ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಮಲೆನಾಡು ನಾಗರಿಕ ರೈತ ಹಿತ ರಕ್ಷಣೆ ವೇದಿಕೆಯು ಕ್ಷೇತ್ರ ಮಟ್ಟದ ಸಮಿತಿಯನ್ನು ರಚನೆ ಮಾಡಲಾಯಿತು.
ಮಲೆನಾಡಿನ ಜ್ವಲಂತ ಸಮಸ್ಯೆಗಳಾದ ಕಾಡು ಪ್ರಾಣಿಗಳ ದಾಳಿ, ಸೆಕ್ಷನ್ 4, ಡೀಮ್ಡ್ ಫಾರೆಸ್ಟ್, ಸಾಗುವಳಿ ಚೀಟಿ, ಹಕ್ಕುಪತ್ರ, ಕೃಷಿ ಸಂಬಂಧಿತ ರೋಗಗಳು, ಅಕೇಷಿಯಾ ಸೇರಿದಂತೆ ಮಲೆನಾಡಿನ ರೈತರು ಹಾಗೂ ನಾಗರಿಕರನ್ನು ಕಾಡುತ್ತಿರುವ ಹಲವಾರು ಜ್ವಲಂತ ಸಮಸ್ಯೆಗಳ ಕುರಿತು ನಿಷ್ಪಕ್ಷಪಾತವಾಗಿ ಹೋರಾಟ ರೂಪಿಸುವ ನಿಟ್ಟಿನಲ್ಲಿ ಈ ಸಮಿತಿಯನ್ನು ಪ್ರಾರಂಭಿಸಲಾಗಿದೆ.

ಇದನ್ನೂ ಓದಿ; ಮಹಿಳೆಯರಿಗೆ ಸಿಗಲಿದೆ ಬಡ್ಡಿ ಇಲ್ಲದೆ 5 ಲಕ್ಷಗಳ ಸಾಲ!;ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
ಈ ಸಮಿತಿಯ ಅಧ್ಯಕ್ಷರಾಗಿ ಎಮ್.ಎನ್ ನಾಗೇಶ್, ಉಪಾಧ್ಯಕ್ಷರಾಗಿ ನವಿನ್ ಕರಗಣೆ, ಗೌರವ ಸಲಹೆಗಾರರಾಗಿ ಎಸ್.ವಿ ಶಂಕರ್ ಕರಗಣೆ, ಗೌರವ ಅಧ್ಯಕ್ಷರಾಗಿ ರಾಯಪ್ಪಗೌಡ್ರು (ಅಡಿಕೆ ), ಪ್ರಧಾನ ಕಾರ್ಯದರ್ಶಿಯಾಗಿ ರಂಜಿತ್ ಶೃಂಗೇರಿ, ಕಾರ್ಯದರ್ಶಿಯಾಗಿ ಅಭಿಷೇಕ್ ಕೊಪ್ಪ, ಖಜಂಜಿಯಾಗಿ ಚಂದ್ರಶೇಖರ್ ರೈ, ಸಮಾಜಿಕ ಜಾಲತಾಣದ ನಿರ್ವಹಣೆಯಾಗಿ ಕಾರ್ತಿಕ್ ಕಾರ್ ಗದ್ದೆ, ಕಾನೂನು ಸಲಹೆಗಾರರಾಗಿ ರವೀಂದ್ರ ಕೆಸುವಿನಮನೆ, ಮಾಹಿತಿ ಸಂಗ್ರಹ ಸೂಚಕರಾಗಿ ರತ್ನಕರ್ ಗಡಿಗೇಶ್ವರ, ಪುರುಷೋತ್ತಮ್ ಕುಸ್ಕಲ್, ಧರ್ಮಪ್ಪ ಗೌಡ, ಹರ್ಷ, ಖಲಿಂ ಸದಸ್ಯರಾಗಿ ಕೆ.ಬಿ ಶ್ರೀನಿವಾಸ, ಕೆ.ಎಸ್ ಸಂದೇಶ್, ಸಂದೀಪ್ ಎಮ್.ಎಮ್, ಮಂಜು ಕುಂಬ್ರುಕೊಡು, ಶ್ರಿಕಂತ್ ಮುತ್ತಿನಕೊಪ್ಪ, ಶಮಂತ್ ಜಾಗ್ರ, ಮನೋಹರ್ ಮುತ್ತಿನಕೊಪ್ಪ ಅವರನ್ನು ಆಯ್ಕೆ ಮಾಡಲಾಯಿತು.
ಇದನ್ನೂ ಓದಿ; ಈ ಯೋಜನೆ ಅಡಿಯಲ್ಲಿ ಸಿಗಲಿದೆ 25,000 ಸಹಾಯಧನ!;ಯಾವ ಯೋಜನೆ, ಪ್ರಯೋಜನ ಪಡೆಯುವುದು ಹೇಗೆ?
