ್ಕಮಗಳೂರು ತಾಲೂಕು ಮೂಗ್ತಿಹಳ್ಳಿ ಮತ್ತು ವಸ್ತಾರೆ ಗ್ರಾಮ ಪಂಚಾಯಿತಿ ವ್ಯಾಪ್ರಿಯ ಗ್ರಾಮಗಳಾದ ಮತ್ತಾವರ, ದಂಬದಹಳ್ಳಿ, ಶಿರಗುಂದ, ದುಂಗೆರೆ, ಮೂಗ್ತಿಹಳ್ಳಿ, ಕದ್ರಿಮಿದ್ರಿ ಹಾಗೂ ವಸ್ತಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲದಗುಡ್ಡೆ, ವಸ್ತಾರೆ, ನಂದಿಕೆರೆ, ದಹುಲುವಾಲೆ, ತೊಂಡವಳಿ, ಸಂಸೆ, ದಿಣ್ಣೆಕರೆ, ಗ್ರಾಮಗಳಲ್ಲಿ ಬಿಟ್ಟಮ್ಮ ಆನೆ ತಂಡವು ಸಂಚರಿಸುತ್ತಿದ್ದು ಸಾರ್ವಜನಿಕರ ಸುರಕ್ಷತೆ ದೃಷ್ಟಯಿಂದ ಮುಂಜಾಗ್ರತಾ ಕ್ರಮವಾಗಿ ಈ ಹಿಂದೆ ಎರಡು ದಿನಗಳ ಕಾಲ ಸಾರ್ವಜನಿಕರ ಸುರಕ್ಷತೆ ದೃಷ್ಟಯಿಂದ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಡಳಿತದ ಆದೇಶ ಹೊರಡಿಸಿತ್ತು.
ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ












