ಚಿಕ್ಕಮಗಳೂರು: ಪತ್ನಿಯನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಶರಣಾದ ಪತಿ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಪತ್ನಿಯನ್ನೇ ವ್ಯಕ್ತಿಯೊಬ್ಬ ಹತ್ಯೆಗೈದಿರುವ ಘಟನೆ ಚಿಕ್ಕಮಗಳೂರು ನಗರದ ಕ್ರಿಶ್ಚಿಯನ್ ಕಾಲೋನಿಯಲ್ಲಿ ಮಂಗಳವಾರ ರಾತ್ರಿ ವರದಿಯಾಗಿದೆ. ಮೃತಳನ್ನ ಶಮಾಭಾನು (34) ಎಂದು ಗುರುತಿಸಲಾಗಿದೆ. ಪತ್ನಿಯನ್ನ ಕೊಲೆಗೈದ ಪತಿ ಶಬ್ಬಿರ್ ಅಹ್ಮದ್ ನಗರ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.

 

ಇದನ್ನೂ ಓದಿ; ಡ್ರೋಣ್ ಪ್ರತಾಪ್ ಕಂಪೆನಿಯಲ್ಲಿ ಉದ್ಯೋಗಾವಕಾಶ.. ತಿಂಗಳಿಗೆ 40 ಸಾವಿರ ಸಂಬಳ

ಆರೋಪಿ ಶಬೀರ್ ಅಹಮದ್ ತನ್ನ ಪತ್ನಿ ಶಮಾಭಾನು ಜೊತೆ ಗೋವಾ ಪ್ರವಾಸ ಹೋಗಿದ್ದನು. ಒಂದು ವಾರಗಳ ಕಾಲ ಗೋವಾದಲ್ಲಿ ಪ್ರವಾಸ ಮುಗಿಸಿ ಬಂದ ಮರುದಿನವೇ ಪತ್ನಿಯನ್ನ ಸುತ್ತಿಗೆಯಿಂದ ಹೊಡೆದು ಕೊಲೆಗೈದಿದ್ದಾನೆನ್ನಲಾಗಿದೆ. ಆರೋಪಿಯ ಮೊದಲ ಪತ್ನಿ ಕೊರೋನದಿಂದ ಸಾವನ್ನಪ್ಪಿದ್ದರು. ಹಿರಿಯ ಪತ್ನಿ ಸಾವಿನ ನಂತರ ಕಳೆದ ವರ್ಷ ಶಮಾಭಾನುರನ್ನ ಮದುವೆಯಾಗಿದ್ದನು ಎಂದು ಹೇಳಲಾಗಿದೆ.

 

ಇದನ್ನೂ ಓದಿ; ರೇಷನ್ ಕಾರ್ಡ್ ನಲ್ಲಿ ಹೆಸರು ಬದಲಾಯಿಸೋಕೆ ಇದೇ ನೋಡಿ ಲಾಸ್ಟ್ ಡೇಟ್

ಇನ್ನು ಪೊಲೀಸರಿಗೆ ಶರಣಾಗಿರುವ ಆರೋಪಿ, ಶಬೀರ್ ಹಾಗೂ ಪತ್ನಿ ಜಗಳವಾಯಿತು, ಆಕೆ ನನ್ನನ್ನ ತಲೆದಿಂಬಿನಿಂದ ಮುಖಕ್ಕೆ ಮುಚ್ಚಿ ಸಾಯಿಸಲು ಯತ್ನಿಸಿದ್ದಳು. ಅದಕ್ಕೆ ಹೊಡೆದಿದ್ದೇನೆ ಎಂದು ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ನಗರ ಪೊಲೀಸರು ಹಾಗೂ ಎಸ್ಪಿ ವಿಕ್ರಮ್ ಅಮಟೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಇನ್ನು ಈ ಪ್ರಕರಣದ ಬಗ್ಗೆ ಎಸ್ಪಿ ಮಾತನಾಡಿ, ಚಿಕ್ಕಮಗಳೂರು ಪೊಲೀಸ್ ಠಾಣೆಗೆ ಬಂದ ದೂರಿನನ್ವಯ, ಶಮಾಭಾನು ಅವರ ಸಂಬಂಧಿ ಸೈಯದ್ ಅಲೀಂ ಎನ್ನುವವರು ದೂರು ನೀಡಿದ್ದಾರೆ. ಶಬ್ಬಿರ್ ಅಹ್ಮದ್ ಕೂಡ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಸ್ಥಳ ಪರಿಶೀಲನೆ ನಡೆಸಿದ್ದೇವೆ ತನಿಖೆ ಕೈಗೊಂಡು ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಹಾಗೆ ಶಬ್ಬಿರ್ ಅಹ್ಮದ್ ಹಾಗೂ ಶಮಾಭಾನು ಇಬ್ಬರಿಗೂ ಎರಡೂ ಮದುವೆ ಆಗಿತ್ತು ಎಂಬ ಮಾಹಿತಿ ಸಿಕ್ಕಿದೆ. ಯಾವ ಕಾರಣಕ್ಕೆ ಈ ಹತ್ಯೆ ನಡೆದಿದೆ ಎಂದು ನೋಡಬೇಕು ಎಂದಿದ್ದಾರೆ.

