ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಚುನಾವಣೆಗೆ ಸಂಬಂಧಿಸಿದಂತೆ ನಿರ್ದೇಶಕರಿಗೆ ಬೆದರಿಕೆ ಒಡ್ಡುತ್ತಿರುವ ವಿಧಾನ ಪರಿಷತ್ ಸದಸ್ಯರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಚುನಾವಣಾಧಿಕಾರಿಗೆ ಭಾನುವಾರ ದೂರು ಸಲ್ಲಿಸಿದ್ದಾರೆ.
ಇದನ್ನೂ ಓದಿ; ರಾಜ್ಯದ SC-ST ಪಂಗಡದವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ರಾಜಕೀಯ ಹಸ್ತಕ್ಷೇಪ ಮಾಡಿ ನೌಕರರಿಗೆ ಬೆದರಿಸುತ್ತಿದ್ದಾರೆ ಎಂದು ಜಿಲ್ಲಾಧ್ಯಕ್ಷ ಅಭ್ಯರ್ಥಿ ದೇವೇಂದ್ರ ಆರೋಪಿಸಿದ್ದಾರೆ.

ಆಯ್ಕೆಯಾದ ನಿರ್ದೇಶಕರಿಗೆ ಸರ್ಕಾರಿ ಕೆಲಸ ನಿರ್ವಹಿಸಲು ಬಿಡದೇ ಕರ್ತವ್ಯದ ಅವಧಿಯಲ್ಲಿ ಪದೇ ಪದೇ ಮನೆಗೆ ಕರೆದು ಬೆದರಿಕೆ ಹಾಕುತ್ತಿದ್ದು, ಆಣೆ ಪ್ರಮಾಣ ಮಾಡಿಸಿ ಬಲವಂತಪಡಿಸಲಾಗುತ್ತಿದೆ. ರೆಸಾರ್ಟ್ನಲ್ಲಿ ಕಡ್ಡಾಯವಾಗಿ ವಾಸ್ತವ್ಯ ಹೂಡುವ ಬೆದರಿಕೆ ಹಾಕಿದ್ದು, ಇದರಿಂದ ನೌಕರರು ನಿರ್ಭಯ ಮತದಾನ ಮಾಡಲು ಮುಜುಗರಪಡುವ ವಾತಾವರಣ ಸೃಷ್ಟಿಯಾಗಿದೆ.
ಇದನ್ನೂ ಓದಿ; ಕೃಷಿ ಯಂತ್ರಗಳ ಖರೀದಿಗೆ ಭಾರೀ ಸಬ್ಸಿಡಿ; ಹೀಗೆ ಅರ್ಜಿ ಸಲ್ಲಿಸಿ
ಚುನಾವಣೆಗೆ ಅಡ್ಡಿಪಡಿಸುತ್ತಿರುವ ವಿಧಾನ ಪರಿಷತ್ ಸದಸ್ಯರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ನಿರ್ಭಯವಾಗಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ; ರಾಜ್ಯದ SSLC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ; ಈ ವರ್ಷದ ಪ್ರಶ್ನೆಪತ್ರಿಕೆ ಕುರಿತು ಇಲ್ಲಿದೆ ನೋಡಿ ಡಿಟೈಲ್ಸ್













