ಚಿಕ್ಕಮಗಳೂರು ಜಿಲ್ಲೆಯಲ್ಲಿ ಡೆಂಗ್ಯೂ ತಾಂಡವವಾಡುತ್ತಿದ್ದು ಸುಮಾರು 350ಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ, ಇದೇ ಮೊದಲ ಬಾರಿಗೆ ಇಷ್ಟೊಂದು ಪ್ರಕರಣಗಳು ದಾಖಲಾಗಿವೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ

ಆದರೆ ಡೆಂಗ್ಯೂ ಜ್ವರಕ್ಕೆ ಕಾಫಿ ನಾಡು ಜನರು ತತ್ತರಿಸಿ ಹೋಗಿದ್ದರೂ, ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಜೆ ಜಾರ್ಜ್ ಅವರು ಜನರ ಬಳಿ ಸುಳಿದಿಲ್ಲ, ಜಿಲ್ಲೆಯಿಂದ ಸಂಪೂರ್ಣವಾಗಿ ನಾಪತ್ತೆಯಾಗಿದ್ದಾರೆ ಎಂದು ಎಂದು ಬಿಜೆಪಿ ಯುವಮೋರ್ಚಾ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಹರಿಬಿಟ್ಟು ಅಭಿಯಾನ ಮಾಡುತ್ತಿದೆ.



ಇದನ್ನೂ ಓದಿ: ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ ಉದ್ಯೋಗಾವಕಾಶ!; ಭರ್ಜರಿ ಸಂಬಳ.. ಅರ್ಹತೆಗಳೇನು..?
ಜಾರ್ಜ್ ಸಾಹೇಬ, ಮರೆತು ಹೋಯ್ತಾ – ನೀವೇ ಚಿಕ್ಕಮಗಳೂರು ಉಸ್ತುವಾರಿ ಸಚಿವ ಎಂಬ ಸಂದೇಶದೊಂದಿಗೆ ಅಭಿಯಾನ ನಡೆಸಲಾಗುತ್ತಿದೆ.
ಇದನ್ನೂ ಓದಿ: ಮಾರ್ಕೆಟ್ ನಲ್ಲಿ ಕರಡಿ ಮತ್ತು ಗೂಳಿಗಳ ಹಗ್ಗ ಜಗ್ಗಾಟ!; ಒಂದೇ ದಿನದಲ್ಲಿ 4% ಜಿಗಿತ ಕಂಡ GMRINFRA ಷೇರು
ತರೀಕೆರೆ: ಫಾಲ್ಸ್ ನಲ್ಲಿ ಕಾಲು ಜಾರಿ ಬಿದ್ದು ಪ್ರವಾಸಿಗ ಸಾವು
ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) ಫಾಲ್ಸ್ ನಲ್ಲಿ ಕಾಲು ಜಾರಿ ಬಿದ್ದು ಪ್ರವಾಸಿಗ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ಫಾಲ್ಸ್ ನಲ್ಲಿ ನಡೆದಿದೆ. ಹೈದರಾಬಾದ್ ಮೂಲದ ಯುವಕ ಶ್ರವಣ್ (25) ಮೃತ ದುರ್ದೈವಿ.
ಹೈದರಾಬಾದ್ ನಿಂದ ಕಾಫಿನಾಡಿಗೆ ಪ್ರವಾಸ ಕೈಗೊಂಡಿದ್ದ ಇಬ್ಬರು ಯುವಕರು, ಇಂದು ಬೆಳಿಗ್ಗೆ ಬೈಕ್ ನಲ್ಲಿ ಹೆಬ್ಬೆ ಫಾಲ್ಸ್ ಗೆ ತೆರಳಿದ್ದಾರೆ. ಹೆಬ್ಬೆ ಫಾಲ್ಸ್ ನಲ್ಲಿ ಸೆಲ್ಫಿ ತೆಗೆಯುವ ವೇಳೆ ಬಂಡೆ ಮೇಲಿಂದ ಕಾಲು ಜಾರಿ ಬಿದ್ದು ಯುವಕ ದಾರುಣವಾಗಿ ಸಾವನ್ನಪ್ಪಿದ್ದಾನೆ.
ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.