ಶೃಂಗೇರಿಯಲ್ಲಿ ಅಕ್ರಮ ಮಧ್ಯ ಮಾರಾಟದ ಹಾವಳಿ
ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಅಕ್ರಮ ಮಧ್ಯ ಮಾರಾಟ ಮಾಡುತ್ತಿದ್ದ ಅಡ್ಡೆಯೊಂದರ ಮೇಲೆ ಪೊಲೀಸರು ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನಲ್ಲಿ ನಡೆದಿದೆ.

ಇದನ್ನೂ ಓದಿ; ಭಾರತದಲ್ಲಿ ಭರ್ಜರಿ ಹೂಡಿಕೆ ಮಾಡಲಿರುವ ಅಮೆಜಾನ್

 

ತಾಲ್ಲೂಕಿನ ಕುಂಚೇಬೈಲು ಸಮೀಪ ಸ್ಥಳೀಯರಾದ ಜನಶಕ್ತಿಯ ಪ್ರಮೋದ್, ಶಶಾಂಕ್, ಸಾಗರ್ ಅವರ ಮಾಹಿತಿ ಮೇರೆಗೆ ಅಕ್ರಮ ಮಧ್ಯ ಮಾರಾಟ ಅಡ್ಡೆಯ ಮೇಲೆ ಶೃಂಗೇರಿ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಆರೋಪಿ ಉಮೇಶ್ ಪೊಲೀಸರ ಕರ್ತವ್ಯಕ್ಕೂ ಅಡ್ಡಿಪಡಿಸಿ ಅಲ್ಲಿಂದ ಕಾಲ್ಕಿತ್ತಿದ್ದಾನೆಂದು ತಿಳಿದುಬಂದಿದೆ. ಅರೋಪಿ ಹೊಂದಿದ್ದ 1440 ರೂ. ಮೌಲ್ಯದ ಸುಮಾರು 35 ರಿಂದ 50 ಪ್ಯಾಕೇಟ್ ಅಕ್ರಮ ಮಧ್ಯವನ್ನು ವಶಪಡಿಸಿಕೊಂಡಿದ್ದಾರೆ. ಒಂದು ದಿನದ ಬಳಿಕ ಆರೋಪಿ ಪತ್ತೆಯಾಗಿದ್ದು ಈ ಕುರಿತು ಪ್ರಕರಣ ದಾಖಲಾಗಿದೆ.

ಪೊಲೀಸರನ್ನು ತಳ್ಳಿ ಓಡಿದ್ನಾ ಆರೋಪಿ.?
ಅಕ್ರಮ ಮಧ್ಯ ಮಾರಾಟದ ಅಡ್ಡೆಯ ಬಳಿ ಪೊಲೀಸರು ಬರುತ್ತಿದ್ದಂತೆ ಆರೋಪಿ ಉಮೇಶ್ ಅಲ್ಲಿಂದ ಓಡಲು ಪ್ರಯತ್ನಿಸಿದ್ದು, ಪೊಲೀಸರನ್ನು ತಳ್ಳಿಹಾಕಿದ್ದಾನೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಆರೋಪಿಗೆ ಜಾಮೀನು ದೊರೆತಿದ್ದು, ಮತ್ತೆ ಅದೇ ದಂಧೆಯಲ್ಲಿ ತೊಡಗಿದ್ದಾನೆ. ಇವರ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂದು ಹೆಸರು ಹೇಳಲಿಚ್ಚಿಸದ ಸ್ಥಳೀಯರೊಬ್ಬರು ಆರೋಪಿಸಿದ್ದಾರೆ.

