ಜನಿವಾರ ತೆಗೆಸಿದ ಪ್ರಕರಣ: ದೌರ್ಜನ್ಯ ಎಸಗಿದ ಅಧಿಕಾರಿ ಶಿಕ್ಷಣ ಇಲಾಖೆ ಕ್ಷಮಾಪಣೆ ಕೇಳುವಂತೆ ಆಗ್ರಹ

ಜಯಪುರ: (ನ್ಯೂಸ್ ಮಲ್ನಾಡ್ ವರದಿ) ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿ ದೌರ್ಜನ್ಯವನ್ನು ಎಸಗಿದ ಅಧಿಕಾರಿಗಳನ್ನು ಅಮಾನತು ಮಾಡುವುದಲ್ಲದೆ ಶಿಕ್ಷಣ ಇಲಾಖೆಯು ಬ್ರಾಹ್ಮಣ ಸಮಾಜದ ಕ್ಷಮಾಪಣೆಯನ್ನು ಕೇಳಬೇಕೆಂದು ಶೃಂಗೇರಿ ಶಿಷ್ಯ ಮಲೆನಾಡು ಹೆಬ್ಬಾರ ಬ್ರಾಹ್ಮಣ ಮಹಾಸಭಾ (ರಿ.)ದ ಕೇಂದ್ರೀಯ ಆಡಳಿತ ಮಂಡಳಿ ಅಧ್ಯಕ್ಷರಾದ ವಿಜಯರಂಗ ಕೋಟೆತೋಟ ಆಗ್ರಹಿಸಿದರು.


ನ್ನೂ ಓದಿ: ಯಜಮಾನಿಯರಿಗೆ ಸಿಹಿಸುದ್ದಿ; ಫೆಬ್ರವರಿ, ಮಾರ್ಚ್ 2 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ


ಪತ್ರಿಕಾ ಹೇಳಿಕೆ ನೀಡಿದ ಅವರು, ಎರಡು ದಿನಗಳ ಹಿಂದೆ ರಾಜ್ಯದಾದ್ಯಂತ ನಡೆದ ವೃತ್ತಿಪರ ಕೋರ್ಸ್ಗಳ ಸಿ ಇ ಟಿ ಪರೀಕ್ಷೆಯ ದಿನದಂದು ಪರೀಕ್ಷಾ ಅಧಿಕಾರಿಗಳು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಿದ್ದಲ್ಲದೆ ತೆಗೆಯಲು ಒಪ್ಪದ ವಿದ್ಯಾರ್ಥಿಯೊಬ್ಬನಿಗೆ ಪರೀಕ್ಷೆಯಲ್ಲಿ ಕುಳಿತುಕೊಳ್ಳಲು ಅವಕಾಶವನ್ನೇ ನೀಡದ ಘಟನೆ ನಡೆದಿರುತ್ತದೆ. ಕೆಲವು ವಿದ್ಯಾರ್ಥಿಗಳ ಜನಿವಾರವನ್ನು ಕತ್ತರಿಸಿ ಹಾಕಿದ ಕೃತ್ಯವೂ ನಡೆದಿರುತ್ತದೆ. ಇಂತಹ ಅಮಾನವೀಯ ಕೃತ್ಯವನ್ನು ನಮ್ಮ ಸಮಾಜ ವಿರೋಧಿಸುತ್ತದೆ ಎಂದರು.


ನ್ನೂ ಓದಿ: ರೇಷನ್‌ ಕಾರ್ಡ್‌ ಹೊಂದಿರುವವರು ಈ ಸುದ್ದಿ ಓದಿ; ಆಹಾರ ಇಲಾಖೆಯಿಂದ ಮುಖ್ಯ ಮಾಹಿತಿ


ನಮ್ಮ ದೇಶದಲ್ಲಿ ಪ್ರತಿಯೊಬ್ಬರಿಗೂ ಧಾರ್ಮಿಕ ಸ್ವಾತಂತ್ರ್ಯ ಇರುತ್ತದೆ, ಬ್ರಾಹ್ಮಣ್ಯದ ಸಂಕೇತವಾಗಿರುವ ಜನಿವಾರವನ್ನು ಉಪನಯನದ ಸಂದರ್ಭದಲ್ಲಿ ಧರಿಸಿದ ನಂತರ ಸಾಯುವವರೆಗೂ ಇಟ್ಟುಕೊಳ್ಳಬೇಕಾಗುತ್ತದೆ. ಬೇರೆ ಬೇರೆ ಕಾರಣಗಳಿಗೆ ಮಧ್ಯದಲ್ಲಿ ಬದಲಾಯಿಸಬಹುದು ಅಷ್ಟೇ, ಜನಿವಾರವನ್ನು ತೆಗೆಸಿರುವ ಈ ಕೃತ್ಯ ಅತ್ಯಂತ ಹೀನಾಯ ಮತ್ತು ಬ್ರಾಹ್ಮಣರ ಮೇಲೆ ನಡೆದಿರುವ ದೌರ್ಜನ್ಯ ಎಂದೇ ಪರಿಗಣಿಸಬೇಕಾಗುತ್ತದೆ. ಇಂತಹ ಕೃತ್ಯ ಮುಂದೆ ಯಾವತ್ತೂ ನಡೆಯದಂತೆ ಬಂದೋಬಸ್ತ್ ಮಾಡುವಂತೆ ಆಗ್ರಹಿಸಿದ್ದಾರೆ. (ವರದಿ:- ಎಂ.ಪಿ.ಪ್ರದೀಪ್ ಹೆಬ್ಬಾರ್, ಜಯಪುರ)


ನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ 9970 ಹುದ್ದೆಗೆ ಅರ್ಜಿ ಆಹ್ವಾನ; 10th ವಿದ್ಯಾರ್ಹತೆ, ಆಕರ್ಷಕ ಸಂಬಳ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.