ಮೂಡಿಗೆರೆ: ಎದುರಿನ ವಾಹನಕ್ಕೆ ರಸ್ತೆ ಬಿಟ್ಟುಕೊಡಲು ಸಾಧ್ಯವಾಗದೇ ಹಳ್ಳಕ್ಕೆ ಬಿದ್ದ ಕಾರು
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಕಿರಿದಾದ ಸೇತುವೆಯಲ್ಲಿ ಎದುರಿನಿಂದ ಬಂದ ವಾಹನಕ್ಕೆ ರಸ್ತೆಬಿಟ್ಟುಕೊಡಲು ಸಾಧ್ಯವಾಗದೇ ಕಾರೊಂದು ಹಳ್ಳಕ್ಕೆ ಮಗುಚಿ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ-ಗೆಂಡೇಹಳ್ಳಿ ರಸ್ತೆಯ ಕನ್ನಾಪುರ ಸಮೀಪದ ಬೊಮ್ಮೇನಹಳ್ಳಿ ಎಂಬಲ್ಲಿ ನಡೆದಿದೆ.
ಇದನ್ನೂ ಓದಿ; ಯಾವುದೇ ಗ್ಯಾರಂಟಿ ಬೇಕಿಲ್ಲ!; ಕೇಂದ್ರ ಸರ್ಕಾರದಿಂದಲೇ ಸಿಗುತ್ತೆ 2 ಲಕ್ಷ ಲೋನ್; ಹೇಗೆ? ಇಲ್ಲಿದೆ ಡಿಟೈಲ್ಸ್
ಅಧಿಕಾರಿಗಳ ನಿರ್ಲಕ್ಷ್ಯ, ಗ್ರಾಮಸ್ಥರ ಆಕ್ರೋಶ:
ಬೊಮ್ಮೇನಹಳ್ಳಿ ಸಮೀಪ ಹರಿಯುತ್ತಿರುವ ಹಳ್ಳಕ್ಕೆ ನಿರ್ಮಾಣ ಮಾಡಿರುವ ಸೇತುವೆ ಬಹಳ ಕಿರಿದಾಗಿದ್ದು, ವಾಹನಗಳು ಏಕಾಏಕಿ ಎದುರಾದಾಗ ಪರಸ್ಪರ ರಸ್ತೆ ಬಿಟ್ಟುಕೊಡಲು ಸಾಧ್ಯವಾಗುತ್ತಿಲ್ಲ. ಸೇತುವೆ ತುಂಬಾ ಕಿರಿದಾಗಿದ್ದು, ಸೇತುವೆಗೆ ಯಾವುದೇ ತಡೆಗೋಡೆಯನ್ನು ಕೂಡ ನಿರ್ಮಾಣ ಮಾಡಿಲ್ಲ. ಏಕಕಾಲದಲ್ಲಿ ಎರಡು ವಾಹನಗಳು ಎದುರಾದಾಗ ಅಪಘಾತಗಳು ಸಂಭವಿಸಿವೆ. ಇತ್ತೀಚೆಗೆ ಈ ರಸ್ತೆಯಲ್ಲಿ ವಾಹನ ದಟ್ಟಣೆ ಅಧಿಕವಾಗಿದ್ದು, ಈ ಸೇತುವೆ ಈಗಿನ ವಾಹನ ದಟ್ಟಣೆಗೆ ಸೂಕ್ತವಾಗಿಲ್ಲ. ಮಳೆಗಾಲದಲ್ಲಿ ಹೊಳೆಯ ನೀರು ಸೇತುವೆಯ ಮೇಲೆಯೇ ಉಕ್ಕಿ ಹರಿಯುತ್ತದೆ. ಜೊತೆಗೆ ಈ ಸೇತುವೆ ತಿರುವಿನಲ್ಲಿ ಇರುವುದರಿಂದ ಎದುರಿನಿಂದ ಬರುವ ವಾಹನಗಳ ಸೂಚನೆಯೂ ತಿಳಿಯುವುದಿಲ್ಲ. ಹಾಗಾಗಿ ಈ ಸೇತುವೆಯನ್ನು ಅಗಲೀಕರಣಗೊಳಿಸಿ ತಡೆಗೋಡೆ ಸಹಿತ ಉತ್ತಮ ಸೇತುವೆ ನಿರ್ಮಾಣ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸುತ್ತಲೇ ಬರುತ್ತಿದ್ದಾರೆ. ಆದರೆ, ಇದರ ಬಗ್ಗೆ ಜನಪ್ರತಿನಿಧಿಗಳು, ಅಧಿಕಾರಿಗಳು ಗಮನ ಹರಿಸಿಲ್ಲ. ಈ ಸೇತುವೆ ಮೇಲ್ದರ್ಜೆಗೆ ಏರಿಸುವ ಬಗ್ಗೆ ಸ್ಥಳೀಯ ಶಾಸಕರು ಗಮನಹರಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ; ಈ ಯೋಜನೆಯಡಿ ಪ್ರತಿ ತಿಂಗಳು 3000 ಹಣ; ಕೂಡಲೇ ಈ ಕೆಲಸ ಮಾಡಿ