ಅಕ್ರಮ ಮಧ್ಯ ಮಾರಾಟದಲ್ಲಿ ತೊಡಿಗಿದ್ದವರಿಗೆ ಈ ಹಿಂದೆಯೇ ಮಾರಾಟ ಮಾಡದಿರುವಂತೆ ತಿಳಿಸಿದ್ದೆವು. ಆದರೆ ಅವರು ಅದನ್ನೇ ವೃತ್ತಿ ಮಾಡಿಕೊಂಡಿದ್ದಾರೆ. ಇಂತಹ ಅಕ್ರಮ ಮಧ್ಯ ಕುಡಿದು ಅನೇಕ ಕುಟುಂಬಗಳು ಬೀದಿಗೆ ಬಿದ್ದಿವೆ. ಸಂಬಂಧಪಟ್ಟ ಇಲಾಖೆ ಕೂಡಲೇ ಎಚ್ಚೆತ್ತುಕೊಳ್ಳಬೇಕು. – ಮನೋಜ್, ಜನಶಕ್ತಿ ಜಿಲ್ಲಾ ಸದಸ್ಯ

ಶೃಂಗೇರಿ ಕೊಪ್ಪ ಭಾಗದಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮಧ್ಯದ ಹಾವಳಿ

ಶೃಂಗೇರಿ ಸುತ್ತಮುತ್ತ ಹಾಗೂ ಕೊಪ್ಪ ತಾಲ್ಲೂಕಿನ ಹಲವು ಅಂಗಡಿಗಳಲ್ಲಿ ಅಕ್ರಮ ಮಧ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ. ಈ ಕುರಿತು ಅನೇಕ ಬಾರಿ ಮಾಹಿತಿ ನೀಡಿದರೂ ಸಂಬಂಧಪಟ್ಟ ಇಲಾಖೆ ಮಾತ್ರ ಈವರೆಗೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಪೊಲೀಸರು ಈ ಕುರಿತು ಗಮನ ಹರಿಸಿ ಅಕ್ರಮ ಮಧ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

 

ಬಾಳೆಹೊನ್ನೂರು: ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ)  ಗೋ ಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪದ ಕಡಬಗೆರೆಯಲ್ಲಿ ನಡೆದಿದೆ. ಅಸ್ಸಾಂ ಮೂಲದ ಆಸಿಫ್ ಇಸ್ಲಾಂ (32) ಬಂಧಿತ ಆರೋಪಿ.

ಇದನ್ನೂ ಓದಿ; ಚಿಕ್ಕಮಗಳೂರು: ಲಂಚಕ್ಕೆ ಬೇಡಿಕೆಯಿಟ್ಟು ಸಿಕ್ಕಿಬಿದ್ದ rto ಅಧಿಕಾರಿ

ಸಿದ್ದಾಪುರ ಗ್ರಾಮದ ಖಾಸಗಿ ಎಸ್ಟೇಟ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಈತ ಭಾನುವಾರ ಕಡಬಗೆರೆಯಲ್ಲಿ ವ್ಯಕ್ತಿಯೊಬ್ಬನಿಂದ 20 ಕೆಜಿ ಗೋಮಾಂಸವನ್ನು 3 ಸಾವಿರ ರೂ. ನೀಡಿ ಖರೀದಿಸಿ ಎಸ್ಟೇಟ್‌ಗೆ ಕೊಂಡೊಯ್ಯುತ್ತಿದ್ದ.

ಇದನ್ನೂ ಓದಿ; ಚಿಕ್ಕಮಗಳೂರು: ಗಾಂಜಾ ಪೆಡ್ಲರ್ ಗಳ ನಡುವೆ ಮಾರಾಮಾರಿ; ಲಾಂಗ್ ನಿಂದ ಹಲ್ಲೆ

ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆಸಿಫ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈತನಿಗೆ ಮಾಂಸ ನೀಡಿದವನ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದು ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ. ಈತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.