ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮಟನ್ ಊಟವೆಂದು, ಗೋ ಮಾಂಸದ ಊಟ ನೀಡುತ್ತಿದ್ದ ಪ್ರತಿಷ್ಠಿತ ಹೋಟೆಲ್ ಗಳ ಮೇಲೆ ಪೊಲೀಸರು ದಾಳಿ ಮಾಡಿ ಇಬ್ಬರು ಹೋಟೆಲ್ ಮಾಲೀಕರನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ಎವರೆಸ್ಟ್ ಹೋಟೆಲ್ ಮಾಲೀಕ ಲತೀಫ್ ಮತ್ತು ಬೆಂಗಳೂರಿನ ಹೋಟೆಲ್ ಮಾಲೀಕ ಶಿವರಾಜ್ ಅವರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಕ್ತಿದ್ದಂತೆ ಅಕೌಂಟ್ ಗೆ ಬಂತು ಹಣ; ನಿಮ್ಮ ಖಾತೆಗೆ ಬಂದಿಲ್ವಾ? ಚೆಕ್ ಮಾಡೋದು ಹೇಗೆ?

ನಗರದ ಬೆಂಗಳೂರು ಹೋಟೆಲ್, ಎವರೆಸ್ಟ್ ಹೋಟೆಲ್ ಗಳು ಮಟನ್ ಬದಲು ಗೋಮಾಂಸದ ಖಾದ್ಯಗಳನ್ನ ನೀಡುತ್ತಿದ್ದವು ಎಂಬ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಎವರೆಸ್ಟ್ ಹೋಟೆಲ್ ಮಾಲೀಕ ಲತೀಫ್ ಮತ್ತು ಬೆಂಗಳೂರಿನ ಹೋಟೆಲ್ ಮಾಲೀಕ ಶಿವರಾಜ್ ಅವರನ್ನು ಬಂಧಿಸಿದ್ದಾರೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ; ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ಸರ್ಕಾರ; ಉಚಿತ ಲ್ಯಾಪ್ ಟಾಪ್‌ಗಾಗಿ ಅರ್ಜಿ ಆಹ್ವಾನ
20 ಕೆಜಿ ಗೋಮಾಂಸ ವಶಕ್ಕೆ:
ಮತ್ತೊಂದು ಪ್ರಕರಣದಲ್ಲಿ ಚಿಕ್ಕಮಗಳೂರು ನಗರದ ಅಂಬೇಡ್ಕರ್ ರಸ್ತೆಯಲ್ಲಿರುವ ನ್ಯಾಮತ್ ಹೋಟೆಲ್ ನಲ್ಲಿ ಸಂಗ್ರಹಿಸಲಾಗಿದ್ದ 20 ಕೆಜಿ ಗೋಮಾಂಸವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹೊಟೇಲ್ ಮಾಲೀಕ ಇರ್ಷಾದ್ ಅಹಮದ್ ನನ್ನು ಪೊಲೀಸರು ಬಂಧಿಸಿದ್ದು ತನಿಖೆ ನಡೆಸುತ್ತಿದ್ದಾರೆ.
ಕೊಪ್ಪ: ವೈದ್ಯರ ಆತ್ಮಹತ್ಯೆ ಯತ್ನಕ್ಕೆ ಕಾರಣ ಏನು?
ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ವೈಯಕ್ತಿಕ ಕಾರಣದಿಂದ ನೊಂದಿದ್ದ ಹಾಗೂ ತಾಲೂಕು ಆಸ್ಪತ್ರೆಯ ಆಡಳಿತಾಧಿಕಾರಿಯ ನೋಟಿಸ್‌ನಿಂದ ಬೇಸತ್ತ ಪ್ರಸೂತಿ ವೈದ್ಯರೊಬ್ಬರು ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳವಾರ ಜಿಲ್ಲೆಯ ಬಾಳೆಹೊನ್ನೂರು ಪಟ್ಟಣದಲ್ಲಿ ವರದಿಯಾಗಿದೆ.
ಕೊಪ್ಪ ಸರಕಾರಿ ತಾಲೂಕು ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞರಾಗಿ ಕರ್ತವ್ಯದಲ್ಲಿದ್ದ ವೈದ್ಯ ಡಾ.ಸಂದೀಪ್ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಪಟ್ಟಣದಲ್ಲಿರುವ ತನ್ನ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು, ಮಾತ್ರೆ ಸೇವಿಸಿ ಅಸ್ವಸ್ಥಗೊಂಡಿದ್ದ ವೈದ್ಯನನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-30.08.2023
ವೈದ್ಯ ಡಾ.ಸಂದೀಪ್ ಮದ್ಯವ್ಯಸನದ ದಾಸನಾಗಿದ್ದು, ಕರ್ತವ್ಯದ ವೇಳೆಯಲ್ಲೂ ಮದ್ಯಪಾನ ಮಾಡಿಕೊಂಡಿರುತ್ತಿದ್ದರು ಎಂದು ಆರೋಪಿಸಲಾಗಿದೆ. ಮದ್ಯಪಾನ ವ್ಯಸನಿಯಾಗಿದ್ದ ಡಾ.ಸಂದೀಪ್ ಪದೇಪದೇ ಕರ್ತವ್ಯಕ್ಕೆ ಗೈರಾಗುತ್ತಿದ್ದರು. ಈ ಕಾರಣಕ್ಕೆ ಕೊಪ್ಪ ತಾಲೂಕು ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಗಾನವಿ ಅವರು ಡಾ.ಸಂದೀಪ್ ಅವರಿಗೆ ಹಲವು ಬಾರಿ ನೋಟಿಸ್ ನೀಡಿದ್ದರೆಂದು ತಿಳಿದು ಬಂದಿದೆ.
ಈ ಮಧ್ಯೆ ಡಾ.ಸಂದೀಪ್ ವೈಯಕ್ತಿಕ ಕಾರಣದಿಂದ ಮಾನಸಿಕವಾಗಿ ನೊಂದಿದ್ದರು ಎಂದು ತಿಳಿದು ಬಂದಿದ್ದು, ಇದರಿಂದ ಬೇಸತ್ತ ಅವರು ಮಂಗಳವಾರ ಬೆಳಗ್ಗೆ ಬಾಳೆಹೊನ್ನೂರಿನಲ್ಲಿರುವ ತಮ್ಮ ಮನೆಯಲ್ಲಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂದು ತಿಳಿದು ಬಂದಿದೆ. ಸದ್ಯ ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವೈದ್ಯ ಡಾ.ಸಂದೀಪ್ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.













