ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಏಳು ವರ್ಷಗಳ ಬಳಿಕ ದತ್ತಪೀಠ ಹೋರಾಟಗಾರರಿಗೆ ಸಮನ್ಸ್ ಜಾರಿ ಬೆನ್ನಲೇ, ಪೆಟ್ರೋಲ್ ಬಾಂಬ್ ಕೇಸ್ ಮಾಹಿತಿ ನೀಡುವಂತೆ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ; RBI ನಿಂದ ಉದ್ಯೋಗಾವಕಾಶ; ವಿವಿಧ ಪ್ರದೇಶಗಳಲ್ಲಿ ಮೆಡಿಕಲ್ ಕನ್ಸಲ್ ಟಂಟ್ಗಳ ನೇಮಕ

ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಮುಸ್ಲಿಂ ಭಯೋತ್ಪಾದಕರ ರಕ್ಷಣೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ದತ್ತಪೀಠದಲ್ಲಿ ಗೋರಿಗಳ ಧ್ವಂಸದ ಬಳಿಕ ಚಿಕ್ಕಮಗಳೂರು ಉದ್ವಿಗ್ನವಾಗಿತ್ತು. 2017 ಡಿಸೆಂಬರ್ 3ರ ರಾತ್ರಿ ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯಲ್ಲಿ ಪೆಟ್ರೋಲ್ ಬಾಂಬ್ ಪತ್ತೆಯಾಗಿತ್ತು. ಮಾರ್ಕೆಟ್ ರಸ್ತೆಯಲ್ಲಿ ತಿರುಗುತ್ತಿದ್ದ ಯುವಕರನ್ನು ಪೋಲಿಸರು ಬಂಧಿಸಿದ್ದರು. ಈ ಪ್ರಕರಣದ ಕೇಸ್ ಫೈಲ್ ಮಾಡದಂತೆ ಎಸ್ಪಿಯಾಗಿದ್ದ ಅಣ್ಣಾಮಲೈಗೆ ಕಾಂಗ್ರೆಸ್ ಸರ್ಕಾರ ಒತ್ತಡ ಹಾಕಿತ್ತು ಎಂಬ ಆರೋಪಗಳಿವೆ.
ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
ಚಿಕ್ಕಮಗಳೂರಿನಲ್ಲಿ ಸಿಕ್ಕ ಪೆಟ್ರೋಲ್ ಬಾಂಬ್ ಕೇಸ್ ಏನಾಯ್ತು? ಆ ಕೇಸ್ ಮತ್ತೆ ರೀ ಓಪನ್ ಆಗಿಲ್ಲ ಯಾಕೆ? ಇದೀಗ ಈ ಕೇಸ್ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡುವಂತೆ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಒತ್ತಾಯಿಸಿದ್ದಾರೆ.
ಜಯಪುರ: ಚಾಲಕನ ನಿಯಂತ್ರಣ ತಪ್ಪಿ ಅಯ್ಯಪ್ಪ ಮಾಲಾಧಾರಿಗಳ ಬಸ್ ಪಲ್ಟಿ
ಜಯಪುರ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಅಯ್ಯಪ್ಪ ಮಾಲಾಧಾರಿಗಳ ಬಸ್ ಪಲ್ಟಿಯಾಗಿರುವ ಘಟನೆ ಭಾನುವಾರ (ನಿನ್ನೆ) ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಗುಡ್ಡೆತೋಟದ ಬಳಿ ನಡೆದಿದೆ.
ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ












