ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿಯಿಂದಾಗಿ ಕಾಫಿ, ಬಾಳೆ, ಅಡಿಕೆ ಸೇರಿದಂತೆ ಅನೇಕ ಬೆಳೆಗಳು ನಾಶವಾಗಿದ್ದವು. ಕಾಡಾನೆ ದಾಳಿಯಿಂದ ಆನೆ ನಿಗ್ರಹ ಪಡೆಯ ಸದಸ್ಯ ಸೇರಿದಂತೆ ಅನೇಕ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಕಾಡಾನೆ ಹಾವಳಿ ನಿಲ್ಲುವ ಮೊದಲೇ ಕರಡಿ ಆತಂಕ ಶುರುಮಾಡಿದೆ.
ಇದನ್ನೂ ಓದಿ; SC, ST ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ; ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿಕ್ಕಮಗಳೂರು ತಾಲ್ಲೂಕಿನ ಮಲ್ಲಂದೂರು ಗ್ರಾಮದಲ್ಲಿ ಕರಡಿ ಪ್ರತ್ಯಕ್ಷಗೊಂಡಿದ್ದು, ಜೇನುಕೃಷಿಕರಿಗೆ ಆತಂಕಕ್ಕೀಡು ಮಾಡುತ್ತಿವೆ. ವಾಹನವೊಂದರ ಮುಂಭಾಗದಲ್ಲಿ ಕರಡಿಯೊಂದು ಹೆಡ್ ಲೈಟ್ ಬೆಳಕು ಅನುಸರಿಸಿಕೊಂಡು ಓಡುತ್ತಿದ್ದು, ಕರಡಿಗೆ ರಸ್ತೆ ಕಾಣಿಸಲು ಕಾರಿನ ಹೆಡ್ ಲೈಟ್ ಬೆಳಕು ತೋರಿದಂತಿದೆ. ವಾಹನವೊಂದು ಬರುತ್ತಿರೋದು ಗೊತ್ತಾದ ಕೂಡಲೇ ಕರಡಿ ರಸ್ತೆಬಿಟ್ಟು ಅರಣ್ಯಪ್ರದೇಶದೊಳಗೆ ಓಡಿದೆ. ಮಲೆನಾಡು ಭಾಗದಲ್ಲಿ ಕರಡಿ ಕಾಣಿಸಿಕೊಂಡ ಹಿನ್ನೆಲೆ ಜೇನುಕೃಷಿಕರು ಆತಂಕ ಪಡುವ ಪರಿಸ್ಥಿತಿ ಎದುರಾಗಿದೆ.

ಇದನ್ನೂ ಓದಿ; ಅನರ್ಹರ ಜಮೀನು ವಶಕ್ಕೆ ಕಂದಾಯ ಇಲಾಖೆ ಸಜ್ಜು; ಒಂದು ತಿಂಗಳೊಳಗೆ ಅರ್ಜಿ ತಿರಸ್ಕೃತ
ಚಿಕ್ಕಮಗಳೂರು: ಆತ್ಮಹತ್ಯೆಗೆ ಶರಣಾದ ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ನಗರದ ಹೊರವಲಯದ ತೇಗೂರು ಗ್ರಾಮದಲ್ಲಿ ನಡೆದಿದೆ. ವಿನೋದ್(24) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಪ್ರೀತಿಸಿ ಮದುವೆಯಾದ ಮೂರೇ ದಿನಕ್ಕೆ ಹೆಂಡತಿ ಬಿಟ್ಟು ಹೋದಳೆಂದು ಮನನೊಂದ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ವಿನೋದ್ ಮನೆಯಲ್ಲಿ ಯಾರು ಇಲ್ಲದ ವೇಳೆ ಸಮಯ ನೋಡಿಕೊಂಡು ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ತೇಗೂರು ಗ್ರಾಮದ ತನುಜಾ ಎಂಬ ಯುವತಿ ಹಾಗೂ ವಿನೋದ್ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇವರ ಪ್ರೀತಿಗೆ ಯುವತಿ ಮನೆಯವರ ಸಮ್ಮತಿ ಇರಲಿಲ್ಲ. ಹೀಗಾಗಿ ಯುವತಿ ಮನೆಯವರ ವಿರೋಧದ ನಡುವೆಯೂ ಇಬ್ಬರೂ ಓಡಿ ಹೋಗಿ ಮದುವೆಯಾಗಿದ್ದರು. ಡಿಸೆಂಬರ್ 10 ರಂದು ವಿನೋದ್ ಹಾಗೂ ತನುಜಾ ಮದುವೆಯಾಗಿದ್ದರು. ಯುವತಿಯ ಕುಟುಂಬಸ್ಥರ ದೂರಿನ ಮೇರೆಗೆ ಠಾಣೆಯಲ್ಲಿ ಪಂಚಾಯಿತಿ ನಡೆದಿದ್ದು, ಯುವತಿ ತನ್ನ ತಾಯಿ ಮನೆಗೆ ಹೋಗುವುದಾಗಿ ಹೇಳಿಕೆ ನೀಡಿದ್ದಾಳೆ. ಮದುವೆಯಾದ ಮೂರೇ ದಿನಕ್ಕೆ ಗಂಡನನ್ನು ಬಿಟ್ಟು ತಾಯಿ ಜೊತೆ ಹೋಗುವುದಾಗಿ ಹೇಳಿ ಯುವತಿ ಉಲ್ಟಾ ಹೊಡೆದಿದ್ದಾಳೆ.
ಇದರಿಂದ ಮನನೊಂದ ವಿನೋದ್ ಫೆಬ್ರವರಿ 2 ರಂದು ಆತ್ಮಹತ್ಯೆಗೆ ಯತ್ನಿಸಿದ್ದ ಕುಟುಂಬಸ್ಥರು ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.












